ವಿಷಯಕ್ಕೆ ಹೋಗಿ

ವಿಶ್ವಕರ್ಮದವರಿಗೆ 2A ನಲ್ಲಿ ಶೇ. 3 ಒಳಮೀಸಲಾತಿ ಅಗತ್ಯ: ಏಕದಂಡಿಗಿಶ್ರೀ

ಸಕಾ೯ರ ಹಿಂದುಳಿದ ವರ್ಗ ಎ ನಲ್ಲಿ 108 ಜಾತಿಗಳನ್ನು ಒಟ್ಟಿಗೆ ಸೇರಿಸಿ ಶೇ.15 ಮೀಸಲಾತಿ ನಿಗದಿ ಮಾಡಿದ್ದು ಈ ಸೌಲಭ್ಯವನ್ನು ಕೆಲ ಪ್ರಭಲ ಜಾತಿಗಳು ಕಬಳಿಸುತ್ತಿದ್ದಾರೆ. ಇದರಿಂದ ಅತ್ಯಂತ ಹಿಂದುಳಿದ ಜನಾಂಗ ವಿಶ್ವಕರ್ಮದವರಿಗೆ ಅನ್ಯಾಯವಾಗುತ್ತಿದ್ದು ಸಕಾ೯ರ 2 A ನಲ್ಲಿ ಶೇ.3 ಒಳಮೀಸಲಾತಿ ಜಾರಿಗೆ ತರುವ ಅಗತ್ಯವಿದೆ ಎಂದು ಗುಲ್ಬರ್ಗ ಜಿಲ್ಲೆ, ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಅನೇಗುಂದಿ ಸಂಸ್ಥಾನ ಸರಸ್ವತೀ ಪೀಠಾಧೀಶರಾದ ಶ್ರೀ ಗುರುನಾಥ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಚಿಕ್ಕನಾಯಕನಹಳ್ಳಿಯ ಶ್ರೀಕಾಳಿಕಾಂಬ ದೇವಾಲಯದಲ್ಲಿ ಶ್ರೀಕಾಳಿಕಾಂಬ, ಶ್ರೀ ಶಿವಲಿಂಗ ವಿಗ್ರಹಗಳ ಪುನರ್ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗವಹಿಸಿ ಯಾದಗಿರಿ ಮಠಕ್ಕೆ ಹಿಂದಿರುಗುವಾಗ ಮಾರ್ಗಮಧ್ಯೆ ಹುಳಿಯಾರಿನ ಕಾಗಿ೯ಲ್ ಸತೀಶ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ 2 A ನಲ್ಲಿ ವಿಶ್ವಕರ್ಮದವರಿಗೆ ಶೇ.3 ಮೀಸಲಾತಿ ಸಿಕ್ಕರೆ ಶೈಕ್ಷಣಿಕ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಪ್ರತಿಪಾದಿಸಿದರು.


ಪೊಲೀಸ್ ದಬ್ಬಾಳಿಕೆ ತಪ್ಪಿಸಿ: ಚಿನ್ನಬೆಳ್ಳಿ ಕೆಲಸ ಮಾಡುವವರ, ಬಂಗಾರದ ಅಂಗಡಿ ಇಟ್ಟಿರುವವ ಮೇಲೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದು ಪಟ್ಟಣದಲ್ಲಿ ಕಳ್ಳತನ ಪ್ರಕರಣ ಜರುಗಿದರೂ ಸಾಕು ಅಲ್ಲಿನ ಅಂಗಡಿಗಳಿಗೆ ಏಕಾಏಕಿ ಬಂದು ತಪಾಸಣೆ ನಡೆಸಿ ಅವಮಾನಕರ, ದೌರ್ಜನ್ಯದ ಮಾತುಗಳನ್ನಾಡಿ ಮಾನಸಿಕವಾಗಿ ಘಾಸಿಗೊಳಿಸುವುದನ್ನು ಮೊದಲು ತಪ್ಪಿಸಬೇಕು ಎಂದರಲ್ಲದೆ ವಿಶ್ವಕರ್ಮ ಜನಾಂಗದ ಏಳಿಗೆಗೆ ಪ್ರತ್ಯೇಕ ನಿಗಮ ಸ್ಥಾಪಿಸಿ ತರಬೇತಿ, ಸಾಲ-ಸೌಲಭ್ಯ, ಅವಸಾನದ ಅಂಚಿನಲ್ಲಿರುವ ಕಲೆಗಳ ಪುರ್ನಶ್ಚೇತನಕ್ಕೆ ಸಕಾ೯ರ ಮುಂದಾಗುವಂತೆ ಸಲಹೆ ನೀಡಿದರು.


ರಾಜಕೀಯ ಸ್ಥಾನ ಮಾನ: ಇತರ ಹಿಂದುಳಿದ ಜಾತಿಗಳಿಗೆ ಹೋಲಿಸಿದರೆ ವಿಶ್ವಕರ್ಮ ಜನಾಂಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯವಾಗಿ ಸರಿಯಾದ ಸ್ಥಾನ ಮಾನ ನೀಡುತ್ತಿಲ್ಲ. ಚಂದ್ರಶೇಖರ ಕಂಬಾರ ಸೇರಿದಂತೆ ಒಂದಿಬ್ಬರು ಎಂಎಲ್ಸಿ ಆಗಿದ್ದು ಬಿಟ್ಟರೆ ಮತ್ಯಾರೂ ರಾಜಕೀಯ ಹುದ್ದೆಗಳನ್ನು ಅಲಂಕರಿಸಿಲ್ಲ. ಹೀಗಾಗಲು ನಮ್ಮಲ್ಲಿರುವ ಅಸಂಘಟನೆ ಕಾರಣವಾಗಿದ್ದು ಜನಸಂಖ್ಯೆಯಲ್ಲಿ ಮುಂದುವರಿಯುವುದಕ್ಕಿಂತ ಸಂಘಟಿತರಾಗಿ ಮುಂದುವರಿಯುವುದು ಸೂಕ್ತ ಎಂದರು.


ಸಕಾ೯ರಕ್ಕೆ ಕೂಗು ತಟ್ಟಿಲ್ಲ: ದೇವಸ್ಥಾನ, ಆಸ್ತಿಕಬಾವ, ಕೃಷಿಕರ್ಮ ಮತ್ತು ತಾಂತ್ರಿಕ ಕಸುಬುಗಳನ್ನು ಹುಟ್ಟುಹಾಕಿದ ವಿರ್ಶಕರ್ಮ ಜನಾಂಗ ಇಂದು ಎಲ್ಲರ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ಶಿಲ್ಪಕಲೆ ಪರಂಪರೆ ಪುನರುಸ್ಥಾನ ಗೊಂಡರೆ ಭಾರತೀಯ ಸಂಸ್ಕೃತಿ ಪುನಃ ಗತವೈಭವ ಪಡೆದು ಶಿಲ್ಪಗಳ, ಮಠಗಳ, ದೇವಾಲಯಗಳ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ 2003 ರಿಂದ ಇಲ್ಲಿಯವರೆಗೂ ನಿರಂತರವಾಗಿ 28 ಜಿಲ್ಲೆ ನೂರಾರು ತಾಲೂಕುಗಳಲ್ಲಿ ಸಮ್ಮೇಳನ, ಸಮಾವೇಶ, ಹೋರಾಟ ಮಾಡುತ್ತಿದ್ದರೂ ಕೂಡ ತಮ್ಮ ಕೂಗು ಸಕಾ೯ರಕ್ಕೆ ತಟ್ಟಿಲ್ಲ ಎಂದು ನೊಂದು ನುಡಿದರು.

ಹೋರಾಟ-ಸಂಘಟನೆ ನಿಲ್ಲಿಸುವುದಿಲ್ಲ: ಮನುಕುಲದ ನಾಗರಿಕತೆಗೆ ಮೀಸಲಾದವರು ವಿಶ್ವಕರ್ಮ ಜನಾಂಗದವರು. ಆದರೆ ಅಲ್ಪಸಂಖ್ಯಾತರು ಎನ್ನುವ ಕಾರಣದಿಂದ ಸಕಾ೯ರ ನಮ್ಮನ್ನು ದೂರವಿಡುತ್ತಿದ್ದು ಜನಾಂಗದಲ್ಲಿ ಅನೇಕತೆ ಹೋಗಲಾಡಿಸಿ ಐಕ್ಯತೆ ಬೆಳಸಿ ಒಗ್ಗಟ್ಟಾಗಿ ನಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವುದಾಗಿ ಶ್ರೀಗಳು ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...