ವಿಷಯಕ್ಕೆ ಹೋಗಿ

ಹುಳಿಯಾರು ಹೋಬಳಿ ನಂದಿಹಳ್ಳಿಯಲ್ಲಿ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದವತಿಯಿಂದ ಹಮ್ಮಿಕೊಂಡಿದ್ದ 2011-12ನೇ ಸಾಲೀನ ಎನ್.ಎಸ್.ಎಸ್ ಶಿಬಿರವನ್ನ

ಪ್ರಸ್ತುತ ಸಮಾಜದ ಜನಜೀವನ ಅಭಿವೃದ್ದಿಯಾದಂತೆ,ಆವಿಷ್ಕಾರಗಳುಂಟಾದಂತೆ ಜನರಲ್ಲಿ ನಮ್ಮ ಪರಂಪರೆಯ ಬಗೆಗಿನ ಗಮನವೇ ಇಲ್ಲದಂತಾಗಿದೆ.ಆದರೆ ಇಂತಹ ಸಾಂಪ್ರದಾಯಿಕ ಭಕ್ತಿಯ ಪರಂಪರೆಯು ಇಂದಿಗೂ ಸಹ ಹಳ್ಳಿಗಾಡು ಪ್ರದೇಶಗಳಲ್ಲಿ ಜಿವಂತವಾಗಿದೆ ಎಂದು ಕುಪ್ಪೂರು ಮಠದ ಡಾ ಯತೀಶ್ವರ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಪಟ್ಟರು.

ಹುಳಿಯಾರು ಹೋಬಳಿಯ ಹೊಸಹಳ್ಳಿಯಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶ್ರೀವೆಂಕಟೇಶ್ವರ ಸ್ವಾಮಿ ದೇವಾಲಯದ ಧಾರ್ಮಿಕ ಸಮಾರಂಭಕ್ಕೆ ಆಗಮಿಸಿದ್ದ ಅವರು ತಮ್ಮ ಆಶೀರ್ವಚನ ನೀಡಿದರು.


ಈ ವರ್ಷ ಎಲ್ಲಾ ದೇವಾಲಯಗಳಿಗೂ ಶುಕ್ರದೆಸೆ ಪ್ರಾರಂಭವಾದಂತೆ ಕಾಣುತ್ತಿದೆ ಕಾರಣ ಸುಮಾರು ವರ್ಷಗಳಿಂದ ಜಿರ್ಣೋದ್ದಾರವಾದ ದೇವಾಲಯಗಳು ಈಗ ಉದ್ಘಾಟನೆಯಾಗುತ್ತವೆ,ಹಿಂದಿನ ಕಾಲದಲ್ಲಿ ರಾಜರುಗಳು ಮಠಮಾನ್ಯಗಳಿಗೆ ದೇಣಿಗೆ ರೂಪದಲ್ಲಿ ಸಂಪತ್ತು ನೀಡುತ್ತಿದ್ದರು ಅದರಂತೆ ಇಂದು ಬಿಜೆಪಿ ಸರ್ಕಾರ ತನ್ನ ಮೂರುವರೆವರ್ಷದ ಅಧಿಕಾರವಧಿಯಲ್ಲಿ ಮಠಮಾನ್ಯಗಳಿಗೆ ದೇಣಿಗೆಯನ್ನು ನೀಡಿದ್ದು,ಸಾರ್ವಜನಿಕ ಕಾರ್ಯಗಳಿಗೆ,ಮಕ್ಕಳ ವಿದ್ಯಾಭ್ಯಾಸಕ್ಕೆ,ಸಮಾಜಸೇವೆಗೆ ಉಪಯುಕ್ತವಾಗುವಂತೆ ಮಾಡಿದೆ,ಆದರೆ ಅದನ್ನು ಕೆಲವರು ಟೀಕಿಸುತ್ತಿದ್ದಾರೆ ಅದು ತಪ್ಪು ಮಠಗಳಲ್ಲಿಯೂ ಸಹ ಜನಪರ ಕಾರ್ಯಗಳು ನಡೆಯುತ್ತವೆ ಎಂದರು.ಮತದಾರರು ತಮ್ಮ ಮತ ಹಾಕುವುದಕ್ಕಿಂತ ಮುಂಚೆ ಒಮ್ಮೆ ಯೋಚಿಸಿ ನಮಗೆ,ನಮ್ಮ ಸಮಾಜಕ್ಕೆ ಯಾರು ಉತ್ತಮ ಸೇವಯನ್ನು ಮಾಡುತ್ತಾರೆ ಅಂತಹವರನ್ನು ಗುರ್ತಿಸಿ ಮತಚಲಾಯಿಸಿ ಎಂದು ಕಿವಿಮಾತು ಹೇಳಿದರು.ರೇಣುಕಾಚಾರ್ಯ ಅವರು ವಿರಶೈವ ಸಮಾಜದ ಅಭಿವೈದ್ದಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ,ಅದರಂತೆ ಕಿರಣ್ ಕುಮಾರ್ ಇಡೀ ತಾಲ್ಲೂಕಿಗೆ ಹೇಮಾವತಿ ನೀರು ಹರಿಸಲು ಶ್ರಮಪಟ್ಟು, ಶ್ರಮಕ್ಕೆ ಪ್ರತಿಫಲವಾಗಿ ಇನ್ನೂ ಕೆಲವು ತಿಂಗಳುಗಳಲ್ಲಿ ಹೇಮಾವತಿ ನೀರನ್ನು ತಾಲ್ಲೂಕಿನ ಜನತೆ ಪಡೆಯಲಿದ್ದಾರೆ ಎಂದರು.


ಕ್ಯಾಬಿನೇಟ್ ನ ಪ್ರಶ್ನೋತ್ತರವೇಳೆಯನ್ನು ಬಿಟ್ಟು ಬಂದಿದ್ದ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಮಾತನಾಡಿ ಎಲ್ಲಾ ಕೆಲಸಗಳಿಗೆ ದೇವರ ಕೃಪೆ ಇರಬೇಕು, ಪ್ರತಿಯೊಬ್ಬ ಮನುಷ್ಯನ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಭಗವಂತನ ಆಶೀವರ್ಾದ ಬೇಕೇಬೇಕು.ಅದರಂತೆ ನಾವು ಪ್ರತಿ ದಿನ ಬೆಳಿಗ್ಗೆ ಎದ್ದು ಆ ದೆವರಲ್ಲಿ ಬೇಡಿಕೊಂಡರೆ ಅದು ನಮ್ಮನ್ನು ಸದಾಕಾಲ ಕಾಯುತ್ತದೆ ಎಂದರು.ಅಲ್ಲದೆ ತಾಲ್ಲೂಕಿಗೆ ಹೇಮಾವತಿ ನೀರು ತರಲು 108 ಕೋಟಿಗಳನ್ನು ಮಂಜೂರು ಮಾಡಿಸಿದ ಕಿರಣ್ ಕುಮಾರ್ ಅಧಿಕಾರದಲ್ಲಿ ಇಲ್ಲದಿದ್ದರೂ ಸಹ ಜನಪರ ಸೇವಗಾಗಿ ಶ್ರಮಿಸುತ್ತಿದ್ದಾರೆ ಅವರಿಗೆ ನಿಮ್ಮೆಲ್ಲರ ಸಂಪೂರ್ಣ ಬೆಂಬಲವಿರಲಿ ಎಂದು ತಿಳಿಸಿದರು.


ಸಮಾರಂದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯರಾದ ಕೆಂಕೆರೆ ನವೀನ್,ಹೆಚ್.ಜಯಣ್ಣ,ಜಿ.ಪಂ.ಸದಸ್ಯೆ ನಿಂಗಮ್ಮರಾಮಯ್ಯ, ಗ್ರಾ.ಪಂ.ಸದಸ್ಯರಾದ ಡಿ.ಸುರೇಶ್,ಭಾಗ್ಯಮ್ಮ,,ಸುಗಂಧರಾಜು ಗ್ರಾಮಸ್ಥರಾದ ರಾಮಯ್ಯ,ನಾಗೊಜಿರಾವ್,ಶ್ರೀನಿವಾಸ್,ಶಿವನಂಜಪ್ಪ,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...