ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ಇದುವರೆಗೂ ನಡೆದ ಹೋರಾಟಗಳಿಗೆ ಸಕಾ೯ರ ನೀಡಿದ ಭರವಸೆಗಳು ವರ್ಷಗಳುರುಳಿದರೂ ಅನುಷ್ಠಾನಗೊಳ್ಳದೆ ಕೇವಲ ಭರವಸೆಗಳಾಗಿಯೆ ಉಳಿದಿರುವ ಹಿನ್ನಲೆಯಲ್ಲಿ ಶಾಶ್ವತ ಕುಡಿಯುವ ನೀರು ಹೋರಾಟ ಒಕ್ಕೂಟದ ವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಾಗೂ ಮುಖ್ಯಮಂತ್ರಿಗಳ ಮನೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಈ ಹಿನ್ನಲೆಯಲ್ಲಿ ಇದೇ 29 ರ ಭಾನುವಾರ ಮದ್ಯಾಹ್ನ 2 ಗಂಟೆಗೆ ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಹಿಂದೆ ನಡೆದ ಧರಣಿ ಸಂದರ್ಭದಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡಿದ ಎಲ್ಲಾ ಸಂಘ ಸಂಸ್ಥೆಗಳು,ಹಾಗೂ ತಾಲ್ಲೂಕಿನ ಹೋರಾಟಗಾರರು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಗಾಣಧಾಳ್ ವೀರಭದ್ರಪ್ಪ ಅಥವಾ ಕೆಂಕೆರೆ ಸತೀಶ್ ಅವರನ್ನು ಸಂಪಕಿ೯ಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ