ಹುಳಿಯಾರು ರೋಟರಿ ಸಂಸ್ಥೆಯಿಂದ 27 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವವನ್ನು ಇಲ್ಲಿನ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಜೂನ್ 13 ರ ಭಾನುವಾರ ಏರ್ಪಡಿಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ ಹಾಗೂ ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಾಹವಾಗುವ ವಧು-ವರರಿಗೆ ಬಟ್ಟೆ, ವಧುಗಳಿಗೆ ರೇಷ್ಮೆ ಸೀರೆ, ಕಾಲುಂಗುರ, ಬಳೆ, ಮಾಂಗಲ್ಯ, ಮಡಲಕ್ಕಿ, ಬಾಸಿಂಗಗಳನ್ನು ಉಚಿತವಾಗಿ ನೀಡಲಾಗುವುದು. ಹೆಣ್ಣಿಗೆ 18 ಹಾಗೂ ಗಂಡಿಗೆ 21 ವರ್ಷ ತುಂಬಿದವರಿಗೆ ಮಾತ್ರ ಇಲ್ಲಿ ವಿವಾಹವಾಗಲು ಅವಕಾಶಗಳಿದ್ದು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಬಂದು ರಾಮಾಹಾಲ್ ಲಕ್ಷ್ಮೀಕಾಂತ್, ವಿನಾಯಕ ಟೆಕ್ಸ್ಟೈಲ್ ರಮಾಕಾಂತ್, ಎಲ್ಐಸಿ ರವೀಶ್, ರಶ್ಮಿ ಎಲೆಕ್ಟ್ರಿಕಲ್ ಶ್ರೀನಿವಾಸ್ ಅವರಲ್ಲಿ ಹೆಸರು ನೊಂದಾಯಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ