ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದ ಉನ್ನತ ಶಿಕ್ಷಣ ಸಚಿವ ಡಾ. ವೇದವ್ಯಾಸ ಶ್ರೀನಿವಾಸ ಆಚಾರ್ಯ ಅವರು ಹೃದಯಾಘಾತದಿಂದ ನಿಧನರಾಗಿರುವುದಕ್ಕೆ ಹುಳಿಯಾರಿನ ವಿಪ್ರ ಸಂಘದ ಅಧ್ಯಕ್ಷ ಡಿ.ಆರ್.ನರೇಂದ್ರಬಾಬು, ಕಾರ್ಯದರ್ಶಿ ವಿಶ್ವನಾಥ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿತಕ್ಕಾಗಿ, ಅಭಿವೃದ್ಧಿಗಾಗಿ ಯಾವತ್ತೂ ಶ್ರಮಿಸುತ್ತಿದ್ದ ಮತ್ತು ಚಿಂತಿಸುತ್ತಿದ್ದ ಸರಳ ಮತ್ತು ಸಜ್ಜನ ರಾಜಕಾರಣಿ ಆಚಾರ್ಯ ಅವರ ನಿಧನ ತುಂಬಲಾರದ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಎನ್ .ಎಸ್.ಎಸ್ ನಿಂದ ಸಂತಾಪ : ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ನಂದಿಹಳ್ಳಿಯಲ್ಲಿ ನಡೆಯುತ್ತಿದ್ದ ಶಿಬಿರದ ಸಮಾರೋಪ ಸಮಾರಂಭದಲ್ಲಿ ವಿ.ಎಸ್.ಆಚಾರ್ಯ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಸಮಾರಂಭದ ಮಧ್ಯದಲ್ಲೇ ಅವರ ನಿಧನಕ್ಕೆ ಎಲ್ಲಾ ಶಿಬಿರಾರ್ಥಿಗಳು ಸೇರಿದಂತೆ ಮುಖಂಡರುಗಳು,ಉಪನ್ಯಾಸಕ ವರ್ಗದವರು ಒಂದು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ