ಹುಳಿಯಾರು ಹೋಬಳಿ ಕೆಂಕೆರೆಯ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಕೃಷ್ಣಮೂರ್ತಿ(88) ಶುಕ್ರವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ಮೃತರಾಗಿದ್ದಾರೆ. ಇವರು ಧರ್ಮರತ್ನಾಕರ,ಸಮಾಜ ಸೇವಾ ವಿಭೂಷಣ ಪ್ರಶಸ್ತಿಗಳಿಗೆ ಬಾಜನರಾಗಿದ್ದು, ಹುಳಿಯಾರಿನ ಬಸವೇಶ್ವರ ವಿದ್ಯಾಸಂಸ್ಥೆಯ ಕಾರ್ರದರ್ಶಿಗಳಾಗಿದ್ದರು. ಮೃತರಿಗೆ ಒಬ್ಬ ಮಗ,ಮೂವರು ಮೊಮ್ಮಕ್ಕಳು ಇದ್ದಾರೆ..ಮಾಜಿ ಶಾಸಕ ಕಿರಣ್ ಕುಮಾರ್,ತಹಶೀಲ್ದಾರ್ ಉಮೇಶ್ಚಂದ್ರ, ಎಎಸೈ,ಡಿ,ಎಸ್,ಎಸ್ ಮುಖಂಡರು,ತಾ.ಪಂ.ಸದಸ್ಯ ನವೀನ್,ಕೆಂಕೆರೆ ಗ್ರಾ.ಪಂ.ಸದಸ್ಯರು ಸೇರಿದಂತೆ ಬಸವೇಶ್ವರ ಶಾಲೆಯ ಶಿಕ್ಷಕರು,ಮಕ್ಕಳು ಮೃತರ ಅಂತಿಮ ದರ್ಶನ ಪಡೆದು,ಕಂಬನಿ ಮಿಡಿದಿದ್ದಾರೆ.ಶನಿವಾರ ಮೃತರ ಅಂತ್ಯಕ್ರಿಯೆ ನೆರವೇರಿತು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ