ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಯುಗಾದಿ ಆಚರಣೆ


ಹುಳಿಯಾರಿನಲ್ಲಿ ಸಂಭ್ರಮದ ಯುಗಾದಿ ಆಚರಣೆ
ಹೊಸವರ್ಷಕ್ಕೆ ಮುನ್ನುಡಿಯಾಗಿರುವ ಹಿಂದೂ ಸಂಪ್ರದಾಯದ ಪ್ರಮುಖ ಹಾಗೂ ವಿಕೃತಿನಾಮ ಸಂವತ್ಸರದ ಮೊದಲ ದಿನವಾದ ಯುಗಾದಿ ಹಬ್ಬವನ್ನು ಮಂಗಳವಾರದಂದು ಹುಳಿಯಾರಿನಲ್ಲಿ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಂಪ್ರದಾಯದಂತೆ ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಮನೆಮಂದಿಯೆಲ್ಲ ಅಭ್ಯಂಜಯ ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಜೀವನದಲ್ಲಿ ಕಷ್ಟಸುಖ ಸಮನಾಗಿ ಸ್ವೀಕಸಬೇಕೆಂಬ ಸಂಕೇತ ಸಾರುವ ಬೇವು-ಬೆಲ್ಲ ಸೇವಿಸಿದರು. ಸಂಜೆ ಕುಟುಂಬದೊಡನೆ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಹಬ್ಬದ ಪ್ರಯುಕ್ತ ಇಲ್ಲಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ವಾಸವಿ ಹಾಗೂ ಬನಶಂಕರಿ ದೇವಾಲಯಗಳಲ್ಲಿ ಸಾಮೂಹಿಕ ಪಂಚಾಂಗ ಶ್ರವಣ ನಡೆಯಿತು. ನೂರಾರು ಮಂದಿ ಈ ವರ್ಷದ ಭವಿಷ್ಯಮ ಮಳೆ-ಬೆಳೆ, ಗ್ರಹ-ನಕ್ಷತ್ರಗಳ ಬಲಾಬಲ, ಮನೆಯ ಮಂದಿಯ ಭವಿಷ್ಯ ಕೇಳುತ್ತಿದ್ದು ವಿಶೇಷವಾಗಿತ್ತು. ಸಂಜೆ ಬಿದಿಗೆ ಚಂದ್ರನ ದರ್ಶನ ಪಡೆದರು. ಒಟ್ಟಾರೆ 2 ದಿನಗಳ ಕಾಲ ಯುಗಾದಿ ಸಂಭ್ರಮ ತುಂಬಿ ತುಳುಕುತ್ತಿತ್ತು.
ಜೂಜಾಟಕ್ಕೆ ಕಡಿವಾಣ : ಯುಗಾದಿ ಹಬ್ಬ ಬೇವು ಬೆಲ್ಲದಷ್ಟೆ ಈ ಭಾಗದಲ್ಲಿ ಜೂಜಾಟಕ್ಕೆ ಪ್ರಸಿದ್ಧಿ. ಬೇರೆ ಬೇರೆ ಊರುಗಳಿಂದ ಇಲ್ಲಿನ ಜೂಜಾಡಲು ಜನ ಆಗಮಿಸುವುದರಿಂದ ಬಸ್ ನಿಲ್ದಾಣ ಎನ್ನದೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ಬೀದಿಗಳಲ್ಲಿ ಶಾಮಿಯಾನ ಹಾಕಿ 3 ದಿನಗಳ ಕಾಲ ಅಹೋ ರಾತ್ರಿ ಜೂಜಾಡುವುದು ವಾಡಿಕೆ.ಕಳೆದ ಹಲವಾರು ವರ್ಷಗಳಿಂದ ಇದೊಂದು ಸಂಪ್ರದಾಯ ಎಂಬಂತೆ ಎಗ್ಗಿಲ್ಲದೆ ನಡೆಯತ್ತ ಬಂದಿದ್ದು ಇಸ್ಪೀಟ್ ಜೂಜಾಟಕ್ಕೆ ಇದೇ ಪ್ರಥಮ ಬಾರಿಗೆ ಕಡಿವಾಣ ಹಾಕಲಾಗಿತ್ತು.ಯುಗಾದಿ ಎಂದರೆ ಜೂಜಾಟದ ಹಬ್ಬವೆಂದೆ ಭಾವನೆಯನ್ನು ಈ ಬಾರಿ ಎಸ್ಪಿ ಅವರು ಜಿಲ್ಲಾಧ್ಯಂತ ಜೂಜಾಟಕ್ಕೆ ನಿರ್ಭಂಧ ಹೇರುವುದರ ಮುಖಾಂತರ ಜೂಜು ಪ್ರಿಯರಿಗೆ ಬೇವನ್ನು ತಿನ್ನಿಸಿದರು. ಒಟ್ಟಾರೆ ಇಸ್ಪೀಟ್ ಮಾರಿಯಿಂದ ಹಲವಾರು ಸಂಸಾರಗಳು ಬೀದಿಗೆ ಬೀಳುವುದು ತಪ್ಪಿತಾದರೂ ಕೆಲವರು ಕದ್ದು ಮುಚ್ಚಿ ಮನೆ ಹಾಗೂ ತೋಟದ ಮನೆಗಳಲ್ಲಿ ಜೂಜಾಡಿ ತಮ್ಮ ವಾಂಛೆ ತೀರಿಸಿಕೊಂಡರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...