ವಿಷಯಕ್ಕೆ ಹೋಗಿ

ಸರಳ ವಿವಾಹ ಪಾಲಿಸಲು ಮುಂದಾಗಿ : ಶಾಸಕ ಸಿಬಿಎಸ್

ಸರಳ ವಿವಾಹವನ್ನು ಪ್ರೋತ್ಸಾಹಿಸುವುದು ಹಾಗೂ ಆಚರಿಸುವುದನ್ನು ಕೇವಲ ಭಾಷಣಗಳಲ್ಲಿ ಮಾತ್ರ ಸೀಮಿತವಾಗಿರಿಸದೆ ಇತರ ಬಡ ಕುಟುಂಬದ ಜೋಡಿಗಳೊಂದಿಗೆ ತನ್ನ ಮಕ್ಕಳಿಗೂ ಸಹ ಸರಳ ವಿವಾಹ ಮಾಡುವ ಮೂಲಕ ಪಾಲಿಸಲು ಮುಂದಾಗುವುದಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಘೋಷಿಸಿದರು.

ಹುಳಿಯಾರು ಸಮೀಪದ ಹರೇನಹಳ್ಳಿ ಗೇಟ್ ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ ನಿರುವಗಲ್ ಮಜುರೆ ಹುಲಿಕಲ್ ಬೆಟ್ಟದ ಶ್ರೀ ದುಗಾ೯ಬ ದೇವಿ ಪುಣ್ಯಕ್ಷೇತ್ರದಲ್ಲಿ ಶನಿವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ಹಲವು ಸಂಘ-ಸಂಸ್ಥೆಗಳು ದಾನಿಗಳ ಸಹಾಯ ಪಡೆದು ಪ್ರತಿವರ್ಷ ಹತ್ತಾರು ಸಾಮೂಹಿಕ ವಿವಾಹ ಮಹೋತ್ಸವವನ್ನು ಏರ್ಪಡಿಸಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು ಮುಂದಿನ ವರ್ಷ ಇಂತಹ ಸಂಘ ಸಂಸ್ಥೆಗಳನ್ನು ಒಟ್ಟುಗೂಡಿಸಿ ತಾಲೂಕು ಕೇಂದ್ರದಲ್ಲಿ ಒಂದೇ ದಿನ ನೂರಾರು ಜೋಡಿಗಳ ಸಾಮೂಹಿಕ ವಿವಾಹ ಮಾಡಲು ಮುಂದಾಗುವುದಾಗಿ ತಿಳಿಸಿದರು.

ಸತಿ ಪತಿಗಳು ಕಷ್ಟ-ಸುಖ ಹಾಗೂ ನೋವು ನಲಿವುಗಳನ್ನು ಸಮಾನವಾಗಿ ಸ್ವೀಕರಿಸಿ ಸಂಸಾರ ನಡೆಸಿದಾಗ ಮಾತ್ರ ಯಶಸ್ವಿ ಹಾಗೂ ಸುಖ ಜೀವನ ನಡೆಸಬಹುದಾಗಿದೆ ಎಂದು ಕಿವಿ ಮಾತು ಹೇಳಿದ ಶಾಸಕರು ಸರಳ ವಿವಾಹವಾದ ಪ್ರತಿಯೊಬ್ಬರೂ ಇತರರನ್ನು ಸರಳ ವಿವಾಹದೆಡೆ ಒಲವು ತೋರುವಂತೆ ಮನಸ್ಸು ಪರಿವತಿ೯ಸಬೇಕು ಎಂದು ಕರೆ ನೀಡಿದರು.

ಜಿ.ಪಂ.ಮಾಜಿ ಅಧ್ಯಕ್ಷ ಜಿ.ರಘುನಾಥ್, ಅಖಿಲ ಕನಾ೯ಟಕ ಭೋವಿ ಮಹಾಸಭಾ ಕಾಯಾ೯ಧ್ಯಕ್ಷ ರವಿ.ಎಚ್.ಮಾಕಳಿ, ತಾ.ಪಂ.ಮಾಜಿ ಅಧ್ಯಕ್ಷ ಶಾರದಾ ಸೀತಾರಾಮಯ್ಯ, ಜಿಲ್ಲಾ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಆರ್.ಪರಶಿವಮೂತಿ೯, ತಾಲೂಕು ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಂ.ಸುರೇಶ್, ಬೆಂಗಳೂರು ಜಯಪ್ರಕಾಶ್, ಖ್ಯಾತ ಹೃದಯರೋಗ ತಜ್ಞ ಡಾ.ಪರಮೇಶ್ವರಪ್ಪ, ಸಿಪಿಐ ರವಿಪ್ರಸಾದ್, ಬೆಸ್ಕಾಂ ಎಸ್ಓ ಎನ್.ಬಿ.ಗವೀರಂಗಯ್ಯ ಪಿಎಸೈ ಶ್ರೀಮತಿ ಪಾರ್ವತಮ್ಮ ಯಾದವ್, ಪಿಎಸೈ ಲಕ್ಷೀಪತಿ, ಜಿ.ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ದುಗಾ೯ ಗ್ರಾಮೀಣ ಮಹಿಳಾ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಇ.ನಾಗರಾಜು, ಉಪಾಧ್ಯಕ್ಷ ಟಿ.ಎಚ್.ಚಂದ್ರು, ಕಾರ್ಯದಶಿ೯ ಎಚ್.ಟಿ.ಮಂಜುನಾಥ್, ಕೆ.ಕೆ.ಹನುಮಂತಪ್ಪ, ಜಿ.ಕರಿಯಪ್ಪ, ತಿಮ್ಮಯ್ಯ ಮತ್ತಿತರರು ಇದ್ದರು.
ಸಕಾ೯ರಿ ನೌಕರರ ಸಂಘದ ನಿದೆ೯ಶಕ ಎಸ್.ಕೆ.ಮಲ್ಲಿಕಾಜು೯ನ್ ಅವರ ನಿರೂಪಣೆಯಲ್ಲಿ ಶಿಕ್ಷಕ ರಾಜಕುಮಾರ್ ಪ್ರಾಥಿ೯ಸಿದರು. ತಿಮ್ಮಾಭೋವಿ ಸ್ವಾಗತಿಸಿದರು. ಇ.ನಾಗರಾಜು ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...