ವಿಷಯಕ್ಕೆ ಹೋಗಿ

ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ ನಾಟಕ ಪ್ರದರ್ಶನ




ಹುಳಿಯಾರು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ
ಉಚಿತ ನಾಟಕ ಪ್ರದರ್ಶನಕ್ಕೆ ಸಿದ್ಧ: ಡಾ.ಮಾಸ್ಟರ್ ಹಿರಣ್ಣಯ್ಯ
----------------------------------
ರಂಗಕಲೆಯ ರೀತಿ ಕ್ರೀಡೆಯೂ ಸಹ ಮನರಂಜನಾ ಚಟುವಟಿಕೆಯಾಗಿದ್ದು ಹುಳಿಯಾರಿನಲ್ಲಿ ಕ್ರೀಡೆಗೆ ಒತ್ತು ನೀಡುವ ನಿಟ್ಟಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸಹಾಯಾರ್ಥ ತಮ್ಮ ಸಂಸ್ಥೆಯಿಂದ ಉಚಿತ ನಾಟಕ ಪ್ರದರ್ಶನ ನೀಡುವುದಾಗಿ ನಟರತ್ನಾಕರ ಡಾ.ಮಾಸ್ಟರ್ ಹಿರಣ್ಣಯ್ಯ ಘೋಷಿಸಿದರು.
ಹುಳಿಯಾರಿನಲ್ಲಿ ಶಿವರಾತ್ರಿ ಜಾಗರಣೆ ಅಂಗವಾಗಿ ಕೆನರಾ ಬ್ಯಾಂಕ್, ಸ್ಪೊರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹಾಗೂ ನೆಹರು ಯುವ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಹೊನಲು ಬೆಳಕಿನ ಕ್ರೀಡಾಕೂಟವನ್ನು ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಬೆನಿಫಿಟ್ ಶೋ ಸಂಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ವಹಿಸಿಕೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರಲ್ಲದೆ ಕಾರ್ಯಕ್ರಮ ಮುಗಿದ ನಂತರ ತಾವೇ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕ್ರೀಡಾಂಗಣ ನಿರ್ಮಾಣದ ತಮ್ಮ ನಿಲುವು ಹಾಗೂ ಆಶಯ ತಿಳಿಸಿ ಶೀಘ್ರ ಪ್ರದರ್ಶನದ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಿದರು.
ಜಾಗರಣೆ ಸಂಸ್ಕೃತಿ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಇಡೀ ರಾತ್ರಿ ಹೊನಲು ಬೆಳಕಿನ ಕ್ರೀಡಾಕೂಟವನ್ನು ಏರ್ಪಡಿಸುವ ಮೂಲಕ ಯುವಕರಲ್ಲಿ ಮನರಂಜನೆ ಸಹಿತ ಜಾಗರಣೆಯ ಪರಂಪರೆ ಹುಟ್ಟುಹಾಕುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದರಲ್ಲದೆ ಮುಂದಿನ ಜಾಗರಣೆ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿಕೊಂಡು ಈ ಕಾರ್ಯಕ್ಕೆ ಮತ್ತೊಷ್ಟು ಉತ್ತೇಜನ ನೀಡುವುದಾಗಿ ಪ್ರಕಟಿಸಿದರು.
ವಯಸ್ಸಾದ ತಂದೆ ತಾಯಿಯರು ತಮ್ಮ ಮಕ್ಕಳಿಂದ 2 ಹೊತ್ತಿನ ಊಟ, ಅರ್ಧ ಗಂಟೆ ಮೊಮ್ಮೊಗುವನ್ನು ತೊಡೆಯ ಮೇಲೆ ಆಡಿಸುವ ಸ್ವಾತಂತ್ರ ಬಿಟ್ಟು ಬೇರೇನನ್ನೂ ನಿರೀಕ್ಷಿಸುವುದಿಲ್ಲ. ತಮ್ಮನ್ನು ಇಪ್ಪತ್ತು ವರ್ಷ ಸಾಕಿ ಸಲುಹಿದವರಿಗೆ ಇಷ್ಟೂ ಕೊಡಲಾಗುವುದಿಲ್ಲವೆ ಎಂದು ಪ್ರಶ್ನಿಸಿ ಮುಂದೊಂದು ದಿನ ತಮಗೂ ವಯಸ್ಸಾಗುತ್ತದೆ ಎಂಬುದನ್ನು ಮರೆಯಬೇಡಿ ಎಂದು ಯುವ ಜನತೆಗೆ ಕಿವಿ ಮಾತು ಹೇಳಿದರು.
ಹಿರಣ್ಣಯ್ಯನವರ ಭಾಷಣ ಎಂದರೆ ಅಲ್ಲಿ ನಗೆ ಚಟಾಕಿಗಳಿಗೆ ಕೊರತೆಯಿಲ್ಲ. ಇಲ್ಲಿಯೂ ಸಹ ಅನೇಕ ಹಾಸ್ಯ ಚಟಾಕಿ ಮಿಶ್ರಿತ ನುಡಿ ಮುತ್ತುಗಳನ್ನು ಉದುರಿಸಿದ್ದು ದೇವರಿಗೆ ಕಲಾವಿದರ ಮೇಲೆಯೇ ಕಣ್ಣು ರಾಜ್, ವಿಷ್ಣು ಸೇರಿದಂತೆ ಅನೇಕ ಕಲಾರತ್ನಗಳನ್ನು ಕರೆದುಕೊಂಡಿದ್ದಾನೆ. ಮನೆಗೆ ಇಬ್ಬಿಬ್ಬರಂತೆ ವಿಧಾನಸೌಧದಲ್ಲಿ ಅನೇಕ ರಾಜಕಾರಣಿಗಳು ಇದ್ದರೂ ಕೂಡ ಕಲಾವಿಧರನ್ನೇ ಕರೆದುಕೊಳ್ಳುತ್ತಿದ್ದಾನೆ ಎಂದರೆ ರಾಜಕಾರಣಿಗಳನ್ನು ಕರೆದುಕೊಂಡರೆ ತಮ್ಮ ಸೀಟುಗಳನ್ನು ಇವರೆಲ್ಲಿ ಕಿತ್ತುಕೊಳ್ಳುತ್ತಾರೋ ಎಂಬ ಭಯ ಇರಬಹುದು ಎಂಬ ಹಾಸ್ಯ ಇದರಲ್ಲಿ ಒಂದಾಗಿತ್ತು.
ತಹಸೀಲ್ದಾರ್ ಟಿ.ಸಿ.ಕಾಂತರಾಜು, ಆರಕ್ಷಕ ಠಾಣಾಧಿಕಾರಿ ಪಾರ್ವತಮ್ಮ ಯಾದವ್, ಕೆನರಾ ಬ್ಯಾಂಕ್ ಮ್ಯಾನೇಕರ್ ಎಚ್.ಎಸ್.ಸತೀಶ್, ತಾಲೂಕು ಪತ್ರಕರ್ತರ ಸಂಘದ ಖಜಾಂಜಿ ನರೇಂದ್ರ ಬಾಬು, ಹಿರಿಯ ದೈಹಿಕ ಶಿಕ್ಷಕ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಹುಳಿಯಾರ್ ಸ್ಪೊರ್ಟ್ಸ್ ಅಸೋಸಿಯೇಷನ್ನ ಬಳೆ ಕುಮಾರ್, ಮೆಡಿಕಲ್ ಶ್ರೀನಿವಾಸ್, ಲೇತ್ ರಂಗನಾಥ್, ಎಚ್.ಬಿ.ಕಿರಣ್ ಕುಮಾರ್, ಕಂಠಯ್ಯ, ಎಚ್.ಎ.ರಮೇಶ್, ಕಾರ್ಗಿಲ್ ಸತೀಶ್, ಸುಂದರ್, ರಾಘವೇಂದ್ರ, ಗುರುಪ್ರಸಾದ್, ರೇಣುಕ ಪ್ರಸಾದ್, ದೈಹಿಕ ಶಿಕ್ಷಕರಾದ ಜಗಧೀಶ್, ತ್ಯಾಗರಾಜ್, ಮೋಹನ್ ಕುಮಾರ್, ಕೆ.ಎನ್.ಕುಮಾರಯ್ಯ, ಕುಮಾರ್, ಕೆ.ಮಂಜುನಾಥ್ ಮತ್ತಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...