ವಿಷಯಕ್ಕೆ ಹೋಗಿ

ರೈತನ ಆತ್ಮಹತ್ಯೆಗೆ ಸರ್ಕಾರದ ದ್ವಂದ್ವ ನೀತಿ ಕಾರಣ : ಕೋಡಿಹಳ್ಳಿ

ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಸಮಸ್ಯೆ ಬಗೆರಿಸಲು ಸರ್ಕಾರಗಳು ವಿಫಲವಾಗುತ್ತಿರುವ ಕಾರಣ ರೈತರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದ್ದು ಆತ್ಮಹತ್ಯೆಯ ದಾರಿ ಹಿಡಿಯುವಂತಾಗಿದೆ. ರೈತ ಆತ್ಮಹತ್ಯೆಗೆ ಶರಣಾದರೆ ಅದು ದೇಶಕ್ಕೆ ಭಾರಿ ನಷ್ಠ. ಹಾಗಾಗಿ ಸಾಲದ ಬಾದೆಗೆ ಹೆದರಿ ರೈತರು ಆತ್ಮಹತ್ಯೆಯ ನಿರ್ಧಾರ ಕೈಗೊಳ್ಳದೆ ಬದುಕಿದ್ದು ಸಮಸ್ಯೆ ಎದುರಿಸಬೇಕು ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟರು.
ಹುಳಿಯಾರು ಸಮೀಪದ ಬರಗೂರು ಗ್ರಾಮದ ನೂತನ ರೈತ ಸಂಘ ಹಾಗೂ ಹಸಿರು ಸೇನೆ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿ ರೈತ ಸಾಲದ ಶೂಲಕ್ಕೆ ಸಿಲುಕಲು ಸರ್ಕಾರದ ದ್ವಂದ ನೀತಿ ಕಾರಣವಾಗಿದ್ದು ಇದರಿಂದ ಹೊರ ಬರಲು ಹೋರಾಟವೇ ಮದ್ದು ಎಂದರು.


ರೈತ ಬೆಳೆಯುವ ಬೆಳಗೆ ಇನ್ಯಾರೋ ಬೆಲೆ ಕಟ್ಟುತ್ತಿದ್ದು ಮಧ್ಯವರ್ತಿಗಳ ಹಾವಳಿಗೆ ಸಿಕ್ಕು ರೈತ ನುಜ್ಜುಗುಜ್ಜಾಗುತ್ತಿದ್ದಾನೆ.ಸರಿಯಾದ ಬೆಲೆ ನೀಡದೆ ರೈತನಿಗೆ ಮೋಸವಾಗುತ್ತಿದೆ ಎಂದ ಅವರು ಕಡಿಮೆ ಬೆಲೆ ಕೊಟ್ಟು ಭತ್ತ ಕೊಳ್ಳುವ ಇವರು ಅಕ್ಕಿಯನ್ನು 30 ರಿಂದ 50 ರು. ಗೆ ಮಾರುತ್ತಾರೆ. ತೊಗರಿಯನ್ನು 2 ಸಾವಿರಕ್ಕೆ ಖರೀದಿಸಿ 90 ರು. ಗೆ ಮಾರಾಟ ಮಾಡುತ್ತಾರೆ. ಹಾಗಾಗಿ ಸರ್ಕಾರ ರೈತನ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.


ದೇಶದಲ್ಲಿ ಶೇ. 75 ರಷ್ಟಿರುವ ರೈತರಿಗೆ ದೇಶ ಹಾಗೂ ರಾಜ್ಯಗಳಲ್ಲಿ ಪ್ರತ್ಯೇಕ ಬಜೆಟ್ ಮಂಡನೆಯಾಗುವ ಹೊರತು ರೈತನ ಅಭಿವೃದ್ಧಿ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರೈತ ವರ್ಗ ಎಚ್ಚೆತ್ತುಕೊಂಡು ಪ್ರತ್ಯೇಕ ಬಜೆಟ್ಗೆ ಹೋರಾಟ ಮಾಡಬೇಕು ಹಾಗೂ ಒಗ್ಗಟ್ಟಿನ ಬಲ ಪ್ರದರ್ಶಿಸಿ ನಮ್ಮ ಪಾಲಿನ ಹಕ್ಕುಗಳನ್ನು ಪಡೆಯಬೇಕು ಎಂದು ಕರೆ ನೀಡಿದರು.


ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತೀಶ್, ಜಿಲ್ಲಾ ಸಂಚಾಲಕ ಶಿವಶಂಕರಪ್ಪ, ಟ್ರಾಕ್ಟರ್ ಮಾಲೀಕರ ಸಂಘದ ಅಧ್ಯಕ್ಷ ಕಾಡಿನರಾಜ ನಾಗರಾಜು, ಲಕ್ಷ್ಮೀಪುರದ ಶಾಂತ್ಕುಮಾರ್, ಶಿರಾದ ಪರಮಶಿವಯ್ಯ, ಕೆರೆಸೂರಗೊಂಡನಹಳ್ಳಿ ಗಂಗಾಧರಯ್ಯ, ಮಾದಿಹಳ್ಳಿ ರಂಗಸ್ವಾಮಿ, ರಾಜಶೇಖರಯ್ಯ, ನಂಜುಂಡಪ್ಪ, ಈಶ್ವರಯ್ಯ, ರಾಮಲಿಂಗಯ್ಯ, ಜಗದೀಶ್, ಕುಮಾರಯ್ಯ, ಶಂಕರಯ್ಯ, ಬೊಮ್ಮಣ್ಣ
ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...