ಅದ್ವೈತ ತತ್ವವನ್ನು ಪ್ರತಿಪಾದಿಸಿ ಸನಾತನ ಹಿಂದೂ ಧರ್ಮವನ್ನು ಜಗತ್ತಿಗೆ ಸಾರಿ ಹೇಳಿದ, ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದ ಮಹಾದಾರ್ಶನಿಕ ಶಂಕರಭಗವತ್ಪಾದರ ಜಯಂತಿಯನ್ನು ಹುಳಿಯಾರಿನ ಬ್ರಾಹ್ಮಣ ಸಮಾಜದಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಇದರಂಗವಾಗಿ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಅಭಿಷೇಕ ಸಮೇತ ವಿಶೇಷ ಪೂಜೆ ಸಲ್ಲಿಸಲಾಯಿತು.ವಿಪ್ರಮಹಿಳೆಯರಿಂದ ಶಂಕರಾಚಾರ್ಯ ವಿರಚಿತ ಸೌಂದರ್ಯಲಹರಿ ಹಾಗೂ ಶಿವಾನಂದಲಹರಿ ಪಠಿಸಲಾಯಿತು.ಭಜನೆ,ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.ಶ್ರೀ ಸೀತಾರಾಮ ಪ್ರತಿಷ್ಠಾನದ ಗೌರವಾಧ್ಯಕ್ಷ ಹೆಚ್.ಕೆ.ಅನಂತರಾಮಯ್ಯ,ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಸಮಾಜ ಭಾಂದವರು ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ