ವಿಷಯಕ್ಕೆ ಹೋಗಿ

ಸಮುದಾಯದ ಏಳಿಗೆಗೆ ದುಡಿಯುವವರಿಗೆ ಪ್ರೋತ್ಸಾಹಿಸಿ: ಡಿ.ಸಿದ್ದಬಸವಯ್ಯ

ಸಮುದಾಯದ ಅಭಿವೃದ್ಧಿಗಾಗಿ ದುಡಿಯ ಹೊರಟಿರುವವರ ಬಗ್ಗೆ ಟೀಕೆ ಮಾಡುವುದ ಬಿಟ್ಟು ಪ್ರೋತ್ಸಾಹ ನೀಡಿ ಸಹಕರಿಸಿ ಎಂದು ತಾಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ದಿ ಸಂಘದ ಗೌರವ ಸಲಹೆಗಾರ ಹಾಗೂ ನಿವೃತ್ತ ಉಪನ್ಯಾಸಕ ಡಿ.ಸಿದ್ದಬಸವಯ್ಯ ಅವರು ಕಿವಿ ಮಾತು ಹೇಳಿದರು.

ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ಚಿಕ್ಕನಾಯಕನಹಳ್ಳಿ ತಾಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಭಗೀರಥ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಲೂಕು ಉಪ್ಪಾರ ಜನಾಂಗದ ಮಾತೃ ಸಂಸ್ಥೆಯಲ್ಲಿ ಬಹುಪಾಲು ರೈತರು, ಹಿಂದುಳಿದವರು ಇರುವ ಕಾರಣ ಇಲ್ಲಿಯವರವಿಗೆ ಸಮಾಜದ ಏಳಿಗೆ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನು ಮನಗಂಡ ಉಪ್ಪಾರ ಸಕಾ೯ರಿ ನೌಕರರು ಪ್ರತ್ಯೇಕ ಸಂಘವನ್ನು ಸ್ಥಾಪಿಸಿ ಸಮಾಜದ ಸಂಘಟನೆ ಮಾಡಿಕೊಂಡು ವಿವಿಧ ಯೋಜನೆಯ ಮೂಲಕ ಅಭಿವೃದ್ಧಿಗೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು ಉಪ್ಪಾರ ಸಮಾಜದ ಸರ್ವರೂ ಇವರ ಬೆಂಬಲಕ್ಕೆ ನಿಲ್ಲಬೇಕು ಎಂದು ಕರೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಉಪ್ಪಾರ ಜನಾಂಗವು ಆಥಿ೯ಕವಾಗಿ, ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರೂ ಕೂಡ ಮೂಡನಂಬಿಕೆಯನ್ನೇ ಹಾಸಿ, ಹೊದ್ದು, ಮಲಗಿಕೊಂಡಿರುವ ಪರಿಣಾಮ ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ವರ್ಗವಾಗಿದೆ ಎಂದ ಅವರು ಮೂಡನಂಬಿಕೆಯಿಂದ ಹೊರ ಬಂದು ದೇವರಲ್ಲಿನ ತಪ್ಪು ಕಲ್ಪನೆಯನ್ನು ಬಿಟ್ಟು ಬಸವಣ್ಣನವರ ಕಾಯಕವೇ ಕೈಲಾಸ ಎಂಬುದನ್ನು ಅರಿತಾಗ ಮಾತ್ರ ಮುಂದುವರಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಆಧ್ಯಾತ್ಮ ಮತ್ತು ಯೋಗದಿಂದ ಮನಸ್ಸು ಹತೋಟಿಗೆ ಬರುವುದಲ್ಲದೆ ಏಕಾಗ್ರತೆಗೆ ಕೊಂಡೊಯ್ಯಬಹುದು. ಇದರಿಂದ ದುಶ್ಚಟ, ಅಪರಾಧಗಳಿಂದ ಮುಕ್ತಿಯ ಜೀವನ ನಡೆಯಬಹುದಾಗಿದ್ದು ಪ್ರತಿದಿನ ಸ್ನಾನ, ಪೂಜೆ, ಧ್ಯಾನ, ಯೋಗ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ರಾಮಣ್ಣ ವಹಿಸಿದ್ದರು. ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಜಿ.ಎಸ್.ಕೃಷ್ಣಮೂತಿ೯ ಅವರು ಉದ್ಘಾಟಿಸಿದರು. ಭಾವಚಿತ್ರ ಅನಾವಣವನ್ನು ತಾ.ಪಂ.ಮಾಜಿ ಅಧ್ಯಕ್ಷೆ ಶಾರದಾ ಸೀತರಾಮಯ್ಯ ನೆರವೇರಿಸಿದರು. ವಿಶೇಷ ಆಹ್ವಾನಿತರಾಗಿ ಪಿಡಬ್ಮ್ಯುಡಿ ಗುತ್ತಿಗೆದಾರ ಕಲ್ಲಹಳ್ಳಿ ರೇಣುಕಯ್ಯ, ಗುಬೆಹಳ್ಳಿ ಟೌನ್ ಪ್ಲಾನರ್ ಶಂಕರಪ್ಪ, ನೀರಾವರಿ ಇಲಾಖೆಯ ಶಿವಸ್ವಾಮಿ, ಉಪನ್ಯಾಸಕ ಹೊನ್ನಯ್ಯ, ವಕೀಲ ದೊಡ್ಡೆಣ್ಣೇಗೆರೆ ಸಿ.ಓಂಕಾರಮೂತಿ೯ ಅವರು ಭಾಗವಹಿಸಿದ್ದರು.

ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪುಟ್ಟಯ್ಯ, ಹನುಮಂತಪ್ಪ, ಬಿ.ಸಿದ್ದಯ್ಯ, ಬಿ.ಜಿ.ಅನಂತಯ್ಯ, ಶಿವಣ್ಣ, ಟಿ.ಎಸ್.ಧನಂಜಯ್ಯ, ಸುಮಂಗಳಯಲ್ಲಪ್ಪ, ಚಂದ್ರಮ್ಮನರಸಿಂಹಯ್ಯ, ಎನ್.ಬಿ.ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ಚಂದ್ರಯ್ಯ ಅವರ ನಿರೂಪಣೆಯಲ್ಲಿ ಶಾಮಲಾ ಪ್ರಾಥಿ೯ಸಿ, ಅನಂತಯ್ಯ ಸ್ವಾಗತಿಸಿ, ನಾಗೇಂದ್ರಪ್ಪ ಪ್ರಾಸ್ಥಾವಿಕ ನುಡಿ ನುಡಿದು ಯಲ್ಲಪ್ಪ ವಂದಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...