ವಿಷಯಕ್ಕೆ ಹೋಗಿ

ರೈತ ಸಂಘಕ್ಕೆ ಪ್ರಾಮಾಣಿಕರೆ ಬೆನ್ನೆಲುಬು: ರಂಗಸ್ವಾಮಿ


ರೈತ ಸಂಘದ ಧ್ಯೇಯದ ಬಗ್ಗೆ ಲವಲೇಶವು ಅರಿಯದ ಕೆಲವರು ಹಣ ಗಳಿಸುವ ಸಲುವಾಗಿ ಹಸಿರು ಟವಲ್ ಹಾಕುತ್ತಿದ್ದಾರೆ. ರಸ್ತೆ, ನೀರಾವರಿ, ವಿದ್ಯುತ್ ಮುಂತಾದ ಮೂಲಸೌಲಭ್ಯ ಪಡೆದು ಅಭಿವೃದ್ಧಿ ಹೊಂದುವುದು ರೈತ ಸಂಘದ ನಿಜವಾದ ಧ್ಯೇಯ. ಈ ನಿಟ್ಟಿನಲ್ಲಿ ಕೌರವರ ರೀತಿ 100 ಮಂದಿ ವಂಚಕರನ್ನು ಸಂಘಕ್ಕೆ ಸೇರಿಸಿಕೊಳ್ಳುವುದ ಬಿಟ್ಟು ಪ್ರಾಮಾಣಿಕತೆ, ನಿಷ್ಠೆ, ತತ್ವವುಳ್ಳ ಐದೇಐದು ಮಂದಿ ಪಾಂಡವರಂತಹವರನ್ನು ಸೇರಿಸಿಕೊಳ್ಳುವುದು ಒಳಿತು ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಸೋಮಗುದ್ದ ರಂಗಸ್ವಾಮಿ ಅವರು ಅಭಿಪ್ರಾಯ ಪಟ್ಟರು.
ಕಂದಿಕೆರೆ ಹೋಬಳಿ ಗಂಟೇನಹಳ್ಳಿಯಲ್ಲಿ ನಡೆದ ಕಂದಿಕೆರೆ ಹೋಬಳಿ ರೈತರ ಸಮಾವೇಶವನ್ನು ಸಸಿಗಳಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ರಾಜಕಾರಣಿಗಳು ಊರಿಗೆ ಬಂದಾಗ ಕೈಮುಗಿದು ಆರತಿ ಎತ್ತಿ ಸ್ವಾಗತಿಸಿ ಜೈಕಾರ ಕೂಗಿ ಮೆರವಣಿಗೆ ಮಾಡಿ ಭೂರಿ ಭೋಜನ ಮಾಡಿಸಿ ಕಳುಹಿಸುವುದು ರೈತರ ಬಹುದೊಡ್ಡ ದೌರ್ಬಲ್ಯ. ರಾಜಕಾರಣಿಗಳಿಂದ ನಾವಲ್ಲ, ನಮ್ಮಿಂದ ರಾಜಕಾರಣಿಗಳು ಎಂಬ ಸತ್ಯ ಅರಿತು ಅವರನ್ನು ನಿರ್ಲಕ್ಷ್ಯಿಸಿದಲ್ಲಿ ಅವರೇ ನಮ್ಮ ಮನೆ ಬಾಗಿಲಿಗೆ ಬಂದು ನಮ್ಮಗಳ ಕೆಲಸ ಮಾಡಿಕೊಡುತ್ತಾರೆ ಎಂದರು.
ರಾಜ್ಯ ಹಸಿರು ಸೇನೆ ಅಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ ರಾಜ್ಯ ರೈತ ಸಂಘವು ರಾಜ್ಯದ ಅಷ್ಟೂ ರೈತ ಸಮುದಾಯದ ಹಿತ ಕಾಪಾಡುವ ಸಲುವಾಗಿದ್ದು ರೈತರ ವಾಹನ, ಮನೆ, ದಿನಸಿಯನ್ನು ಸಾಲಗಾರರು ಜಪ್ತಿ ಮಾಡಲು ಮುಂದಾದಲ್ಲಿ, ಅಧಿಕಾರಿಗಳು ಅನಗತ್ಯ ಕಿರುಕುಳ ನೀಡಿದಲ್ಲಿ ಪ್ರಾಣವನ್ನಾದರೂ ಒತ್ತೆ ಇಟ್ಟು ತಮ್ಮ ರಕ್ಷಣೆಗೆ ನಿಲ್ಲುತ್ತೇವೆ. ಹಾಗಾಗಿ ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆಯ ನಿರ್ಧಾರ ಕೈಗೊಳ್ಳಬಾರದು ಎಂದರಲ್ಲದೆ ಚೀನ ಸರ್ಕಾರ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಹಸು ಸಾಕಾಣಿಕೆಗಾಗಿ ಪ್ರತಿ ದಿನ 100 ರು. ಸಹಾಯ ಧನ ಹಾಗೂ ರೈತನ ಬೆಳೆಗೆ ತಕ್ಕುದಾದ ವೈಜ್ಞಾನಿಕ ಬೆಲೆ ನೀಡು ನೀಡುವುದಲ್ಲದೆ, ಬೆಳೆ ನಷ್ಠವಾದಲ್ಲಿ ವೆಚ್ಚದ ಅರ್ಧದಷ್ಟು ಹಣವನ್ನು ಪುಕ್ಕಟ್ಟೆ ನೀಡಿ ಪ್ರೋತ್ಸಾಹಿಸುತ್ತಿದ್ದು ಭಾರತದಲ್ಲೂ ಈ ರೀತಿಯ ರೈತ ಪರ ನಿಲುವನ್ನು ರಾಜಕಾರಣಿಗಳು ಪ್ರಕಟಿಸಬೇಕು ಆಗ್ರಹಿಸಿದರು.
ಚಿ.ನಾ.ಹಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಪಿ.ಮಲ್ಲೇಶ್ ಅವರು ಮಾತನಾಡಿ ಇಂದಿನ ಎಲ್ಲಾ ಸರ್ಕಾರಗಳು ತಮಿಳಿಗರನ್ನು ಓಲೈಸುವ ಸಲುವಾಗಿ ಕನ್ನಡಿಗರಿಗೆ ಮೋಸ ಮಾಡಿ ಮೂಲ ಒಪ್ಪಂದಕ್ಕಿಂತ ಹೆಚ್ಚಾಗಿ ಪ್ರತಿವರ್ಷ 100 ಟಿ.ಎಂ.ಸಿ ಕಾವೇರಿ ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ. ಸರ್ಕಾರಕ್ಕೆ ರೈತರ ಮೇಲೆ ನಿಜವಾದ ಕಾಳಜಿಯಿದ್ದರೆ ಹೆಚ್ಚುವರಿಯಾಗಿ ಬಿಡುವ ನೀರನ್ನು ಇಲ್ಲಿನ ಬರಪೀಡಿತ ಪ್ರದೇಶಗಳಿಗೆ ಹರಿಸಿ ರೈತರ ಕೃಷಿಗೆ ಅನುಕೂಲ ಮಾಡಬೇಕು. ಅಲ್ಲದೆ ಕಡಿಮೆ ಭೂಮಿಯಲ್ಲಿ ಹೆಚ್ಚು ಬೆಳೆ ಬೆಳೆಯುವ ರೈತರಿಗೆ ಈ ಹಿಂದೆ ಇದ್ದ 1 ಲಕ್ಷ ಪ್ರಶಸ್ತಿಯನ್ನು 30 ಸಾವಿರಕ್ಕೆ ಇಳಿಸಲಾಗಿದ್ದು ಕೂಡಲೇ ಈ ಹಣವನ್ನು ಹೆಚ್ಚಿಸಬೇಕು ಎಂದರು.
ಹುಳಿಯಾರು ಹೋಬಳಿ ರೈತ ಸಂಘದ ಅಧ್ಯಕ್ಷ ತಮ್ಮಡಿಹಳ್ಳಿ ಮಲ್ಲಿಕಣ್ಣ ಅವರು ಮಾತನಾಡಿ ಜಯಚಂದ್ರ ಅವರಿಗೆ ರಾಜಕೀಯವಾಗಿ ಸಾಕಿಬೆಳೆಸಿ ಮಂತ್ರಿಗಿರಿ ಕೊಡಿಸಿದ ಹುಳಿಯಾರು ಭಾಗದಲ್ಲಿ ಹೇಮೆಗಾಗಿ ಹೋರಾಟ ನಡೆಯುತ್ತಿದ್ದರೂ ಸಹ ಈ ಕಡೆ ತಿರುಗಿಯೂ ಸಹ ನೋಡದೆ ಮದಲೂರು ಕೆರೆಗೆ ನೀರು ತೆಗೆದುಕೊಂಡು ಹೋಗಲು ಕೇಂದ್ರದಿಂದ ಹಣ ಬಿಡುಗಡೆ ಮಾಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರಲ್ಲದೆ ನಮ್ಮ ಬದುಕಿಗೆ ಅತ್ಯಗತ್ಯವಾದ ನೀರು, ಕರೆಂಟ್, ಟಿಸಿ, ರಸ್ತೆ ಹೀಗೆ ಪ್ರತಿಯೊಂದು ಮೂಲಭೂತ ಸೌಲಭ್ಯಕ್ಕೂ ನಾವುಗಳೆ ಹೋರಾಟ ಮಾಡಿ ಪಡೆದುಕೊಳ್ಳಬೇಕೆಂದಾದಲ್ಲಿ ಜನಪ್ರತಿನಿದಿಗಳು ಏಕೆ ಬೇಕು ಎಂದು ಪ್ರಶ್ನಿಸಿದರು.
ಸಮಾರಂಭದಲ್ಲಿ ತಾಲೂಕು ರೈತ ಸಂಘದ ಉಪಾಧ್ಯಕ್ಷ ಎ.ಬಿ.ಪ್ರಕಾಶಯ್ಯ, ಟ್ರಾಕ್ಟರ್ ಮಾಲೀಕರ ಸಂಘದ ಅಧ್ಯಕ್ಷ ಕಾಡಿನರಾಜ ನಾಗರಾಜು, ಗಂಗಣ್ಣ, ಹೂವಿನ ಬಸವರಾಜು, ಗಂಟೇಹಳ್ಳಿ ರೈತ ಸಂಘದ ಬಿ.ಕೆ.ಲೋಕೇಶ್, ಜಿ.ಮುದ್ದರಂಗಯ್ಯ, ಬುಡೇನ್ ಸಾಬ್, ಜಿ.ಆರ್.ವಸಂತಕುಮಾರ್, ಬಿ.ಎಂ.ಗಜೇಂದ್ರ ಬಿ.ಕೆ.ಕುಮಾರಯ್ಯ ಮತ್ತಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...