ವಿಷಯಕ್ಕೆ ಹೋಗಿ

18 ತಿಂಗಳಲ್ಲೆ ಕರುವಿಗೆ ಜನ್ಮ


ಕೇವಲ 18 ತಿಂಗಳಲ್ಲಿಯೇ ಎಚ್ಎಫ್ (ಮಿಶ್ರತಳಿ) ಹಸುವೊಂದು ಕರುವಿಗೆ ಜನ್ಮ ನೀಡಿದ ಅಪರೂಪದ ಸಂಗತಿ ಹುಳಿಯಾರು ಹೋಬಳಿ ಕಂಪನಹಳ್ಳಿ ಗ್ರಾಮದಲ್ಲಿ ದಾಖಲಾಗಿದೆ.
ಸಾಮಾನ್ಯವಾಗಿ ಹಸುಗಳು 18 ತಿಂಗಳಿಗೆ ಪ್ರೌಢಾವಸ್ಥೆ ತಲುಪಿ ಅಲ್ಲಿಂದ 9 ತಿಂಗಳ ನಂತರ ಅಂದರೆ 27 ತಿಂಗಳಿಗೆ ಕರುವಿಗೆ ಜನ್ಮ ನೀಡುತ್ತವೆ. ಆದರೆ ಕಂಪನಹಳ್ಳಿ ಕೆ.ಡಿ.ರಂಗನಾಥ್ ಅವರ ಹಸು ಮಾತ್ರ ಕೇವಲ 9 ತಿಂಗಳಲ್ಲೇ ಪ್ರೌಢಾವಸ್ಥೆ ತಲುಪಿ 18 ತಿಂಗಳಿಗೆ ಮೊದಲನೇ ಕರುವಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣವಾಗಿದೆ.
ಇಲ್ಲಿನ ಪಶು ಆಸ್ಪತ್ರೆ ವ್ಯಾಪ್ತಿಯಲ್ಲಿ ಇದುವರೆವಿಗೂ ಹೆಚ್ಚಾಗಿ ಹಸುಗಳಲ್ಲಿ ಅನೀಮಿಯ, ಲವಣಾಂಶದ ಕೊರತೆ, ಜೀವಸತ್ವದ ಕೊರತೆ ಹಾಗೂ ಜಂತು ಹುಳು ಬಾದೆ ಕಂಡುಬಂದು 18 ತಿಂಗಳಾದರೂ ಪ್ರೌಢಾವಸ್ಥೆ ತಲುಪುತ್ತಿರಲಿಲ್ಲ. ಅಲ್ಲೊಂದು ಇಲ್ಲೊಂದರಂತೆ ಎಚ್ಎಫ್ ಹಸುಗಳು 11 ರಿಂದ 12 ತಿಂಗಳಲ್ಲಿ ಪ್ರೌಢಾವಸ್ಥೆ ತಲುಪಿ ಕರು ಹಾಕಿದ್ದು ಕಂಡುಬಂದಿದ್ದು ಕೇವಲ 9 ತಿಂಗಳಲ್ಲೇ ಪ್ರೌಢಾವಸ್ಥೆ ತಲುಪಿ 18 ತಿಂಗಳಲ್ಲಿ ಕರುಹಾಕಿರುವುದು ಇದೇ ಮೊದಲನೇಯದಾಗಿದೆ.
ಹೆಚ್ಚು ಗಿಣ್ಣದ ಹಾಲು ಕುಡಿಸಿರುವುದು, ಉತ್ತಮ ಹಿಂಡಿ, ಬೂಸ, ಹಸಿರು ಮೇವು ಕೊಟ್ಟಿರುವುದು ಹಾಗೂ ಕಾಲಕಾಲಕ್ಕೆ ಜಂತುನಾಶಕ ಔಷಧಿ ಹಾಕಿಸಿರುವುದು, ಅಲ್ಲದೆ ದನದಕೊಟ್ಟಿಗೆಯನ್ನು ಸ್ವಚ್ಚವಾಗಿ ಇಟ್ಟು ಬೆಳೆಸಿರುವುದರಿಂದ ಬಹು ಬೇಗ ಹಸು ಪ್ರೌಢಾವಸ್ಥೆ ತಲುಪಿ ಕರು ಹಾಕಿದೆ ಎಂದು ಇಲ್ಲಿನ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಹಾಗೂ ಈ ಹಸು ಸಾಕಾಣಿಕೆಯ ಮಾರ್ಗದರ್ಶಕರಾದ ಡಾ.ಜೆ.ಸಿ.ಮಂಜುನಾಥ್ ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.