ವಿಷಯಕ್ಕೆ ಹೋಗಿ

ಸೋರಲಮಾವುವಿನಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ

ಬೆಂಗಳೂರು ಜಲ ಸಂವರ್ಧನೆ ಯೋಜನಾ ಸಂಘ, ಕೃಷಿ ವಿಶ್ವ ವಿದ್ಯಾಲಯ, ಜಿಲ್ಲಾ ಮಾರ್ಗದರ್ಶನ ತಂಡ, ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹುಳಿಯಾರು ಸಮೀಪದ ಸೋರಲಮಾವು ಗ್ರಾಮದಲ್ಲಿ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯಲ್ಲಿ ತೆಗೆದುಕೊಳ್ಳಲಾದ ರೈತರ ಕ್ಷೇತ್ರ ಪಾಠಶಾಲೆ ಅಡಿಯಲ್ಲಿ ಏರ್ಪಡಿಸಿದ್ದ ಭತ್ತ ಬೆಳೆಯ ಕ್ಷೇತ್ರೋತ್ಸವವು ಯಶಸ್ವಿಯಾಗಿ ನಡೆಯಿತು.

ಗ್ರಾಮದ ಯುವ ರೈತಜಿ.ಈಶ್ವರಯ್ಯ ಅವರು ಮಾತನಾಡಿ ಕೆರೆಗಳು ಗ್ರಾಮದ ಸಂಪತ್ತುಗಳು ಎನ್ನುವ ಕಾರಣದಿಂದ ಕೆರೆ ಅಭಿವೃದ್ಧಿ ಮೂಲಕ ರೈತರ ಕೃಷಿಗೆ ನೆರವಾಗಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಜನರ ಸ್ಪಂದನೆ ಇಲ್ಲದ ಕಾರಣ ಯೋಜನೆಗಳು ವಿಫಲವಾಗುತ್ತಿವೆ. ಹಾಗಾಗಿ ಗ್ರಾಮದ ಪ್ರತಿಯೊಬ್ಬರೂ ಕೆರೆ ಅಭಿವೃದ್ಧಿ ಸಂಘಕ್ಕೆ ಸೇರಿಕೊಂಡು ಹೂಳು ತೆಗೆಯುವ, ಏರಿ ದುರಸ್ಥಿ ಮಾಡುವ, ಗಿಡಗಂಟೆಗಳನ್ನು ಕೀಳುವ ಕೆಲಸಗಳಲ್ಲಿ ಭಾಗಿಯಾಗಿ ಮುಂದಿನ ಉತ್ತಮ ಫಸಲಿಗೆ ಪೂರಕ ವಾತಾವರಣ ನಿರ್ಮಾಣ ಮಾಡುವಂತೆ ಕರೆ ನೀಡಿದರು.

ರೈತ ಉತ್ತಮ ಫಸಲು ಪಡೆಯುವ ನಿಟ್ಟಿನಲ್ಲಿ ಕಾಳುಗಳ ಮೊಳಕೆ ಮಾಡುವಾಗ,ನಾಟಿ ಮಾಡುವಾಗ ಎಚ್ಚರಿಕೆಯಾಗಿರಬೇಕು ಹಾಗೂ ಸಮರ್ಪಕ ನೀರು ನಿರ್ವಹಣೆ, ಔಷಧ ಸಿಂಪಡಣೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಕರೇಗೌಡ ಹಿಂದಿನ ಸಾಂಪ್ರದಾಯಕ ಪದ್ದತಿ ಹಾಗೂ ಈಗ ಪ್ರಾಯೋಗಿಕವಾಗಿ ನಾಟಿ ಮಾಡಿರುವ ಜಪಾನ್ ಮಾದರಿಯ ಸಾಲು ಸಸಿ ಪದ್ದತಿಗೆ ಹೊಲಿಕೆ ಮಾಡಿದಲ್ಲಿ ಸಾಂಪ್ರದಾಯಕ ಪದ್ದತಿಯಲ್ಲಿ 20 ತೆಂಟೆ ಬಂದರೆ ಜಪಾನ್ ಪದ್ದತಿಯಲ್ಲಿ 40 ತೆಂಟೆ, ಅಲ್ಲಿ 120 ಕಾಳು ಕಟ್ಟಿದರೆ ಇಲ್ಲಿ 250 ಕಾಳು ಕಟ್ಟುತ್ತದೆ. ಜಪಾನ್ ಮಾದರಿಯಲ್ಲಿ ರೋಗಭಾದೆ ಇರುವುದಿಲ್ಲ ಹಾಗೂ ಕೇವಲ ಒಂದೇ ಬಾರಿ ಕಳೆ ಕೀಳುವ ಅನುಕೂಲಗಳು ಇರುತ್ತವೆ ಎಂದು ವಿವರಿಸಿದರು.

ಜಿಲ್ಲಾ ಮಾರ್ಗದರ್ಶನ ತಂಡದ ಹುಳಿಯಾರು ಮುಖ್ಯಸ್ಥ ವೆಂಕಟೇಶ್ ಅವರು ಮಾತನಾಡಿ ದೊಡ್ಡಬಿದರೆ ಹಾಗೂ ಸೋರಲಮಾವು ಕೆರೆಗಳನ್ನು ಮಾದರಿ ಕೆರೆ ಮಾಡಲು ಗುರಿ ಇಟ್ಟುಕೊಂಡು ಈಗಾಗಲೇ 25 ಲಕ್ಷದ ಬಜೆಟ್ ತಯಾರಿಸಲಾಗಿದೆ. ಅಲ್ಲದೆ, ಈ ಗ್ರಾಮದಲ್ಲಿ ಮತ್ತೊಂದು ಕೆರೆಯನ್ನು ಜಲಸಂವರ್ಧನೆ ಯೋಜನೆಗೆ ಸೇರ್ಪಡೆಮಾಡಿಕೊಳ್ಳುವ ಚಿಂತನೆ ಇದ್ದು ಈ ಯೋಜನೆಯಲ್ಲಿ ನೇರವಾಗಿ ತಮ್ಮ ಕೆರೆ ಸಂಘಕ್ಕೆ ಹಣ ಬರುವುದಿದ್ದು ತಮ್ಮ ಗ್ರಾಮದ ಅಭಿವೃದ್ಧಿಯನ್ನು ತಾವುಗಳೇ ನಿರ್ಧರಿಸಿ ಮಾಡಿಕೊಳ್ಳುವ ಸೌಲಭ್ಯವಿದೆ ಎಂದು ತಿಳಿಸಿದರು.

ತುಮಕೂರು ಕೃಷಿ ತಜ್ಞ ಶ್ರೀನಿವಾಸಮೂರ್ತಿ,ಶ್ರೀ ಆಂಜನೇಯ ಸ್ವಾಮಿ ಕೆರೆ ಅಭಿವೃದ್ಧಿ ಸಂಘದ ಅಧ್ಯಕ್ಷ ಕರಿಯಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಸೀಗೆಬಾಗಿ ಕೆರೆ ಸಂಘದ ಅಧ್ಯಕ್ಷ ದಯಾನಂದ್, ಗ್ರಾ.ಪಂ.ಸದಸ್ಯ ಸಿದ್ದೇಗೌಡ, ಗೋಪಾಲಯ್ಯ, ಪಾಲಾಕ್ಷಯ್ಯ, ಕಾಂತರಾಜು, ಮಹಮದ್ ರಸೂಲ್ ಮತ್ತಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...