ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಸಾಂಸ್ಕೃತಿಕ ಹಬ್ಬದ ಸಮಾರಂಭವನ್ನು ವಾಗ್ದೇವಿ ವಿಲಾಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಇಸ್ರೋದಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ.ಹರೀಶ್ ಅವರು ಉದ್ಘಾಟಿಸಿದರು. ಮಕ್ಕಳ ಮನಸ್ಸು ಬಿಳಿಹಾಳೆಯಂತೆ ಶುಭ್ರವಾದದ್ದು ಅದರ ಮೇಲೆ ಉತ್ತಮ ಚಿತ್ರಗಳನ್ನು ಬಿಡಿಸಬೇಕಾದ್ದು ಪೋಷಕ ಹಾಗೂ ಶಿಕ್ಷಕರ ಕರ್ತವ್ಯ ಹಾಗೂ ಜವಬ್ದಾರಿಯಾಗಿದೆ ಎಂದು ಬೆಂಗಳೂರಿನ ವಾಗ್ದೇವಿ ವಿಲಾಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಇಸ್ರೋದಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ.ಹರೀಶ್ ಅಭಿಪ್ರಾಯಪಟ್ಟರು. ಹೋಬಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 5 ನೇ ವರ್ಷದ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ನಡೆದ ಸಾಂಸ್ಕೃತಿಕ ಹಬ್ಬದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಪ್ರತಿಯೊಂದು ಮಗುವಿನಲ್ಲಿ ಒಂದಲ್ಲ ಒಂದು ಪ್ರತಿಭೆ ಸುಪ್ತವಾಗಿರುತ್ತದೆ,ಅದನ್ನು ಹೊರ ತರುವ ಕಾರ್ಯ ಉತ್ತಮ ಹಾಗೂ ಪ್ರಜ್ಞಾವಂತ ಶಿಕ್ಷಕರು ಶಿಕ್ಷಣವನ್ನು ಒಂದು ಸಾಧನವಾಗಿ ಮಾಡಿಕೊಂಡಾಗ ಮಾತ್ರ ಸಾಧ್ಯೆವೆಂದರು. ಇಂದು ಮಕ್ಕಳ ಇಷ್ಟಕ್ಕೆ ಅನುಸಾರವಾಗಿ ಅವರಿಗೆ ಅಭ್ಯಾಸ ಮಾಡಿಸಬೇಕಿದೆ. ಪೋಷಕರು ತಮ್ಮ ಮಕ್ಕಳ ಆಸೆ ಆಕಾಂಕ್ಷೆಗಳನ್ನು ತಿಳಿದು ಅವರ ಆಭಿರುಚಿಗೆ ತಕ್ಕಂತೆ ಬಿಟ್ಟು,ಅವರು ಉತ್ತಮ ಮಾರ್ಗದಲ್ಲಿ ನಡೆಯುತಿದ್ದಾರೆಯೇ ಎಂದು ಗಮನಿಸಬೇಕಿದೆ,ಅವರು ತಪ್ಪು ಮಾಡಿದಾಗ ಅವರನ್ನು ಮತ್ತೊಬ್ಬರೊಂದ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070