ವಿಷಯಕ್ಕೆ ಹೋಗಿ

ಭವ್ಯಭಾರತದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು : ಕ್ಷೇತ್ರ ಶಿಕ್ಷಣಾಧಿಕಾರಿ

ಹುಳಿಯಾರಿನ ವಾಸವಿ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ಉದ್ಘಾಟಿಸಿದರು..ಕೆನರಾಬ್ಯಾಂಕ್ ಮ್ಯಾನೇಜರ್ ಸತೀಶ್ ,ಟಿ.ಆರ್.ಲಕ್ಷ್ಮಿಕಾಂತ್,ಚಿ.ನಾ.ಹಳ್ಳಿಯ ತಿಮ್ಮಯ್ಯ, ಇಂದಿರಾಗಾಂಧಿ ಶಾಲೆಯ ಮುಖ್ಯಶಿಕ್ಷಕ ದೇವೇಂದ್ರಪ್ಪ,ಶಿಕ್ಷಕ ರಮೇಶ್,ಮುಖ್ಯಶಿಕ್ಷಕಿ ಗಾಯತ್ರಿ ಇದ್ದಾರೆ.

ಸ್ಪರ್ಧಾತ್ಮಕ ಪ್ರಪಂಚದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಪೈಪೋಟಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಭವ್ಯಭಾರತ ನಿರ್ಮಾಣವಾಗ ಬೇಕಾದರೆ ಇಂದಿನ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಮಹತ್ವವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ಅಭಿಪ್ರಾಯಪಟ್ಟರು.

ಹೋಬಳಿ ವಾಸವಿ ಸಂಸ್ಥೆಯ ಟಿ.ಆರ್.ಶ್ರೀನಿವಾಸಶ್ರೇಷ್ಠಿ ರುಕ್ಮಿಣಮ್ಮ ಪ್ರೌಢಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಉದ್ಘಾಟಸಿ ಮಾತನಾಡಿದರು.


ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ.ಇದರಿಂದ ಮಕ್ಕಳು ತಮ್ಮ ಸುಪ್ತ ಪ್ರತಿಭೆಯನ್ನು ಅಭಿವ್ಯಕ್ತಿಸಲು ಸಹಕಾರಿಯಾಗುತ್ತದೆ ಎಂದರು. ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ವಿವಿಧ ಸಂಘಗಳನ್ನು ರಚನೆ ಮಾಡಿ, ಮಗು ಈ ಸಂಘಗಳಿಗೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಮುನ್ನೆಡೆದು,ನಾಯಕತ್ವ ಗುಣ,ಸಹಕಾರ ಮನೋಭಾವ ಹಾಗೂ ಕೂಡಿಬಾಳುವುದರ ಬಗ್ಗೆ ತಿಳಿಯಲು ನೆರವಾಗುತ್ತವೆ ಎಂದರು.ಶಾಲೆ ಪ್ರಾರಂಭದಿಂದ ಇಲ್ಲಿಯವರೆಗೆ ಮಗು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಎಷ್ಟರ ಮಟ್ಟಿಗೆ ಪ್ರಗತಿಯನ್ನು ಹೊಂದಿದ್ದಾನೆ ಎಂಬುದನ್ನು ತಿಳಿಸುವ ಶಾಲಾ ವಾರ್ಷಿಕೋತ್ಸವ ಮಗುವಿನ ಅಂತರಾಳದ ಸುಪ್ತ ಪ್ರತಿಭೆಯನ್ನು ಬಿಂಬಿಸುತ್ತದೆ ಎಂದರು.


ಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಾಸವಿಸಂಸ್ಥೆ ಪ್ರಾರಂಭವಾಗಿ ಇಲ್ಲಿಗೆ 43ವರ್ಷಗಳಾಗಿವೆ,ನಮ್ಮ ತಾಲ್ಲೂಕಿನಲ್ಲೆ 2ನೇದಾಗಿ ಪ್ರಾರಂಭವಾದ ಖಾಸಗಿ ಶಾಲೆ ಇದಾಗಿದ್ದು,ಇಲ್ಲಿ ಅಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶವಿದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ.ಈ ಶಾಲೆಯ ಸಂಸ್ಥಾಪಕರ ಹಾಗೂ ಶಿಕ್ಷಕರ ಪರಿಶ್ರಮದಿಂದಾಗಿ ಇಲ್ಲಿಯವರೆ ಸಾಗುತ್ತಾ ಬಂದಿರುವ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಕಲ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸಿ,ಅವರಿಗೆ ಉತ್ತಮ ಭವಿಷ್ಯವನ್ನು ರೂಪಿಸಲಿದೆ ಎಂದರು.


ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಪಟು ಹಾಗೂ ಕೆನರಾಬ್ಯಾಂಕ್ ಮ್ಯಾನೇಜರ್ ಸತೀಶ್ 10ನೇ ತರಗತಿಯ ಮಕ್ಕಳಿಗೆ ಶುಭಹಾರೈಸಿದರು,ಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್, ಚಿ.ನಾ.ಹಳ್ಳಿಯ ತಿಮ್ಮಯ್ಯ, ಇಂದಿರಾಗಾಂಧಿ ಶಾಲೆಯ ಮುಖ್ಯಶಿಕ್ಷಕ ದೇವೇಂದ್ರಪ್ಪ, ವಾಸವಿ ಶಾಲೆಯ ಮುಖ್ಯಶಿಕ್ಷಕಿ ಗಾಯತ್ರಿ,ಶಿಕ್ಷಕರಾದ ರಮೇಶ್,ಗಂಗಾದರಯ್ಯ,ಮಂಜುನಾಥ್ ಹಾಗೂ ಶಿಕ್ಷಕರು,ಮಕ್ಕಳು ಹಾಜರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...