ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ವೈಭವದ ವಾಸವಿ ಜಯಂತಿ

(ಫೋಟೊ ವಿವರ:ಹುಳಿಯಾರಿನಲ್ಲಿ ಶ್ರೀ ವಾಸವಿ ಜಯಂತಿ ಅಂಗವಾಗಿ ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ನಾಣ್ಯದ ತುಲಾಭಾರ ಮಾಡಲಾಯಿತು. ಟಿ.ಆರ್.ಶ್ರೀನಿವಾಸಶ್ರೇಷ್ಠಿ, ಟಿ.ಆರ್.ರಂಗನಾಥ್, ಎಲ್.ಆರ್.ಚಂದ್ರಶೇಖರ್, ಟಿ.ಎಸ್.ರಾಮನಾಥ್, ಬಿ.ವಿ.ಶ್ರೀನಿವಾಸ್, ರಾಮಚಂದ್ರಭಟ್ಟರು, ನಾಗರಾಜಗುಪ್ತ ಮತ್ತಿತರರು ಇದ್ದಾರೆ.)

ಹುಳಿಯಾರಿನಲ್ಲಿ ವೈಭವದ ವಾಸವಿ ಜಯಂತಿ
---------------------------------------

ಆರ್ಯವೈಶ್ಯ ಸಮುದಾಯದ ಕುಲದೇವತೆ ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರ ಜಯಂತಿಯನ್ನು ಭಾನುವಾರದಂದು ಹುಳಿಯಾರಿನಲ್ಲಿ ಶ್ರದ್ಧಾ ಭಕ್ತಿ ಹಾಗೂ ವೈಭವದಿಂದ ಆಚರಿಸಲಾಯಿತು.

ರಾಮಚಂದ್ರಭಟ್ಟರು ಹಾಗೂ ನಾಗರಾಜಗುಪ್ತ ಅವರ ಪೌರೋಹಿತ್ಯದಲ್ಲಿ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳು,ಹವನ ಹೋಮಾಧಿಗಳು ನಡೆದವು. ಟಿ.ಎಸ್.ದುರ್ಗರಾಜಗುಪ್ತ ಮತ್ತು ಕುಟುಂಬದವರಿಂದ ಹಾಲಿನ ಪಂಚಾಮೃತ ಅಭಿಷೇಕದಿಂದ ಆರಂಭವಾಗಿ ಗಣಪತಿ ಹೋಮ, ನವಗ್ರಹ ಹೋಮ, ವಾಸವಿ ಹೋಮ, ದುಗಾ೯ಹೋಮ, ಮೃತ್ಯುಂಜಯ ಹೋಮ ಆಚರಿಸಿ ಪೂರ್ಣಾಹುತಿ ಸಲ್ಲಿಸಲಾಯಿತು.

ನಂತರ ಸುಮಂಗಲಿಯರಿಂದ ಆರತಿ ಸೇವೆ, ಸಮಸ್ತ ಆರ್ಯವೈಶ್ಯ ಕುಲಭಾಂಧವರಿಂದ ಶ್ರೀ ಅಮ್ಮನವಿಗೆ ನಾಣ್ಯಗಳಿಂದ ತುಲಾಭಾರ, ಕನ್ಯಕಾ ಬಾಲನಾಗರು ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಅಷ್ಟಾವಧಾನ ಮುಂತಾದ ವಿವಿಧ ಧಾಮಿ೯ಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಆರ್ಯವೈಶ್ಯ ಮಹಿಳಾ ಸಂಘದಿಂದ ತಂಬಿಟ್ಟಿನ ಆರತಿ ಸ್ಪಧೆ೯, ವಾಸವಿ ವೇಷಭೂಷಣ ಸ್ಪಧೆ೯, ವಾಸವಿ ಯುವ ಜನ ಸಂಘದಿಂದ ರೋಗಿಗಳಿಗೆ ಹಣ್ಣು ಎಳನೀರು ವಿತರಣೆ ಅಲ್ಲದೆ ಹೆಣ್ಣು ಮಕ್ಕಳಿಗೆ ವಿವಿಧ ಸ್ಪಧೆ೯ಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಸಂಜೆ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರನ್ನು ವಿಧ್ಯುತ್ ದೀಪಾಲಂಕೃತ ರಾಜಗೋಪುರ ಮಂಟಪದಲ್ಲಿ ಕುಳ್ಳಿರಿಸಿ ನಾಸಿಕ್ ವಾದ್ಯ, ಸಿಡಿ ಮದ್ದುವಿನೊಂದಿಗೆ ಅದ್ದೂರಿಯಾಗಿ ರಾಜಬೀದಿ ಉತ್ಸವ ಮಾಡಲಾಯಿತು.


ಆರ್ಯವೈಶ್ಯ ಮಂಡಲಿಯ ಗೌ.ಅಧ್ಯಕ್ಷ ಟಿ.ಆರ್.ಶ್ರೀನಿವಾಸಶ್ರೇಷ್ಠಿ, ಅಧ್ಯಕ್ಷ ಟಿ.ಆರ್.ರಂಗನಾಥ್, ಉಪಾಧ್ಯಕ್ಷ ಎಲ್.ಆರ್.ಚಂದ್ರಶೇಖರ್, ಗೌ.ಕಾರ್ಯದಶಿ೯ ಟಿ.ಎಸ್.ರಾಮನಾಥ್, ಆರ್ಯವೈಶ್ಯ ಮಹಿಳಾ ಸಂಘದ ವೀಣಾಭೂಷಣ್, ವಂದನಾ ನಟರಾಜ್, ಜ್ಯೋತಿ ನಾಗರಾಜ್ ವಾಸವಿ ಯುವಜನ ಸಂಘದ ಕೆ.ಪಿ.ನವೀನ್, ಕೆ.ನಂದೀಶ್, ಟಿ.ಕೆ.ಅಜೇಯ್ ಸೇರಿದಂತೆ ಆರ್ಯವೈಶ್ಯ ಕುಲಭಾಂಧವರು ದಿನಪೂತಿ೯ ಅಂಗಡಿಗಳನ್ನು ಮುಚ್ಚಿ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಿ ದೇವಿಯ ಪೂಜಾ ಕಾರ್ಯಕ್ರಮದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಭಾಗವಹಿಸಿದ್ದರು.(ಫೋಟೊ ವಿವರ:ಹುಳಿಯಾರಿನಲ್ಲಿ ಶ್ರೀ ವಾಸವಿ ಜಯಂತಿ ಅಂಗವಾಗಿ ಆರ್ಯವೈಶ್ಯ ಮಹಿಳಾ ಸಂಘದಿಂದ ಮಕ್ಕಳಿಗೆ ವಾಸವಿ ವೇಷಭೂಷಣ ಸ್ಪಧೆ೯ ನಡೆಸಿ ಬಹುಮಾನ ವಿತರಿಸಲಾಯಿತು. )






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...