ವಿಷಯಕ್ಕೆ ಹೋಗಿ

ಹುಳಿಯಾರಿಗೆ ಕೀರ್ತಿ ತಂದ ಕು.ಐಶ್ವರ್ಯ

(ಹುಳಿಯಾರಿನ ಕು.ಐಶ್ವರ್ಯ ಅವರು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಅವರಿಂದ ಜಿಲ್ಲಾ ಯುವ ವಿಜ್ಞಾನ ಪ್ರಶಸ್ತಿ ಪಡೆಯುತ್ತಿರುವುದು)
ಅಂತರರಾಷ್ಟ್ರೀಯ ಜೀವ ವೈವಿಧ್ಯ ವರ್ಷಚರಣೆ ಅಂಗವಾಗಿ ತುಮಕೂರು ವಿಜ್ಞಾನ ಕೇಂದ್ರ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿಜ್ಞಾನ ಪರಿಷತ್ ಸಹಯೋಗದಲ್ಲಿ ನೀಡಿದ ಜಿಲ್ಲಾ ಯುವ ವಿಜ್ಞಾನ ಪ್ರಶಸ್ತಿಗೆ ಭಾಜನರಾಗುವ ಮೂಲಕ ಕು.ಐಶ್ವರ್ಯ ಅವರು ಹುಳಿಯಾರು ಹೋಬಳಿಗೆ ಕೀರ್ತಿತಂದಿದ್ದಾರೆ.

ಪ್ರತಿಭಾ ಕಾರಂಜಿಯ ಜಿಲ್ಲಾ ಮಟ್ಟದ ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಪ್ರಥಮ ಸ್ಥಾನ, ಕೆ.ಆರ್.ವಿ.ಪಿಯ ಜಿಲ್ಲಾ ಮಟ್ಟದ ವಿಜ್ಞಾನ ಕ್ವಿಝ್ನಲ್ಲಿ ಪ್ರಥಮ ಸ್ಥಾನ, ಆರ್ಯಭಟ ಅಬಕಾಸ್ ಆಕಾಡೆಮಿಯ ಪರೀಕ್ಷೆಯಲ್ಲಿ ಎಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ, ತಾಲೂಕು ಮಟ್ಟದ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ, ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಪರೀಕ್ಷೆಯಲ್ಲಿ ಉತ್ತೀರ್ಣ ಮತ್ತಿತರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈಕೆ ಪಡೆದ ಬಹುಮಾನಗಳ ಸಾಧನೆಯನ್ನು ಪರಿಗಣಿಸಿ ಈ ಬಾರಿಯ ಜಿಲ್ಲಾ ಯುವ ವಿಜ್ಞಾನ ಪ್ರಶಸ್ತಿ ನೀಡಲಾಗಿದೆ.


ಬಹು ಮುಖ್ಯವಾಗಿ ಈಕೆ ರಾಸಾಯನಿಕಗಳಿಗೆ ಹಾಕೋಣ ಮಿತಿ ಇನ್ನಾಗಲಿ ಸಾವಯವ ನಮ್ಮ ಸಂಸ್ಕೃತಿ ಎಂಬ ಶೀರ್ಷಿಕೆಯಡಿ ರಾಸಾಯನಿಕಗಳ ಬಳಕೆಯಿಂದ ಕೃಷಿಯಲ್ಲಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿ ಅವುಗಳ ಬಳಕೆಯನ್ನು ಕಡಿಮೆ ಮಾಡುವ ಹಾಗೂ ಪ್ರಕೃತಿ ಸ್ನೇಹಿ ಸಾವಯವಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡುವಂತೆ ಪ್ರೇರೇಪಿಸುವ ಯೋಜನಾ ವರದಿಯನ್ನು ರಚಿಸಿ ಆಕರ್ಷಕವಾಗಿ ಮಂಡಿಸುವ ಮೂಲಕ ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಜಯಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿ ಬಿ+ ಗ್ರೇಡ್ ಪಡೆದಿರುವುದು ಜಿಲ್ಲಾ ಯುವ ವಿಜ್ಞಾನ ಪ್ರಶಸ್ತಿಗೆ ಈಕೆಯನ್ನೇ ಆಯ್ಕೆಮಾಡಲು ಕಾರಣವಾಗಿದೆ.

ತುಮಕೂರಿನ ಬಾಲಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್, ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷ ಸಿ.ವಿಶ್ವನಾಥ್, ಕಾರ್ಯದರ್ಶಿ ರಾಮಕೃಷ್ಣಪ್ಪ, ವಿಜ್ಞಾನ ಪರಿಷತ್ ಅಧ್ಯಕ್ಷ ಡಾ.ಎಚ್.ಎಸ್.ನಿರಂಜನಾರಾಧ್ಯ, ಶಿಬಿರದ ಸಂಚಾಲಕ ಪಿ.ಪ್ರಸಾದ್ ಅವರು ಕು.ಐಶ್ವರ್ಯ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರಲ್ಲದೆ ವಿಜ್ಞಾನ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಯುವ ಪ್ರತಿಭೆಗೆ ಪ್ರೋತ್ಸಹಿಸಿದ್ದಾರೆ.

ಕು.ಐಶ್ವರ್ಯ ಅವರು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಮತ್ತು ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಕವಿತಾಕಿರಣ್ ದಂಪತಿಗಳ ಪುತ್ರಿಯಾಗಿದ್ದು ಈಕೆ ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...