ವಿಷಯಕ್ಕೆ ಹೋಗಿ

ಹುಳಿಯಾರು: ಮದರಸ ವಿಚಾರವಾಗಿ ಎರಡು ಪಂಗಡಗಳ ನಡುವೆ ಘರ್ಷಣೆ

ಮದರಸ ವಿಚಾರವಾಗಿ ಒಂದೇ ಕೋಮಿನ ಎರಡು ಪಂಗಡಗಳ ನಡುವೆ ಘರ್ಷಣೆ-
---------------------------------------
ವಾಹನಕ್ಕೆ ಕಲ್ಲು: ಹಲವರಿಗೆ ಗಾಯ
---------------------
ಮದರಸ ನಡೆಸುತ್ತಿರುವವರು ಒಂದು ಪಂಗಡದ ಧಾರ್ಮಿಕ ಆಚರಣೆ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಅದೇ ಕೋಮಿನ ಮತ್ತೊಂದು ಪಂಗಡ ಆರೋಪಿಸಿ ಈ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡೂ ಪಂಗಡಗಳ ನಡುವೆ ಘರ್ಷಣೆ ನಡೆದು ಒಂದು ಕ್ವಾಲೀಸ್ ವಾಹನದ ಗಾಜು ಪುಡಿಪುಡಿಯಾಗಿ ಎರಡು ಬಣಗಳ ಹಲವು ಮಂದಿಗೆ ಗಾಯಗಳಾದ ಘಟನೆ ಹುಳಿಯಾರಿನಲ್ಲಿ ಭಾನುವಾರ ಜರುಗಿದೆ.ಘಟನೆ ವಿವರ: ಇಲ್ಲಿನ ಹಳೇ ಅಂಚೆ ಕಛೇರಿ ಹಿಂಭಾಗದಲ್ಲಿರುವ ಇಂದಿರಾನಗರದ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ತಬ್ಲಿಕ್ ಪಂಗಡದವರು ಮದರಸ ಆರಂಭಿಸಿದ್ದು ಇವರುಗಳು ಬಹುಸಂಖ್ಯಾತ ಸುನ್ನಿ ಪಂಗಡದ ಬಡ ಮಕ್ಕಳಿಗೆ ಆಮಿಷವೊಡ್ಡಿ ಸುನ್ನಿ ಧರ್ಮ ಪದ್ಧತಿ ಹಾಗೂ ಪಾಲನೆ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿದ ಸುನ್ನಿ ಪಂಗಡದ ಕೆಲ ಯುವಕರು ಮದರಸ ನಡೆಸುವುದನ್ನು ತಡೆಯಲು ಹೋಗಿದ್ದೆ ಈ ಘಟನೆ ನಡೆಯಲು ಕಾರಣ ಎನ್ನಲಾಗಿದೆ.

ತಬ್ಲಿಕ್ ಪಂಗಡದವರು ಹೇಳುವುದಿಷ್ಟು : ಹಜರತ್ ದಿಲಾಲ್ ಟ್ರಸ್ಟ್ ಅಡಿಯಲ್ಲಿ ತಬ್ಲಿಕ್ ಪಂಗಡದವರು ಮದರಸ ನಡೆಸುತ್ತಿದ್ದು ಇಲ್ಲಿ ಕುರಾನ್ ಪಠಣ ಹಾಗೂ ನಮಾಝ್ ಕ್ರಮ ಕಲಿಸಿಕೊಡಲಾಗುತ್ತಿದೆ. ಅಲ್ಲದೆ ಕಳೆದ ವರ್ಷದಿಂದ ಈ ಭಾಗದ 3 ಮಸೀದಿಗಳಿಗೆ ನಿರಂತರವಾಗಿ ದೇಣಿಗೆ ನೀಡುತ್ತ ಸಮುದಾಯದ ಎಲ್ಲ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತಿದ್ದೇವೆ. ಇಂದು ಮದರಸದ ಉದ್ಘಾಟನೆ ನಿಮಿತ್ತ ಹೊರಗಡೆಯಿಂದ ಧರ್ಮಗುರುಗಳನ್ನು ಕರೆಸಿ ಪೂರ್ವಭಾವಿ ಸಭೆ ನಡೆಸುತ್ತಿರುವ ಸಮಯದಲ್ಲಿ ಇದನ್ನು ತಪ್ಪಾಗಿ ತಿಳಿದ ಸುನ್ನಿ ಪಂಗಡದ ಕೆಲವರು ಏಕಾಏಕಿ ಗಲಾಟೆ ಬಂದಿದ್ದು ಈ ಸಂಘರ್ಷಕ್ಕೆ ಆಸ್ಪದವಾಗಿದೆ ಎಂದರು.

ಸುನ್ನಿ ಪಂಗಡದವರು ಹೇಳಿದ್ದು: ಹೊಸ ಮದರಸ ಆರಂಭಿಸ ಬೇಕಾದರೆ 3 ಮಸೀದಿಗಳ ಅನುಮತಿ ಮುಖ್ಯವಾಗಿದ್ದು ಇದುವರೆವಿಗೂ ಯಾವುದೇ ಅನುಮತಿ ಪಡೆದಿಲ್ಲ. ಅಲ್ಲದೆ, ಈಗಾಗಲೇ ಇಲ್ಲಿ 3 ಮದರಸಗಳಿದ್ದು ಮತ್ತೊಂದು ಮದರಸದ ಅಗತ್ಯವಿಲ್ಲ. ಇಲ್ಲಿ ಧರ್ಮ ಪರಿಪಾಲನೆ ತಿಳಿಸುವ ಬದಲು ನಮ್ಮದೇ ಧರ್ಮದ ವಿರುದ್ದ ಅಪಪ್ರಚಾರ ನಡೆಸಲಾಗುತ್ತಿದೆ. ಹಣ ಹಾಗೂ ಬಾಡೂಟದ ಆಮೀಷ ತೋರಿಸಿ ಮಕ್ಕಳನ್ನು ಸೆಳೆಯಲಾಗುತ್ತಿದೆ ಎಂದು ಆರೋಪಿಸಿದರು. ಹಣದ ರುಚಿ ಕಂಡವರು ಮುಂದೆ ಹಣಗಳಿಸಲು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿ ಉಗ್ರವಾದಿ, ಬಯೋತ್ಪಾದಕರಾಗಿ ಮಾರ್ಪಟ್ಟು ಹಿಂದು ಮುಸ್ಲಿಮರ ಸೌಹಾರ್ದತೆಯ ಸಹಬಾಳ್ವೆಗೆ ಮಾರಕವಾಗಬಹುದಾದ ಆತಂಕ ವ್ಯಕ್ತಪಡಿಸಿದರು.

ಪರಿಸ್ಥಿತಿ ವಿಕೋಪ: ಈ ಬಗ್ಗೆ ಸುನ್ನಿ ಪಂಗಡದವರು ಹಲವಾರು ಬಾರಿ ಎಚ್ಚರಿಕೆ ನೀಡಿದಾಗ್ಯೂ ಇದನ್ನು ಲೆಖ್ಖಿಸದೆ ಇಂದು ಸಹ ಸಭೆ ನಡೆಸುತ್ತಿದ್ದರಿಂದ ಸಭೆ ನಿಲ್ಲಿಸಲು ಹೋದಾಗ ಈ ಎರಡು ಪಂಗಡಗಳ ನಡುವೆ ಮಾರಾಮಾರಿ ಘರ್ಷಣೆಗೆ ಕಾರಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮದರಸದ ಆಚೆ ನಿಂತಿದ್ದ ಸ್ಕಾರ್ಪಿಯೋ ವಾಹನಕ್ಕೆ ಕಲ್ಲು ಬೀಸಿದ್ದರಿಂದ ಗಾಜು ಪುಡಿಪುಡಿಯಾಯಿತು. ಎರಡು ಗುಂಪುಗಳ ನಡುವೆ ಕೈಕೈ ಮಿಲಾಯಿಸಿ ಹಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಪಿಎಸ್ಐ ಪಾರ್ವತಿ ಯಾದವ್ ಅವರು ಘಟನಾ ಸ್ಥಳಕ್ಕೆ ಧಾವಿಸಿ ಬಂದು ಪರಿಸ್ಥಿತಿಯನ್ನು ಹತೋಟಿಕೆ ತಂದರು. ಗಲಾಟೆಯಲ್ಲಿ ತೊಡಗಿದ್ದ ಎರಡು ಗುಂಪಿನವರನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಘಟನಾ ಸ್ಥಳಕ್ಕೆ ಆಗಮಿಸಿದ್ದ ಚಿ.ನಾ.ಹಳ್ಳಿ ಸಿಪಿಐ ರವಿಪ್ರಸಾದ್ ಪರಿಸ್ಥಿತಿ ನಿಯಂತ್ರಿಸಲು ಶಿರಾ ಹಾಗೂ ಚಿ.ನಾ.ಹಳ್ಳಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿದರು. ಎರಡು ಗುಂಪುಗಳ ಮುಖಂಡರ ಜೊತೆ ಠಾಣೆಯಲ್ಲಿ ಶಾಂತಿ ಸಭ ಏರ್ಪಡಿಸಿದರು. ಶಾಂತಿ ಸಭೆ ನಡೆಯುವ ಸಮಯದಲ್ಲೇ ಸಿಪಿಐ ಮುಂದೆಯೇ ಎರಡು ಗುಂಪುಗಳ ಮಧ್ಯೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಒಬ್ಬರಿಗೊಬ್ಬರು ತಳ್ಳಾಡಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರಿಂದ ಇಬ್ಬರಿಗೂ ತಿಳಿಹೇಳಿ ಅವರವರ ಧರ್ಮದ ಆಚರಣೆಗೆ ತೊಡಕು ಮಾಡುವುದು ಅಪರಾದವಾಗುತ್ತದೆಯಲ್ಲದೆ ಹೊರಗಡೆಯಿಂದ ಗುರುಗಳನ್ನು ಕರೆಸಿ ಸಾರ್ವಜನಿಕ ಸಭೆ, ಸಮಾರಂಭ ನಡೆಸುವಾಗ ಪೊಲೀಸರ ಪೂರ್ವಾನುಮತಿ ಪಡೆಯಬೇಕು ಎಂದು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಂಡು ವಿವಾದಕ್ಕೆ ತೆರೆಎಳೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.