ಗುರುವಾರ 63ನೇ ಗಣರಾಜ್ಯೋತ್ಸವದ ಅಂಗವಾಗಿ ನಗರಾದ್ಯಂತ ಸಡಗರ-ಸಂಭ್ರಮದಿಂದ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಸಮವಸ್ತ್ರ ಧರಿಸಿದ್ದ ಶಾಲಾ ಮಕ್ಕಳು ಬೆಳಗ್ಗಿನಿಂದಲೇ ಹೂ,ಬಾಳೆಕಂದು,ಮಾವಿನ ಎಲೆ ತಂದು ತೋರಣ ಕಟ್ಟಿ ರಾಷ್ಟ್ರಧ್ವಜ ಹಾಗೂ ಶಾಲಾ ಆವರಣವನ್ನು ಸಿಂಗರಿಸುತ್ತಿದ್ದುದು ಕಂಡುಬಂದಿತು. ಹೋಬಳಿಯ ವಾಸವಿ ಶಾಲೆ,ಕನಕದಾಸ ಶಾಲೆ,ಎಂ.ಪಿ.ಎಸ್ ಶಾಲೆ,ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆ, ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆ,ಬಿ.ಎಂ.ಎಸ್.ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹೋಬಳಿಯ ಎಲ್ಲಾ ಶಾಲೆಗಳಲ್ಲಿ ಹಾಗೂ ಆಸ್ಪತ್ರೆ,ದೂರವಾಣಿ ಸಂಪರ್ಕ ಕೇಂದ್ರ, ಅಂಚೆ ಕಛೇರಿ,ಗ್ರಾಮ ಪಂಚಾಯ್ತಿ,ಪೋಲೀಸ್ ಠಾಣೆ,ನಾಢಕಛೇರಿ, ಬ್ಯಾಂಕ್ ಗಳಲ್ಲಿಯೂ ತ್ರಿವರ್ಣಧ್ವಜ ಕಂಗೊಳಿಸುತ್ತಿತ್ತು. ಶಾಲೆಗಳಲ್ಲಿ ಮಕ್ಕಳು ಸಮವಸ್ತ್ರ ಧರಿಸಿ ಸಾಲಾಗಿ ನಿಂತು ಸೆಲ್ಯೂಟ್ ಮಾಡಿ ರಾಷ್ಟ್ರಧ್ವಜಕ್ಕೆ ಗೌರವ ನಮನ ಸಲ್ಲಿಸಿದರು,ನಂತರ ಸಿಹಿ ಹಂಚಿಕೆ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ