ವಿಷಯಕ್ಕೆ ಹೋಗಿ

ನವೆಂಬರ್ 24 ರಿಂದ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆ:ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ

(ಹುಳಿಯಾರು ಸಮೀಪದ ಬರದಲೇಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಹಾಲಿನ ಗುಣಮಟ್ಟ ಪರೀಕ್ಷಿಸುವ ಮೂಲಕ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಉದ್ಘಾಟಿಸಿದರು. ಎನ್.ಗೌಡಯ್ಯ, ಧನಂಜಯ್ಯ, ಕೆ.ಸಿ.ಕೇಶವಮೂರ್ತಿ, ಕೆಂಕೆರೆ ಸತೀಶ್ ಇದ್ದಾರೆ.)

ನವೆಂಬರ್ 24 ರಿಂದ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆ:ಹಳೆಮನೆ ಶಿವನಂಜಪ್ಪ
--------------------------------------------------------------------
ನವೆಂಬರ್ 24 ರಿಂದ ತುಮಕೂರು ಹಾಲು ಒಕ್ಕೂಟಕ್ಕೆ ಹಾಲು ಹಾಕುತ್ತಿರುವ ರೈತರಿಗೆ ಇಲ್ಲಿಯವರೆವಿಗೆ ಸರ್ಕಾರದ ಪ್ರೋತ್ಸಾಹ ಧನ ಸೇರಿ ನೀಡಲಾಗಿತ್ತಿದ್ದ ಹದಿನಾರುವರೆ ರು. ಬದಲಿಗೆ ಎಪ್ಪತೈದು ಪೈಸೆ ಹೆಚ್ಚಳ ಮಾಡಿ ಹದಿನೇಳುಕಾಲು ರು. ನೀಡಲು ನಿರ್ಧರಿಸಿರುವುದಾಗಿ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಅವರು ತಿಳಿಸಿದರು.
ಹುಳಿಯಾರು ಸಮೀಪದ ಬರದಲೇಪಾಳ್ಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ತುಮಕೂರು ಒಕ್ಕೂಟ ಹಾಲು ಪೌಡರಿಗೆ ಹೋಗಿ ಬಹಳ ನಷ್ಟದಲ್ಲಿತ್ತು. ಆದರೆ ಈಗ ಕೇರಳ, ಬಳ್ಳಾರಿ, ಮುಂಬೈಗಳಿಗೆ ಹೋಗುತ್ತಿದ್ದು ಲಾಭದಲ್ಲಿ ನಡೆಯುತ್ತಿದೆ ಎಂದರಲ್ಲದೆ, ಚಿಕ್ಕನಾಯಕನಹಳ್ಳಿ ತಾಲೂಕಿನಿಂದ ಮೊದಲು ದಿನಕ್ಕೆ 6 ಸಾವಿರ ಲೀ. ಹಾಲು ಒಕ್ಕೂಟಕ್ಕೆ ಹೋಗುತ್ತಿತ್ತು. ಈಗ 40 ಸಾವಿರ ಲೀ. ಹೋಗುತ್ತಿದೆ. ಇದನ್ನು 1 ಲಕ್ಷಕ್ಕೆ ಮುಟ್ಟಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ವಿಸ್ತರಣಾಧಿಕಾರಿ ಯರಗುಂಟಪ್ಪ ಅವರು ಮಾತನಾಡಿ ಷೇರುದಾರರು, ಕಾರ್ಯಕಾರಿ ಮಂಡಲಿ ಸದಸ್ಯರು ಹಾಗೂ ಸಿಬ್ಬಂಧಿವರ್ಗದವರು ಸಹಕಾರ ಸಂಘದ ಆಧಾರ ಸ್ತಂಭಗಳಾಗಿದ್ದು ಜಾತಿ ಮತ್ತು ರಾಜಕೀಯ ನುಸುಳಿಸದೆ ಒಂದಾಣಿಕೆಯಿಂದ ತಮ್ಮತಮ್ಮ ಕರ್ತವ್ಯ ನಿರ್ವಹಿಸಿದರೆ ಏಳಿಗೆ ಸಾಧ್ಯ ಎಂದರಲ್ಲದೆ, ಉತ್ಪಾದನೆಯಾಗುವ ಊರಿನಲ್ಲೇ ಮಾರುಕಟ್ಟೆ ವ್ಯವಸ್ಥೆ, ಉತ್ತಮ ಬೆಲೆ ಹಾಗೂ ಬಟವಾಡೆಯ ಏಕೈಕ ಉಪಕಸುಬು ಹೈನುಗಾರಿಕೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬರದಲೇಪಾಳ್ಯ ಹಾಲಿನ ಸೊಸೈಟಿಯ ಆರ್.ಗುರುಸಿದ್ಧಯ್ಯ ವಹಿಸಿದ್ದರು. ಸಮಾಲೋಚಕರಾದ ಬುದ್ಧಿಪ್ರಸಾದ್, ಗ್ರಾ.ಪಂ.ಅಧ್ಯಕ್ಷ ಎನ್.ಗೌಡಯ್ಯ, ಗ್ರಾ.ಪಂ.ಸದಸ್ಯ ಧನಂಜಯ್ಯ, ಕೆಂಕೆರೆ ಹಾಲಿನ ಸೊಸೈಟಿ ಅಧ್ಯಕ್ಷ ಕೆ.ಸಿ.ಕೇಶವಮೂರ್ತಿ, ಹಸಿರುಸೇನೆ ಸಂಚಾಲಕ ಕೆಂಕೆರೆ ಸತೀಶ್, ಮರುಳಯ್ಯ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.
ನೀಲಕಂಠಮೂರ್ತಿ ಪ್ರಾರ್ಥಿಸಿ ಮರುಳಸಿದ್ಧಪ್ಪ ಸ್ವಾಗತಿಸಿ ಶಾಂತಕುಮಾರ್ ನಿರೂಪಿಸಿ ಪಿ.ನಾಗರಾಜು ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...