ವಿಷಯಕ್ಕೆ ಹೋಗಿ

ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ


ಬೋರನಕಣಿವೆ ಜಲಾಶಯಕ್ಕೆ ನದಿ ನೀರು ಹರಿಸಲು ಒತ್ತಾಯಿಸಿ ಫೆಬ್ರವರಿ 15 ರಂದು ಹುಳಿಯಾರ್ ಬಂದ್
------------------------- ---------------------------------------------------------
ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಕೆರೆಗಳ ಮೂಲಕ ನೈಸರ್ಗಿಕವಾಗಿ ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡಲು ರೈತ ಸಂಘ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳು ನಿರ್ಧರಿಸಿವೆ.
ಹುಳಿಯಾರಿನ ಪ್ರವಾಸಿ ಮಂದಿರಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಈ ಸಂಬಂಧ ಕರೆಯಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ಬಂದ್ ನ ಭಾರಿ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರ ತಮ್ಮ ನಿಲುವು ಪ್ರಕಟಿಸದಿದ್ದಲ್ಲಿ ತಾಲೂಕು ಕಛೇರಿಗೆ ಪಾದಯಾತ್ರೆ, ವಿಧಾನಸೌಧಕ್ಕೆ ಬೈಕ್ ರಾಲಿ ಹಾಗೂ ಇಲ್ಲಿನ ನಾಡ ಕಛೇರಿ ಮುಂದೆ ಆಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ಮತ್ತೊಷ್ಟು ಒತ್ತಡ ತರಲು ತೀರ್ಮಾನಿಸಲಾಯಿತು.
ಚಿಕ್ಕನಾಯಕನಹಳ್ಳಿ ತಾಲೂಕಿಗೆ ಯಾವುದೇ ನೀರಾವರಿ ಸೌಲಭ್ಯ ಇಲ್ಲದೆ ಮಳೆ ಹಾಗೂ ಅಂತರ್ಜಲ ನಂಬಿ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಿಲ್ಲ, ಅಂತರ್ಜಲವೂ ಸಹ ಕುಸಿತವಾಗಿ ಸಾವಿರ ಅಡಿ ಕೊರೆದರೂ ನೀರು ಸಿಗದಂತಾಗಿದೆ ಇಲ್ಲಿನ ಜನಜೀವನದ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಈ ಭಾಗಕ್ಕೆ ನದಿ ಮೂಲದ ನೀರು ಹರಿಯುವ ಹೊರತು ಉಳಿಗಾಲವಿಲ್ಲ ಎಂದು ನಿರ್ಧರಿಸಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗಿದ್ದರೂ ಹಿಂದಿನ ಸರ್ಕಾರಗಳು ಈ ಭಾಗವನ್ನು ನಿರ್ಲಕ್ಷ್ಯವಹಿಸಿದ್ದವು.
ಹಾಗಾಗಿ ಇತ್ತೀಚಿನ ದಿನಗಳಲ್ಲಿ ಹೋರಾಟವನ್ನು ತೀವ್ರ ಗೊಳಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ, ವಿವಿಧ ಪಕ್ಷಗಳ ಹಾಗೂ ರಾಜಕಾಣಿಗಳ ನಾಯಕತ್ವದಲ್ಲಿ, ರೈತ ಸಂಘ ಹಾಗೂ ಮೂವತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಮುಂದಾಳತ್ವದಲ್ಲಿ ಹೀಗೆ ಅನೇಕ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ ಹಾಗೂ ಪಟ್ಟಣ ಬಂದ್ ಸಹ ಮಾಡಲಾಗಿತ್ತಲ್ಲದೆ ಇಲ್ಲಿನ ನಾಡಕಛೇರಿ ಬಳಿ ಬರೋಬರಿ ನಲ್ವತಕ್ಕೂ ಹೆಚ್ಚು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸುವ ಮೂಲಕ ಸಕರ್ಾರದ ಮೇಲೆ ಮತ್ತೊಷ್ಟು ಒತ್ತಡ ತರಲಾಯಿತು.
ಪರಿಣಾಮ ಜಿಲ್ಲಾ ಉಸ್ತುವಾರಿ ಸಚಿವರೆ ಖುದ್ದು ಧರಣಿ ಸ್ಥಳಕ್ಕೆ ಆಗಮಿಸಿ ನೀರು ಹರಿಸುವ ಭರವಸೆ ನೀಡಿದರಲ್ಲದೆ ಧರಣಿ ನಿರತ ಮುಖ್ಯಸ್ಥರನ್ನು ವಿಧಾನಸೌಧಕ್ಕೆ ಆಹ್ವಾನಿಸಿ ನೀರಾವರಿ ಸಚಿವ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬೋರನಕಣಿವೆ ಜಲಾಶಯಕ್ಕೆ ಹೇಮಾವತಿ ನೀರು ಹರಿಸುವ ಸಲುವಾಗಿ 3 ದಿಂಗಳ ಕಾಲಾವಕಾಶ ಕೋರಿ ಸವರ್ೆ ಕಾರ್ಯಕ್ಕೆ ಸ್ಥಳದಲ್ಲಿಯೇ ಆದೇಶ ನೀಡಿದರು.
ಆದರಂತೆ ಈಗಾಗಲೇ ಸರ್ವೆ ಕಾರ್ಯ ಮುಗಿದಿರುವುದು ಹೋರಾಟಕ್ಕೆ ಸಂದ ಜಯವಾಗಿದ್ದರೂ ಕೂಡ ಸಕರ್ಾರ ಪಡೆದಿದ್ದ 3 ತಿಂಗಳ ಕಾಲಾವಕಾಶ ಮೀರಿಹೋಗಿದೆ. ಆದರೂ ನೀರು ಹರಿಸುವ ಸಂಬಂಧ ಈ ಭಾಗಕ್ಕೆ ನಿಗಧಿ ಪಡಿಸಿದ ನೀರಿನ ಪ್ರಮಾಣ, ಯೋಜನ ವೆಚ್ಚ ಹಾಗೂ ಮಾದರಿಯನ್ನು ಘೋಷಿಸಿ ಕಾಮಕಾರಿಗೆ ಟೆಂಡರ್ ಕರೆಯದೆ ಮತ್ತೊಮ್ಮೆ ನಿರ್ಲಕ್ಷ್ಯ ಧೋರಣೆ ತಾಳಿರುವ ಪರಿಣಾಮ ಎಚ್ಚರಗೊಳಿಸುವ ಸಲುವಾಗಿ ಅನಿವಾರ್ಯವಾಗಿ ಹುಳಿಯಾರ್ ಬಂದ್ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ತಿಳಿಸಿದರು.
ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತಿಶ್, ಜಿಲ್ಲೆಯ ಹೆಸರಾಂತ ಹೃದಯ ತಜ್ಞ ಹಾಗೂ ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ, ರೈತ ಸಂಘದ ಕೆ.ಪಿ.ಮಲ್ಲೇಶ್, ಚಿಕ್ಕನಾಯಕನಹಳ್ಳಿ ಪುರಸಭೆ ಸದಸ್ಯ ಸಿ.ಡಿ.ಚಂದ್ರಶೇಖರ್, ಕರವೇ ಅಧ್ಯಕ್ಷ ಸಿ.ಟಿ.ಗುರುಮೂರ್ತಿ, ವರ್ತಕರ ಸಂಘದ ನಟರಾಜ್, ಏಜೆಂಟರ ಸಂಘದ ಲೋಕೇಶ್, ಹುಳಿಯಾರು ಕರವೇಯ ರಂಗಸ್ವಾಮಿ, ಕೋಳಿ ಶ್ರೀನಿವಾಸ್, ವಿಪ್ರ ಸಂಘದ ವಿಶ್ವನಾಥ್, ಟಿಪ್ಪು ಸಂಘದ ಅಪ್ಸರ್, ಜಯಕನರ್ಾಟಕದ ಎಚ್.ಎನ್.ವೆಂಕಟೇಶ್, ಛಾಯಾಗ್ರಹಕರ ಸಂಘದ ಎ.ಡಿ.ತಂಡವಾಚಾರ್, ದುರ್ಗಾ ಪರಮೇಶ್ವರಿ ಸಂಘದ ಪೈಲ್ವಾನ್ ಜಯಣ್ಣ, ಜಯಲಕ್ಷ್ಮಮ್ಮ, ಬೈರಮ್ಮ, ಸಿದ್ರಾಮಕ್ಕ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೂರಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
ಸುದ್ಧಿಗೆ ಸಂಬಂಧಿಸಿದ ಪೋಟೊ ಕೂಡ ಇದೆ
ಫೋಟೊ ವಿವರ : ಹುಳಿಯಾರು ಹೋಬಳಿ ಬೋರನಕಣಿವೆ ಜಲಾಶಯಕ್ಕೆ ನದಿ ಮೂಲದ ನೀರು ಹರಿಸಲು ಒತ್ತಾಯಿಸಿ ಹುಳಿಯಾರ್ ಬಂದ್ಗೆ ಕರೆ ನೀಡುವ ಸಲುವಾಗಿ ಪ್ರತಿಕಾಗೋಷ್ಠಿ ನಡೆಸಿದರು. ಕೆಂಕೆರೆ ಸತಿಶ್, ಡಾ.ಪರಮೇಶ್ವರಪ್ಪ, ಸಿ.ಡಿ.ಚಂದ್ರಶೇಖರ್, ಸಿ.ಟಿ.ಗುರುಮೂರ್ತಿ, ನಟರಾಜ್, ಲೋಕೇಶ್ ಮತ್ತಿತರರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...