ವಿಷಯಕ್ಕೆ ಹೋಗಿ

ಚಿನಾಹಳ್ಳಿ ತಾಲ್ಲೂಕಿಗೆ ಹೇಮೆ:102.60 ಕೋಟಿ ಅಂದಾಜು ವೆಚ್ಚದಲ್ಲಿ 26 ಕೆರೆಗೆ ನೀರು

ಚಿನಾಹಳ್ಳಿ ತಾಲ್ಲೂಕಿಗೆ ಹೇಮೆ:102.60 ಕೋಟಿ ಅಂದಾಜು ವೆಚ್ಚದಲ್ಲಿ 26 ಕೆರೆಗೆ ನೀರು
---------------------------------------------
ಸಚಿವರಿಂದ ಬೋರನಕಣೆವೆಗೂ ನೀರು ಹರಿಸುವ ಭರವಸೆ
-------------------------------------
ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಯೋಜನೆಗಾಗಿ ಕಾವೇರಿ ನೀರಾವರಿ ನಿಗಮದಿಂದ 102.60ಕೋಟಿ ವೆಚ್ಚದಲ್ಲಿ ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಸಕಾ೯ರ ಒಪ್ಪಿ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಯೋಜನೆ ಅನುಷ್ಠನಗೊಳಿಸುವ ಉದ್ದೇಶ ಸಕಾ೯ರದಲ್ಲಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ತಲ್ಲೂಕಿನ ಕುಡಿಯುವ ನೀರಿವ ಸಮಸ್ಯೆ ಪ್ರಸ್ತಾವನೆಯಾಗಿದ್ದರ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದ ಅವರು ತಾವು ತಾಲ್ಲೂಕಿನ ಸಾಸಲು,ಪೆಮ್ಮಲದೇವರಹಳ್ಳಿ,ಶೆಟ್ಟಿಕೆರೆ ಮುಖಾಂತರ ಸಾಲು ಕೆರೆಗಳ ಮೂಲಕ ಬೋರನಕಣೆವೆ ಜಲಾಶಯಕ್ಕೆ ನೀರು ಹರಿಸುವ ಯೋಜನೆ ಬಗ್ಗೆ ಪ್ರಶ್ನಿಸಿದಕ್ಕೆ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿಯವರು ನೀಡಿದ ಉತ್ತರ ಒಟ್ಟಾರೆ ತೃಪ್ತಿದಾಯಕವಾಗಿದೆ ಎಂದರು.
ನೀರಿನ ಅಲಭ್ಯತೆ ಹಾಗೂ ಕೆಲವೊಂದು ತಾಂತ್ರಿಕ ಕಾರಣದಿಂದ ಉದ್ದೇಶಿತ ಯೋಜನೆಯಲ್ಲಿ ಬೋರನಕಣಿವೆ ಕೈ ಬಿಡಲಾಗಿದ್ದು ಇದನ್ನು ಹೊರತುಪಡಿಸಿದರೆ ತಾಲ್ಲೂಕಿನ 26 ಕೆರೆಗಳಲ್ಲಿ 22 ಕೆರೆಗಳಿಗೆ ನೈಸಗಿ೯ಕ ಕಾಲುವೆ ಮುಖಾಂತರ ಹಾಗು 4 ಕೆರೆಗಳಿಗೆ ಏತ ನೀರಾವರಿ ಮುಖಾಂತರ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಯೋಜನೆಯಿಂದ ಬೋರನಕಣಿವೆ ಕೈ ಬಿಟ್ಟಿರುವುದರಿಂದಾಗುವ ಆಗಬಹುದಾದ ಅನಾನುಕೂಲ ಹಾಗೂ ಸಾಧಕಭಾದಕಗಳ ಬಗ್ಗೆ ತಾವು ಆ ಕೂಡಲೆ ಸಚಿವರಿಗೆ ಮನವರಿಕೆ ಮಾಡಿದಲ್ಲದೆ ಉದ್ದೇಶಿತ ಯೋಜನೆಯಲ್ಲೆ ಬೋರನಕಣಿವೆ ಜಲಾಶಯಕ್ಕೆ ನೀರು ಹರಿಸಲು ಕಾರ್ಯಯೋಜನೆ ರೂಪಿಸಬೇಕೆಂದು ಸದನದಲ್ಲೆ ಒತ್ತಾಯಿಸಿರುವುದಾಗಿ ತಿಳಿಸಿದರು.

ಬೋರನಕಣಿವೆಗೆ ನೀರು ಹರಿಸುವ ಕುರಿತಂತೆ ಹುಳಿಯಾರು ಭಾಗದಲ್ಲಿ ವಷಾ೯ತರಗಳಿಂದ ನಡೆಯುತ್ತಿರುವ ಪ್ರತಿಭಟನೆ,ವಿಧಾನಸೌಧದಲ್ಲೆ
ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ರವರೊಂದಿಗೆ ತಾವು ನಡೆಸಿದ ಮಾತುಕಥೆಯನ್ನು ವಿವರಿಸಿದ್ದರ ಹಿನ್ನಲೆಯಲ್ಲಿ ಸಚಿವರು ಬೋರನಕಣಿವೆಗೂ ನೀರು ಹರಿಸುವ ಭರವಸೆ ನೀಡಿದ್ದಾರೆ ಎಂದರು.ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನಗೊಳ್ಳುವವರೆಗೂ ಮತ್ತು ಉದ್ದೇಶಿತ ಯೋಜನೆಯಲ್ಲೆ ನೀರು ಹರಿಸುವವರೆಗೂ ತಾವೂ ವಿಶ್ರಮಿಸುವುದಿಲ್ಲವೆಂದು ಈ ಸಂದರ್ಭದಲ್ಲಿ ಸ್ಪಷ್ಠಪಡಿಸಿದರು.
ಅಭಿನಂದನೆ:ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆ ರೂಪಿಸಿ ಯೋಜನೆ ಅನುಷ್ಠಾನಗೊಳ್ಳಲು ಕಾರಣಕರ್ತರಾದ ಶಾಸಕ ಸಿ.ಬಿ.ಸುರೇಶ್ ಬಾಬು,ಸಮಸ್ಯೆ ಅರಿತು ಒಪ್ಪಿಗೆ ನೀಡಿದ ನೀರು ಹರಿಸಲು 102.60ಕೋಟಿ ಮೀಸಲಿಟ್ಟಿರುವ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಲ್ಲಿನ ಸಮಸ್ಯಗೆ ಸ್ಪಂದಿಸಿದ ಸಚಿವ ಸುರೇಶ್ ಕುಮಾರ್ ಅಲ್ಲದೆ ಸುಮಾರು 50ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ತಿಂಗಳುಗಟ್ಟಲೆ ಹೋರಾಟ ನಡೆಸಿದ ರೈತಸಂಘದ ಕಾರ್ಯಕರ್ತರುಗಳು,ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರನ್ನೂ ಹುಳಿಯಾರು ಹೋಬಳಿ ಜಾತ್ಯಾತೀತ ಜನತದಳ ಅಭಿನಂದಿಸಿದೆ.

ಈ ಕುರಿತು ಜಿಪಂ ಸದಸ್ಯೆ ಮಂಜುಳಾ ಗವಿರಂಗಯ್ಯ,ತಾಪಂ ಉಪಾಧ್ಯಕ್ಷೆ ಬೀಬಿಪಾತಿಮಾ,ಗ್ರಾಪಂ ಅಧ್ಯಕ್ಷ ಸೈ ಅನ್ಸರ್ ಅಲಿ,ತಾಪಂ ಸದಸ್ಯರಾದ ಕವಿತಾಪ್ರಕಾಶ್,ಮುಖಂಡರುಗಳಾದ ವಕೀಲ ರಮೇಶ್ ಬಾಬು,ಪ್ರಸನ್ನಕುಮಾರ್,ಅಹ್ಮದ್ ಖಾನ್,ಸೈಯದ್ ಜಲಾಲ್,ನಂದಿಹಳ್ಳಿ ಶಿವಣ್ಣ,ಡಿಶ್ ಬಾಬು ಮುಂತಾದವರು ಪತ್ರಿಕಾಹೇಳಕೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...