ವಿಷಯಕ್ಕೆ ಹೋಗಿ

ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಊರಹಬ್ಬ

ಈ ಗ್ರಾಮದಲ್ಲಿ ರಾಮನವಮಿ ಊರಹಬ್ಬ
ಎಲ್ಲೆಡೆ ಸಾಮಾನ್ಯವಾಗಿ ಯುಗಾದಿ, ದೀಪಾವಳಿ ಹಬ್ಬಗಳನ್ನು ಕುಟುಂಬಗಳಲ್ಲಿ ಭರ್ಜರಿಯಾಗಿ ಸಂಭ್ರಮದಿಂದ ಆಚರಿಸಿ ರಾಮನವಮಿಯಲ್ಲಿ ದೇವಸ್ಥಾನಕ್ಕೆ ತೆರಳಿ ಪೂಜಯಲ್ಲಿ ಪಾಲ್ಗೊಳ್ಳುವುದು ಪಾರಿಪಾಟವಿದ್ದರೆ ಇಲ್ಲೊಂದು ಗ್ರಾಮದಲ್ಲಿ ರಾಮನವಮಿಯನ್ನು ಆಚರಿಸುವ ರೀತಿಯೇ ಬೇರೆ. ಇಲ್ಲಿ ಒಂಬತ್ತು ದಿನಗಳ ಕಾಲ ನಡೆಯೋ ರಾಮನ ಉತ್ಸವ ಒಂದರ್ಥದಲ್ಲಿ ವಿಶೇಷವೇ ಸರಿ.ಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಬರುವ ರಾಮನವಮಿಯನ್ನು ಕುಟುಂಬದ ಮುಖ್ಯ ಹಬ್ಬವಾಗಿ ಆಚರಿಸುವ ಮೂಲಕ 9 ದಿನಗಳ ಕಾಲ ವಸಂತ ನವರಾತ್ರಿಯನ್ನು ಊರಿನಲ್ಲಿ ಆಚರಿಸುವುದು ರೂಢಿಯಲ್ಲಿದೆ.
ನವರಾತ್ರಿ ಎಂದರೆ ಶರನ್ನವರಾತ್ರಿ ಹಾಗೂ ಮೈಸೂರು ದಸರ ನೆನಪಿಗೆ ಬರುತ್ತದೆ. ಆದರೆ ಮತ್ತೊಂದು ನವರಾತ್ರಿಯ ಆಚರಣೆ ಇಲ್ಲಿ ನಡೆದುಕೊಂಡು ಬರುತ್ತಿದೆ. ಶರನ್ನವರಾತ್ರಿ ದುರ್ಗಾಪೂಜೆಗೆ ಮೀಸಲಾದರೆ ಇಲ್ಲಿ ಆಚರಣೆಯಲ್ಲಿರುವ ವಸಂತ ನವರಾತ್ರಿ ಶ್ರೀರಾಮನಿಗೆ ಮೀಸಲು. ಹೊಸ ಸಂವತ್ಸರದ ಅಂದರೆ ಯುಗಾದಿಯ ಮೊದಲ ದಿನದಿಂದ ಪ್ರಾರಂಭಿಸಿ ರಾಮನು ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ರಾಮನ ಪೂಜೆ ಸಲ್ಲಿಸಿದ ನಂತರ ಅಂತ್ಯಗೊಳ್ಳುತ್ತದೆ.
ಯುಗಾದಿ ಕಳೆದು ಒಂಬತ್ತನೆ ದಿನವೇ ಶ್ರೀ ರಾಮ ನವಮಿ. ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಜನನ ಸಂಭ್ರಮ. ರಾಮನವಮಿಯೆ ಬಂತೆಂದರೆ ಹುಳಿಯಾರು ಸಮೀಪದ 2೦೦ ಮನೆಗಳ ಗ್ರಾಮವಾದ ಲಿಂಗಪ್ಪನಪಾಳ್ಯದಲ್ಲಿ ಸಡಗರ. ಎಲ್ಲ ಹಬ್ಬಗಳನ್ನು ಇಲ್ಲಿ ಆಚರಿಸುತ್ತಾರಾದರೂ ರಾಮನವಮಿ ಮಾತ್ರ ವಿಶೇಷ. ಇಡೀ ಗ್ರಾಮದ ಮಂದಿಯೆಲ್ಲ ಇಲ್ಲಿ ಶ್ರೀರಾಮನ ಭಕ್ತರಾಗಿದ್ದು ಶ್ರೀರಾಮನ ಆರಾಧನೆಗಾಗಿ ಗುಡಿಯೊಂದನ್ನು ಕೂಡ ನಿರ್ಮಿಸಿಕೊಂಡಿದ್ದಾರೆ. ಶ್ರೀರಾಮನವಮಿಯ ಹಿಂದಿನ ದಿನದಿಂದಲೆ ದೇವಸ್ಥಾನ ಪ್ರಾಂಗಣದಲ್ಲಿ ಚಪ್ಪರ ಹಾಕಿ ಮಾವಿನ ತೋರಣ ಕಟ್ಟಲು ಹಿರಿಯರು ಕಿರಿಯರೆನ್ನದೆ ಊರಿನ ಸಮಸ್ತರು ಸೇರುತ್ತಾರೆ.ಅಂದು ಗ್ರಾಮದ ಮನೆ ಮನೆಗಳು ತಳಿರು ತೋರಣದಿಂದ ಬಣ್ಣ ಬಣ್ಣದ ರಂಗೋಲಿಯಿಂದ ಸಿಂಗರಿಸಲ್ಪಡುತ್ತದೆ. ಊರಿನಲ್ಲಿ ಒಬ್ಬಟ್ಟಿನ ವಾಸನೆ ಘಮ್ಮೆಂದು ಅಡರುತ್ತದೆ. ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಜನ ದೂರದೂರುಗಳಿಂದ ನೆಂಟರಿಷ್ಟರನ್ನು ಕರೆಸಿಕೊಳ್ಳುತ್ತಾರೆ. ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುತ್ತಾರೆ.
ಹೊಸ ಸಂವತ್ಸರದ ಮೊದಲ ಹಬ್ಬವಾದ ಯುಗಾದಿಯ 8 ನೇ ದಿನದ ನಂತರ ಆಚರಿಸುವ ರಾಮ ನವಮಿಯವರೆಗೆ ಗ್ರಾಮದಲ್ಲಿ ಎಲ್ಲರೂ ಮಡಿಯಾಗಿರುತ್ತಾರೆ. ಗ್ರಾಮದವರೆಲ್ಲ ಬಹುಪಾಲು ಮಂದಿ ತಿಂದುಣ್ಣುವವರಾದರೂ 9 ದಿನದ ವರೆವಿಗೆ ಮಾಂಸಹಾರ ಗ್ರಾಮದಲ್ಲಿ ಕಡ್ಡಾಯ ನಿಷಿದ್ಧ. ಗ್ರಾಮದಲ್ಲಿ ಆಚರಿಸುವ ಶ್ರೀರಾಮನವಮಿಗೆ 50-60 ವರ್ಷಗಳ ಇತಿಹಾಸವಿದೆ.ಗ್ರಾಮದ ಹಿರಿಯರಾದ ಡಿ.ದುರ್ಗಪ್ಪನವರು ಹೇಳುವಂತೆ ಗ್ರಾಮದಲ್ಲಿ 60 ವರ್ಷಗಳ ಹಿಂದೆ ಯಾವುದೇ ದೇವಾಲಯ ಇರಲಿಲ್ಲ. ಗ್ರಾಮದ ಜನ ತಮ್ಮಷ್ಟಕ್ಕೆ ತಾವೇ ಜೀವಿಸುತ್ತಿದ್ದ ಕಾಲವದು. ತಮ್ಮ ಊರಿನ ಕಷ್ಟ ಕಾರ್ಪಣ್ಯಗಳಿಗೆ ಬೇರೆ ಊರಿನ ಗ್ರಾಮದೇವತೆಗಳನ್ನು ಆಶ್ರಯಿಸುತ್ತಿದ್ದರು.
ಅದೊಂದು ದಿನ ಹುಳಿಯಾರಿನ ಗಾರೆ ಗಿರಿಯಪ್ಪನವರು ರಾಮ ಮಹಿಮೆಯನ್ನು ತಿಳಿಸಿ ಗ್ರಾಮದಲ್ಲಿ ರಾಮನವಮಿಯಂದು ಊರ ಮಧ್ಯೆ ಚಪ್ಪರ ಹಾಕಿಸಿ ಶ್ರೀರಾಮ ಪೋಟೊ ಇಟ್ಟು ಭಜನೆ ಮಾಡಿಸುವಲ್ಲಿ ಸಫಲರಾದರು.ಸೋಮಸಂದ್ರದ ಬಾಲಪ್ಪನವರು ರಾಮ ಭಜನೆ ಹೇಳಿಕೊಟ್ಟು ಗ್ರಾಮದ ಜನರಲ್ಲಿ ಭಕ್ತಿ, ಶ್ರದ್ಧೆ, ಸಂಸ್ಕಾರಗಳನ್ನು ಬೆಳೆಯುವಂತೆ ಮಾಡಿದರು. ಅಂದಿನಿಂದ ಗ್ರಾಮದ ಸಮಸ್ಯೆಗಳು ಮಂಜಿನಂತೆ ಕರಗಿದಲ್ಲದೆ ಊರು ಸುಭಿಕ್ಷೆವಾಯಿತು. ಹೀಗಾಗಿ ರಾಮನವಮಿಯನ್ನು ಕಟ್ಟು ನಿಟ್ಟಿನಿಂದ, ಭಯಭಕ್ತಿಯಿಂದ ಆಚರಿಸುವ ಪದ್ದತಿ ಆರಂಭವಾಯಿತು.
ಹುಳಿಯಾರಿನ ಗ್ರಾಮದೇವತೆಗಳಾದ ಹುಳಿಯಾರಮ್ಮ ಹಾಗೂ ದುರ್ಗಮ್ಮನವರ ಸಮ್ಮಖದಲ್ಲಿ ಈ ಬಾರಿಯೂ ರಾಮನವಮಿಯ ಉತ್ಸವವನ್ನು ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು. ರಾಮ ಮಂದಿರಗಳಲ್ಲಿ ಮುಂಜಾನೆಯಿಂದಲೇ ರಾಮನಿಗೆ ವಿಶೇಷ ಅಲಂಕಾರ, ಅಭಿಷೇಕ ಮಾಡಲಾಗಿತ್ತು. ಬಿಸಿಲಿನ ಝಳವನ್ನು ಲೆಕ್ಕಿಸದೆ ವಾಡಿಕೆಯಂತೆ ರಾಮನ ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನು ಹೊತ್ತುಕೊಂಡು ಗ್ರಾಮ ದೇವತೆಗಳೊಂದಿಗೆ ಡೊಳ್ಳುಕುಣಿತ ಹಾಗೂ ಭಜನೆ ಮಾಡುತ್ತ ಹುಳಿಯಾರಿನ ಆಂಜನೇಯ ದೇವಸ್ಥಾನ ಹಾಗೂ ಶನಿದೇವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು. ಅಲ್ಲಿ ಮಹಾಮಂಗಳಾರತಿ ನಂತರ ಪಾನಕ ಕೋಸಂಬರಿ ಹಂಚಿ ಮಂಗಳ ವಾದ್ಯದೊಂದಿಗೆ ಪುನಃ ಗ್ರಾಮಕ್ಕೆ ಆಗಮಿಸಲಾಯಿತು. ಗ್ರಾಮದಲ್ಲಿನ ಎಲ್ಲಮ್ಮ,ಹೊಸೂರಮ್ಮ,ಗರುಡನಗುಡಿ, ಬಸವನ ಗುಡ್ಡೆ, ಮಾರುತಿ ಗುಡ್ಡೆಗಳಿಗೆ ಪೂಜೆ ಸಲ್ಲಿಸಿ ನಂತರ ಶ್ರೀಸ್ವಾಮಿಯವರ ಮೂಲಗುಡಿಗೆ ತೆರಳಲಾಯಿತು. ಅಲ್ಲಿ ನೆರೆದಿದ್ದ ಸಮಸ್ತ ಗ್ರಾಮಸ್ಥರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಭಜನೆ ಮಾಡಿ ರಾಮರಸದ ತೀರ್ಥ ಹಾಗೂ ಕೋಸಂಬರಿ ಪಾನಕ ಹಂಚಲಾಯಿತು.
ಸಂಜೆ ನೂರೊಂದು ಎಡೆ ಸೇವೆ,ಬಿಲ್ಲುಗೂಡೂ ಸೇವೆ ಸಲ್ಲಿಸಿ ದಾಸಯ್ಯಗಳಿಗೆ ಎಡೆ ಇಡಲಾಯಿತು. ಬೆಳಿಗ್ಗೆಯಿಂದ ಸಂಜೆಯವರೆವಿಗೂ ನಡೆದ ಧಾರ್ಮಿಕ ಕೈಂಕರ್ಯಗಳಲ್ಲಿ ಗ್ರಾಮದ ಜನರೆಲ್ಲ ಒಟ್ಟಾಗಿ ಪಾಲ್ಗೊಂಡು ರಾಮಭಜನೆ ಮಾಡಿ ಭಕ್ತಿಭಾವದಲ್ಲಿ ಮಿಂದರು.
ಒಟ್ಟಾರೆ ಲಿಂಗಪ್ಪನಪಾಳ್ಯದ ಗ್ರಾಮಸ್ಥರು ಹಲವು ಹಬ್ಬಗಳ ಜೊತೆ ರಾಮನವಮಿಯನ್ನು ವಿಶಿಷ್ಟವಾಗಿ ಆಚರಿಸುತ್ತ ಬಂದಿರುವುದು ಈ ಭಾಗದ ವಿಶೇಷ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.