ವಿಷಯಕ್ಕೆ ಹೋಗಿ

ಶಿವಲಿಂಗಮ್ಮ ಹುಳಿಯಾರು ಗ್ರಾ.ಪಂ ಹಿರಿಯಕ್ಕ,3 ಮಂದಿಯ ಹ್ಯಾಟ್ರಿಕ್ ದಾಖಲೆ

(ಫೋಟೊ ವಿವರ:ಹುಳಿಯಾರು ಗ್ರಾ.ಪಂ.ಚುನಾವಣೆಯಲ್ಲಿ ಐದನೇ ಬಾರಿ ಜಯಗಳಿಸಿರುವ ಶಿವಲಿಂಗಮ್ಮ, ಹ್ಯಾಟ್ರಿಕ್ ಗೆಲುವು ಪಡೆದಿರುವ ಅಶೋಕ್ ಬಾಬು, ಎಚ್.ಆರ್.ರಂಗನಾಥ್, ಜಹೀರ್ ಸಾಬ್)

ಶಿವಲಿಂಗಮ್ಮ ಹುಳಿಯಾರು ಗ್ರಾ.ಪಂ ಹಿರಿಯಕ್ಕ
3 ಮಂದಿಯ ಹ್ಯಾಟ್ರಿಕ್ ದಾಖಲೆ
---------------------------------
ಸ್ಪರ್ಧಿಸಿರುವ ಎಲ್ಲಾ ಚುನಾವಣೆಗಳಲ್ಲೂ ಸೋಲೆಂಬುದನ್ನು ಕಾಣದೆ ಗೆಲುವಿನ ಸೋಪಾನವೇರುತ್ತ ಬಂದಿರುವ ಮಾರುತಿನಗರದ ಶಿವಲಿಂಗಮ್ಮನಿಗೆ ಈ ಚುನಾವಣೆಯಲ್ಲೂ ಮತದಾರರು ಕೈ ಹಿಡಿಯುವದರೊಂದಿಗೆ 5 ನೇ ಬಾರಿಗೆ ದಾಖಲೆಯೊಂದಿಗೆ ಆಯ್ಕೆಯಾಗುವ ಮೂಲಕ ಹುಳಿಯಾರು ಗ್ರಾ.ಪಂಚಾಯ್ತಿಗೆ ಹಿರಿಯಕ್ಕನಾಗುವ ಸೌಭಾಗ್ಯ ಒದಗಿಬಂದಿದೆ.ಈ ಚುನಾವಣೆಯಲ್ಲಿ ಈಕೆಗೆ ಐದನೇ ಭಾರಿ ಜಯ ಒಲಿದರೆ ಇನ್ನಿತರ ಮೂರು ಮಂದಿಗೆ ಹ್ಯಾಟ್ರಿಕ್ ಹಾಗೂ ಆರು ಮಂದಿಗೆ ಎರಡನೇ ಬಾರಿಯ ಜಯದ ಬಾಗಿಲು ತೆರೆದು ದಾಖಲೆಯಾಗಿದೆ.

5 ನೇ ಬಾರಿ ಸದಸ್ಯೆ : ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕೆಲವೆ ಮಂದಿಯನ್ನು ಹೊರತು ಪಡಿಸಿ ಮತ್ತಿನ್ಯಾರೂ ಎರಡನೇ ಬಾರಿ ಗೆಲುವು ಕಂಡಿಲ್ಲ.ಅಂತಹದರಲ್ಲಿ 5 ನೇ ಬಾರಿಯೂ ಗೆಲುವೂ ಸಾಧಿಸುವ ಮುಖಾಂತರ ಗ್ರಾಪಂ ಖಾಯಂ ಸದಸ್ಯೆಯಾಗಿರುವ ಶಿವಲಿಂಗಮ್ಮ ಈ ಬಾರಿಯ ಪಂಚಾಯ್ತಿಯಲ್ಲಿ ಅತ್ಯಂತ ಹಿರಿಯ ಸದಸ್ಯೆ. 84-85 ನೇ ಸಾಲಿನಲ್ಲಿ ಮಂಡಲ ಪಂಚಾಯ್ತಿ ಚುನಾವಣೆಯಲ್ಲಿ 2 ನೇ ಬ್ಲಾಕಿನಲ್ಲಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದ ಎಚ್.ಎಂ.ಶಿವಲಿಂಗಮ್ಮ ನಂತರ 90-91 ರಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು,95ರಲ್ಲಿ ಕೌಟಂಬಿಕ ಕಾರಣಗಳಿಂದ ಸ್ಪರ್ಧಿಸಲ್ಲಿಕ್ಕಾಗದೆ ಆನಂತರದ 2001-02 ಹಾಗೂ 2005-06 ನೇ ಸಾಲಿನ ಚುನಾವಣೆಯಲ್ಲಿ ಗೆದ್ದು ಈಗ ಮತ್ತೊಮ್ಮೆ ಚುನಾವಣಾ ಕಣಕ್ಕೆ ಧುಮುಕಿ ಇಲ್ಲೂ ಗೆಲುವನ್ನು ಸಾಧಿಸಿ ಸತತ ೩ ನೇ ಗೆಲುವು ಹಾಗೂ ಒಟ್ಟಾರೆಯಾಗಿ ಐದನೇ ಗೆಲುವು ದಾಖಲಿಸುವ ಮೂಲಕ ಹುಳಿಯಾರು ಗ್ರಾಮ ಪಂಚಾಯ್ತಿ ಇತಿಹಾಸದಲ್ಲಿಯೇ ಐದು ಬಾರಿ ಗೆದ್ದ ಏಕೈಕ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಇವರನ್ನು ಹೊರತು ಪಡಿಸಿದರೆ ಇಲ್ಲಿನ 4 ನೇ ಬ್ಲಾಕಿನಿಂದ ಸತತ 3 ನೇ ಬಾರಿ ಸ್ಪರ್ರ್ಧಿಸಿದ್ದ ಧನುಷ್ ರಂಗನಾಥ್, ತಂದೆಯ ಅಕಾಲಿಕ ಮರಣದ ನಂತರ ಅನಿರಿಕ್ಷಿತವಾಗಿ ರಾಜಕೀಯ ಪ್ರವೇಶ ಮಾಡಿದ ಎಚ್.ಎಂ.ಅಶೋಕ್ ಬಾಬು ಹಾಗೂ ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಅವರುಗಳು ಕಳೆದ 3 ಚುನಾವಣೆಗಳಲ್ಲೂ ಜಯದ ಹಾದಿ ಹಿಡಿದು ಹ್ಯಾಟ್ರಿಕ್ ದಾಖಲೆ ದಾಖಲಿಸಿದ್ದಾರೆ.

ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸುತ್ತಾ ತಂತಮ್ಮ ಬ್ಲಾಕಿನ ಅಭಿವೃದ್ಧಿ ಬಗ್ಗೆ ತಾವೂ ಗಮನ ನೀಡುತ್ತ ಬಂದಿರುವುದೇ ಸತತವಾಗಿ ಕಳೆದ ೧೫ ವರ್ಷಗಳಿಂದಲ್ಲೂ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಲು ಕಾರಣ ಎನ್ನುವ ಇವರುಗಳು ಗೆಲುವಿನಿಂದಾಗಿ ಜವಬ್ಧಾರಿ ಹೆಚ್ಚಿಗಿದ್ದು ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಮತದಾರರ ಆಶಯ ಈಡೇರಿಸುವುದಾಗಿ ತಿಳಿಸಿದರು.

ಇನ್ನುಳಿದಂತೆ ಕಳೆದ ಬಾರಿ ಸದಸ್ಯರಾಗಿದ್ದ ಎಸ್.ಪುಟ್ಟರಾಜು, ಅಹಮದ್ ಖಾನ್, ಸೈಯದ್ ಜಬೀಉಲ್ಲಾ ಅವರುಗಳು ಸತತ ಎರಡನೇ ಗೆಲುವು ದಾಖಲಿಸಿದರೆ ಹಸೀನಾಬಾನು, ಅಭೀದುನ್ನೀಸಾ, ಪರ್ಹಾನ ಒಂದು ಚುನಾವಣೆ ಗ್ಯಾಪ್ ನಂತರ ಎರಡನೇ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...