ವಿಷಯಕ್ಕೆ ಹೋಗಿ

ಮುಖ್ಯಮಂತ್ರಿ ಬಳಿಗೆ ಮಠಾಧೀಶರ ನೇತೃತ್ವದಲ್ಲಿ ನೀರಾವರಿನಿಯೋಗ

(ಫೋಟೊ ವಿವರ:ಹುಳಿಯಾರು ಪ್ರವಾಸಿ ಮಂದಿರದ ಬಳಿ ಚಿ.ನಾ.ಹಳ್ಳಿ ತಾಲೂಕಿಗೆ ಹೇಮೆ ಹರಿಸಲು ಒತ್ತಾಯಿಸಿ ಕರೆಯಲಾಗಿದ್ದ ಸಭೆಯಲ್ಲಿ ಕುಪ್ಪೂರಿನ ಶ್ರೀ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿ ಖ್ಯಾತ ಹೃದಯರೋಗ ತಜ್ಞ ಡಾ.ಪರಮೇಶ್ವರಪ್ಪ, ರೈತ ಸಂಘದ ಕೆಂಕೆರೆ ಸತೀಶ್ ಮತ್ತಿತರರು ಭಾಗವಹಿಸಿದ್ದರು.)

ಮಾತು ತಪ್ಪಿದ ಸಕಾ೯ರ:ಕಡೆಯ ಪ್ರಯತ್ನವಾಗಿ
ಮುಖ್ಯಮಂತ್ರಿ ಬಳಿಗೆ ಮಠಾಧೀಶರ ನೇತೃತ್ವದಲ್ಲಿ ನಿಯೋಗ
-------------------------------------------------------------------------

ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಿಸುತ್ತಿರುವ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಹೇಮಾವತಿ ನದಿ ನೀರು ಹರಿಸಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆ ಬಗ್ಗೆ ಸಕಾ೯ರ ತನ್ನ ನಿಲುವು ಪ್ರಕಟಿಸದಿರುವದರ ಬಗ್ಗೆ ಕಡೆಯ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿಗೆ ಶೀಘ್ರದಲ್ಲಿಯೇ ವಿವಿಧ ಮಠಾಧೀಶರ ನೇತೃತ್ವದಲ್ಲಿ ನಿಯೋಗವೊಂದನ್ನು ಕರೆದೊಯ್ಯಲು ರೈತ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ನಿರ್ಧರಿಸಿವೆ.

ಕುಪ್ಪೂರಿನ ಶ್ರೀ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಹೃದ್ರೋಗ ತಜ್ಞ ಡಾ.ಪರಮೇಶ್ವರಪ್ಪನವರ ಅಧ್ಯಕ್ಷತೆಯಲ್ಲಿ ಹುಳಿಯಾರಿನ ಪ್ರವಾಸಿ ಮಂದಿರಲ್ಲಿ ತಾಲ್ಲೂಕ್ ರೈತ ಸಂಘ ಹಾಗೂ ಹಸಿರು ಸೇನೆ ಶನಿವಾರ ಕರೆಯಲಾಗಿದ್ದ ಸಭೆಯಲ್ಲಿ ಈ ನಿಧಾ೯ರ ಕೈಗೊಳ್ಳಲಾಯಿತು.ಹೋರಾಟದ ಮುಂದಿನ ರೂಪುರೇಷೆ ಕೈಗೊಳ್ಳುವ ನಿಟ್ಟಿನಲ್ಲಿ ಸುಧೀರ್ಘ ಚಚೆ೯ ನಡೆಸಿ ಅಂತಿಮವಾಗಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಬಸವರಾಜ ಬೊಮ್ಮಯಿ ಅವರನ್ನು ಭೇಟಿಯಾಗಿ ಅವರ ನಿಲುವೇನೆಂದು ಖಚಿತಪಡಿಸಿಕೊಂಡ ನಂತರ ಮುಂದಿನ ಹಂತದ ಹೋರಾಟ ನಡೆಸಲು ತೀಮಾ೯ನಿಸಲಾಯಿತು.ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಸಂಸ್ಥೆಗಳ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಿಷ್ಟು.

ಏನಿದು ಸಮಸ್ಯೆ ?: ದಶಕಗಳಿಂದಲ್ಲೂ ಚಿಕ್ಕನಾಯಕನಹಳ್ಳಿ ತಾಲೂಕಿನಾದ್ಯಂತ ನೀರಿನ ಸಮಸ್ಯೆ ಬಿಗಡಾಯಿಸಿದ್ದು ಇತ್ತೀಚಿನ ದಿನಗಳಲ್ಲಿ ಸರಿಯಾದ ಮಳೆಯಿಲ್ಲದೆ ಅಂತರ್ಜಲ ಮಟ್ಟ ತೀರ್ವ ಕುಸಿತವಾಗಿ ಜನಜಾನುವಾರುಗಳಿಗೆ ಕುಡಿಯುವ ನೀರಿಗೂ ತತ್ವರವಾಗಿದ್ದರೂ ಸಹ ಯಾವುದೇ ಸಕಾ೯ರವಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿಲ್ಲ. ಹಾಗಾಗಿ ಕಳೆದೆರೆಡೂ ವರ್ಷಗಳಿಂದಲೂ ಶಾಸ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ ಹಾಗೂ ಪಟ್ಟಣ ಬಂದ್, ಅಹೋರಾತ್ರಿ ಧರಣಿ ಮುಂತಾದ ಹೋರಾಟ ಮಾಡಲಾಯಿತು.

ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದಾಗ ಎಚ್ಚೆತ್ತ ಸಕಾ೯ರ ಹಾಗೂ ನೀರಾವರಿ ಸಚಿವ ಬಸವರಾಜ ಬೊಮ್ಮಯಿ, ತುಮಕೂರು ಜಿಲ್ಲಾಉಸ್ತುವಾರಿ ಸಚಿವ ಸುರೇಶ ಕುಮಾರ್ ಮಧ್ಯಸ್ಥಿಕೆಯಲ್ಲಿ ಹೋರಾಟಗಾರರನ್ನು ವಿಧಾನಸೌಧಕ್ಕೆ ಬರಮಾಡಿಕೊಂಡು ತಾಲೂಕಿಗೆ ಹೇಮೆ ಹರಿಸುವ ಸಂಬಂಧ ಸ್ಥಳದಲ್ಲಿಯೇ ಸವೇ೯ ಕಾರ್ಯಕ್ಕೆ ಆದೇಶ ನೀಡುವುದರ ಮೂಲಕ ಹೋರಾಟವನ್ನು ತಾತ್ಕಾಲಿಕವಾಗಿ ಶಮನ ಮಾಡಿದ್ದರು. .ಸಚಿವರ ಆದೇಶದ ಮೇರೆಗೆ ಈಗಾಗಲೇ ಸವೇ೯ ಕಾರ್ಯ ಮುಗಿದಿದ್ದು ಈ ಹಂತದಲ್ಲಿ ಶಿರಾ ಸೇರಿದಂತೆ ತಾಲ್ಲೂಕಿಗೆ ನೀರು ಹರಿಸುವ ಕುರಿತಂತೆ ಜಿಲ್ಲೆಯ ಕೆಲ ಬಿಜೆಪಿ ಶಾಸಕರು ಹೊಸದಾಗಿ ತಕರಾರು ತೆಗೆದ ಕಾರಣ ಬರದ ನಾಡಿಗೆ ನೀರು ಹರಿಸುವ ಯೋಜನೆ ನೆನಗುದ್ದಿಗೆ ಬಿದ್ದಿದೆ.

ಅಡ್ಡಿಪಡಿಸಿರುವ ಶಾಸಕರುಗಳನ್ನು ಏಕೆಂದು ಪ್ರಶ್ನಿಸುವುದಾಗಲಿ ಅಥವಾ ಮನವೊಲಿಸಲಾಗಲಿ ಮಾಡಲು ಶಾಸಕ ಸುರೇಶ್ ಬಾಬು ಅವರಾಗಲಿ, ಮುಖ್ಯಮಂತ್ರಿಗಳ ಆಪ್ತರೆಂದೇ ಗುರುತಿಸಿಕೊಂಡಿರುವ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರಾಗಲೀ ಪ್ರಯತ್ನ ಮಾಡದೆ ಮೌನವಹಿಸಿದ್ದಾರೆ.ತಾಲೂಕಿಗೆ ನೀರಿನ ಅನಿವಾರ್ಯತೆ ಬಗ್ಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರುವಲ್ಲಿ ವಿಫಲವಾಗಿರುವ ಕಾರಣ ಅನಿವಾರ್ಯವಾಗಿ ಮಠಾಧೀಶರ ನೇತೃತ್ವದಲ್ಲಿ ನಿಯೋಗ ತೆರಳುವ ನಿಧಾ೯ರಕ್ಕೆ ಬರಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತಿಶ್, ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಪಿ.ಮಲ್ಲೇಶ್, ನೂತನ ಗ್ರಾಮ ಪಂಚಾಯ್ತಿ ಸದಸ್ಯರಾದ ಏಜೆಂಟ್ ಗಂಗಣ್ಣ, ಶ್ರೀನಿವಾಸ್, ಸೈಯದ್ ಜಲಾಲ್, ತಮ್ಮಡಿಹಳ್ಳಿ ಮಲ್ಲಿಕಣ್ಣ, ಕಾಗಿ೯ಲ್ ಸತೀಶ್, ಗಂಗಣ್ಣ, ಹೊಸಹಳ್ಳಿಚಂದ್ರಣ್ಣ, ಜಯಲಕ್ಷ್ಮಮ್ಮ, ಬೀರಣ್ಣ, ಪರಮೇಶ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...