ವಿಷಯಕ್ಕೆ ಹೋಗಿ

ಬೇಕಾಬಿಟ್ಟಿ ಲೋಡ್ ಶೆಡ್ಡಿಂಗ್ :ವಿದ್ಯುತ್ ಬಳಕೆದಾರರ ವೇದಿಕೆಯಿಂದ ಉಗ್ರ ಹೋರಾಟದ ಎಚ್ಚರಿಕೆ

ನಗರ ಪ್ರದೇಶಗಳಿಗೆ ವಿದ್ಯುತ್ ಪೂರೈಕೆ ಮಾಡಲು ಪಟ್ಟಣ ಪ್ರದೇಶಗಳಲ್ಲಿ ಅನಗತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಿ ಹಾಗೂ ಪಟ್ಟಣ ಪ್ರದೇಶಗಳಿಗೆ ಸರ್ಕಾರ ನಿಗದಿ ಮಾಡಿರುವಂತೆ ವಿದ್ಯುತ್ ಪೂರೈಕೆ ಮಾಡಬೇಕು.ಇಲ್ಲದಿದ್ದಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹುಳಿಯಾರು ವಿದ್ಯುತ್ ಬಳಕೆದಾರರ ವೇದಿಕೆ ಎಚ್ಚರಿಕೆ ನೀಡಿದೆ.
ಹುಳಿಯಾರಿನ ಪರಿವೀಕ್ಷಣ ಮಂದಿರದಲ್ಲಿ ಹುಳಿಯಾರು ವಿದ್ಯುತ್ ಬಳಕೆದಾರರ ವೇದಿಕೆ ಅಧ್ಯಕ್ಷ ಎಲ್.ಆರ್.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿದ್ಯುತ್ ಸಮಸ್ಯೆ ಸಂಬಂಧ ವಿದ್ಯುತ್ ಬಳಕೆದಾರರ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.
ಹುಳಿಯಾರು ಸೇರಿದಂತೆ ತಾಲ್ಲೂಕಿನಾದ್ಯಂತ ವಿದ್ಯುತ್ ಸಮಸ್ಯೆ ಬಿಗಡಾಯಿಸಿದ್ದು ವಿದ್ಯುತ್ ಕಾಣುವುದೇ ಅಪರೂಪ ಎಂಬ ಪರಿಸ್ಥಿತಿ ಇದೆ.ಹುಳಿಯಾರಿನಲ್ಲಿ ವಿದ್ಯುತ್ ಮರುವಿತರಣ ಕೇಂದ್ರವಿದ್ದು
ಹುಳಿಯಾರು ಭಾಗಕ್ಕೆ 80 ಮೆಘಾವ್ಯಾಟ್ ವಿದ್ಯತ್ ಬಳಕೆಗೆ ಅಲೋಕೇಷನ್ ಇದ್ದರೂ ಕುಂಟು ನೆಪವೊಡ್ಡಿ ನಮ್ಮ ಭಾಗಕ್ಕೆ ನಿಗಧಿಯಾಗಿರುವ ವಿದ್ಯತ್ ಸರಬರಾಜು ಮಾಡದೆ ಕೇವಲ 40 ಮೆಘಾವ್ಯಾಟ್ ಹರಿಸಿ ಉಳಿಕೆ 40 ಮೆಘಾವ್ಯಾಟ್ ವಿದ್ಯುತ್ ಅನ್ನು ನಗರ ಪ್ರದೇಶಗಳಿಗೆ ಸಪ್ಲೈ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 2 ಲಕ್ಷದಷ್ಟು ವಿದ್ಯುತ್ ಗ್ರಾಹಕರಿದ್ದು ಇವರಲ್ಲಿ ಬಹುತೇಕ ಮಂದಿ ಪಂಸ್ ಸೆಟ್ ಆಧಾರಿತ ಕೃಷಿಕರು ಹಾಗೂ ವಿದ್ಯುತ್ ಅವಲಂಭಿತ ಉದ್ದಿಮೆದಾರರಾಗಿದ್ದಾರೆ. ಎಲ್ಲ ಗ್ರಾಮಗಳಲ್ಲೂ ವಿದ್ಯುತ್ ಸಹಕಾರದಿಂದಲೇ ಕುಡಿಯುವ ನೀರು ಸರಬರಾಜು ಮಾಡಬೇಕಿದ್ದು ಅಧಿಕಾರಿಗಳು ಕಾನೂನು ಉಲ್ಲಂಘಿಸಿ ವಿದ್ಯುತ್ ವ್ಯತ್ಯಯ ಮಾಡುತ್ತಿರುವುದರಿಂದ ಜನರ ಜೀನವ ನಿರ್ವಹಣೆಗೆ ತೊಡಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹುಳಿಯಾರು ಪಟ್ಟಣದ ಶೇ.99 ರಷ್ಟು ಕಮರ್ಷಿಯಲ್ ವಿದ್ಯುತ್ ಗ್ರಾಹಕರಿದ್ದು ಇಲಾಖೆಗೆ ಲಾಭ ತಂದುಕೊಡುವವರಾಗಿದ್ದಾರೆ ಹಾಗೂ ಯಾವುದೇ ಬಾಕಿ ಉಳಿಸದೆ ನಿರಂತರವಾಗಿ ಬಿಲ್ ಪಾವತ್ತಿಸುವವರಾಗಿದ್ದಾರೆ. ಮೂನ್ಸೂಚನೆ ಇಲ್ಲದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡುತ್ತಿರುವುದರಿಂದ ಅವರ ಕೆಲಸ-ಕಾರ್ಯಗಳಿಗೆ ತೊಡಕಾಗಿದೆ. ಹಾಗಾಗಿ ಸರ್ಕಾರ ನಿಗಧಿ ಮಾಡಿರುವ 4 ಗಂಟೆ ಲೋಡ್ ಶೆಡ್ಡಿಂಗ್ ಸಮಯ ನಿಗಧಿ ಮಾಡಬೇಕು ಹಾಗೂ ಉಳಿದಂತೆ 20 ಗಂಟೆ ನಿರಂತರವಾಗಿ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕೈಗಾರಿಕ ಪ್ರದೇಶವಾದ ತುಮಕೂರು, ಕುಣಿಗಲ್, ಮಧುಗಿರಿಗಳಲ್ಲಿ ಮಾತ್ರ ವಿದ್ಯುತ್ ಸೇವೆ ಉತ್ತಮವಾಗಿದ್ದು ಚಿ.ನಾ.ಹಳ್ಳಿ ಭಾಗಕ್ಕೆ ಮಾತ್ರ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಿ ಈ ತಾರತಮ್ಯ ನೀತಿ ಏಕೆ ಎಂದು ಪ್ರಶ್ನಿಸಿದ ವಿದ್ಯುತ್ ಬಳಕೆದಾರರು ನಿಯಮಾನುಸಾರ ಹುಳಿಯಾರಿನ ಮರು ವಿತರಣಾ ಕೇಂದ್ರಕ್ಕೆ ನಿರಂತರ ವಿದ್ಯುತ್ ಸರಬರಾಜು ನೀಡಿ ಆ ಕೇಂದ್ರದಿಂದಲೇ ಲೋಡ್ ಶೆಡ್ಡಿಂಗ್ ಮಾಡಬೇಕಿರುತ್ತದೆ. ಆದರೆ ಕೆ.ಬಿ.ಕ್ರಾಸ್ ನ ವಿತರಣಾ ಕೇಂದ್ರದಲ್ಲಿಯೇ ಲೋಡ್ ಶೆಡ್ಡಿಂಗ್ಗೆ ಮುಂದಾಗುವುದು ಎಷ್ಟು ಸರಿ ಎಂದಿದ್ದಾರೆ.
ಸಭೆಯಲ್ಲಿ ಹಿಟ್ಟಿನ ಮಿಲ್ ಸಂಘದ ನಾಗಪ್ರಸಾದ್, ಎನ್ಐಐಟಿ ಪ್ರಭು, ಸ್ಟುಡಿಯೋ ಸಂಘದ ಸುದರ್ಶನ್, ಸಾಮಿಲ್ ಸಂಘದ ಆರೀಫ್,ಎಚ್.ಎಂ.ಶ್ರೀನಿವಾಸಚಾರ್,ಟಿ.ಎನ್.ತಮ್ಮಯ್ಯ, ಆಯಿಲ್ ಮಿಲ್ ಸಂಘದ ಸುದೀರ್, ಎಚ್.ಎಸ್.ವೆಂಕಟೇಶ್, ನಾರಿನ ಕೈಗಾರಿಕೆ ಸಂಘದ ಎಸ್ಎಸ್ಆರ್ ದಯಾನಂದ್, ಸೈಯದ್ ಸಮೀಉಲ್ಲಾ, ನಿಂಗಪ್ಪ, ಮಹೇಶ್, ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...