ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹುಳಿಯಾರು ದುರ್ಗಮ್ಮನ ವೈಭವದ ರಥೋತ್ಸವ

ಹುಳಿಯಾರು ಗ್ರಾಮದೇವತೆ ದುರ್ಗಾಪರಮೇಶ್ವರಿ ಅಮ್ಮನವರ 41 ನೇ ವರ್ಷದ ರಥೋತ್ಸವವು ಅಸಂಖ್ಯಾತ ಭಕ್ತರ ಉಪಸ್ಥಿತಿಯಲ್ಲಿ ವಿವಿಧ ಗ್ರಾಮದೇವತೆಗಳ ಸಮ್ಮುಖದಲ್ಲಿ ವೇದ ಮಂತ್ರ ಘೋಷಗಳ ನಾದದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಶುಕ್ರವಾರದಂದು ಯಶಸ್ವಿಯಾಗಿ ಜರುಗಿತು. ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜಾಕೈಂಕರ್ಯಗಳು ನೆರವೇರಿತು.ಮಂಗಳವಾಧ್ಯದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದೇವಿಯು ಮೂಲ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಗ್ರಾಮದೇವತೆ ಹುಳಿಯಾರಮ್ಮ,ತಿರುಮಲಾಪುರದ ಕೊಲ್ಲಾಪುರದಮ್ಮ,ಗೌಡಗೆರೆಯ ದುರ್ಗಮ್ಮ,ಹೊಸಹಳ್ಳಿಯ ಕೊಲ್ಲಾಪುರದಮ್ಮನವರೊಂದಿಗೆ ಭೇಟಿ ಮಾಡಿಸಿ ಭಕ್ತಾಧಿಗಳ ಉದ್ಘೋಷದೊಂದಿಗೆ ಕರೆತಂದು ರಂಗು ರಂಗಿನ ಬಾವುಟಗಳು, ತಳಿರು ತೋರಣಗಳು ಹಾಗೂ ಹೂವಿನ ಹಾರಗಳಿಂದ ಸರ್ವಾಲಂಕೃತಗೊಂಡ ರಥಕ್ಕೆ ಏರಿಸಲಾಯಿತು.ಮದ್ಯಾಹ್ನ 2 ಗಂಟೆಗೆ ರಥಕ್ಕೆ ಕಾಯಿ ಒಡೆಯುವ ಮೂಲಕ ಹಾಗೂ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿಲಾಯಿತು. ಮುಂಜಾನೆಯಿಂದಲೇ ಕಿಕ್ಕಿರಿದು ನೆರದಿದ್ದ ಭಕ್ತಾಧಿಗಳು ಜಯಘೋಷದೊಂದಿಗೆ ತೇರನ್ನೆಳದು ಸಂಭ್ರಮಿಸಿದರು. ಮಂಗಳವಾಧ್ಯದೊಂದಿಗೆ ಸಾಗಿಬಂದ ರಥಕ್ಕೆ ಬಾಳೆಹಣ್ಣು,ಧವನ ತೂರುವ ಮೂಲಕ ಭಕ್ತರು ತಮ್ಮ ಭಕ್ತಿಯನ್ನು ಹಾಗೂ ಹರಕೆಯನ್ನು ಸಮರ್ಪಿಸಿದರು.ನಂತರ ನೆರದಿದ್ದ ಭಕ್ತಾಧಿಗಳು ಹಾಗೂ ಹೆಣ್ಣುಮಕ್ಕಳು ಹಣ್ಣು ಕಾಯಿ ಮಾಡಿಸಿ ತಮ್ಮ ಇಷ್ಟ ದೈವವನ್ನು ಕಣ್ಣಿಗೆ ತುಂಬಿಕೊಂಡರು.ರಥೋತ್ಸವದ ಅಂಗ

ಶ್ರೀ ರಾಮನವಮಿ

ಹುಳಿಯಾರು ಸಮೀಪದ ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಶ್ರೀ ರಾಮ ಭಜನೆ ಮೂಲಕ ಶ್ರೀ ರಾಮ ದೇವರ ಉತ್ಸವವನ್ನು ಗ್ರಾಮದೇವತೆಗಳೊಂದಿಗೆ ವಿಭೃಂಜಣೆಯಿಂದ ನಡೆಸಿದರು. ಶ್ರೀ ರಾಮನವಮಿ ಪ್ರಯುಕ್ತ ಹುಳಿಯಾರಿನ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು. ಹುಳಿಯಾರಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜೈ ಮಾರುತಿ ಯುವಕ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಮನವಮಿ ಅಂಗವಾಗಿ ಮಜ್ಜಿಗೆ ಹಾಗೂ ಪನಿವಾರ ಸೇವೆ ನಡೆಯಿತು.