ವಿಷಯಕ್ಕೆ ಹೋಗಿ

ಹುಳಿಯಾರು ದುರ್ಗಮ್ಮನ ತೇರನ್ನೆಳೆದ ಭಕ್ತಾಧಿಗಳ ಮೊಗದಲ್ಲಿ ಸಂತಸ

ಹುಳಿಯಾರು ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮ ರಥೋತ್ಸವ ಸೂರಾರು ಭಕ್ತರ ಹರ್ಷೊದ್ಗಾದ ನಡುವೆ ಸಡಗರ ಸಂಭ್ರಮದಿಂದ ನಡೆಯಿತು.



ಹುಳಿಯಾರು ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ 42 ನೇ ವರ್ಷದ ರಥೋತ್ಸವವು ಅಸಂಖ್ಯಾತ ಭಕ್ತರ ಉಪಸ್ಥಿತಿಯಲ್ಲಿ ವಿವಿಧ ಗ್ರಾಮದೇವತೆಗಳ ಸಮ್ಮುಖದಲ್ಲಿ ವೇದ ಮಂತ್ರ ಘೋಷಗಳ ನಾದದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಶುಕ್ರವಾರದಂದು ಯಶಸ್ವಿಯಾಗಿ ಜರುಗಿತು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜಾಕೈಂಕರ್ಯಗಳು ಶಾಸ್ತ್ರೋಕ್ತವಾಗಿ ನಡೆಯಿತು.ಉತ್ತರ ಕರ್ನಾಟಕದ ತೆಕ್ಕಟೆಯ ಅರ್ಚಕರಾದ ನಾಗರಾಜು ಮತ್ತು ತಂಡದವರು ದುರ್ಗಾಹೋಮ,೧೦೮ ತೆಂಗಿನ ಕಾಯಿ ಗಣಹೋಮ,ಕಲಾವೃದ್ದಿಹೋಮಗಳನ್ನು ನೆರವೇರಿಸಿದರು. ಮಂಗಳವಾಧ್ಯದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದೇವಿಯು ಮೂಲ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಗ್ರಾಮದೇವತೆ ಹುಳಿಯಾರಮ್ಮ,ತಿರುಮಲಾಪುರದ ಕೊಲ್ಲಾಪುರದಮ್ಮ,ಗೌಡಗೆರೆಯ ದುರ್ಗಮ್ಮ,ಹೊಸಹಳ್ಳಿಯ ಕೊಲ್ಲಾಪುರದಮ್ಮ ಹಾಗೂ ಹುಳಿಯಾರಿನ ಕೆಂಚಮ್ಮನವರೊಂದಿಗೆ ಭೇಟಿ ಮಾಡಿಸಿ,ದೇವಾಲಯವನ್ನು ಒಂದು ಸುತ್ತು ಪ್ರದಕ್ಷಣೆ ಮಾಡಿಸಿ, ಭಕ್ತಾಧಿಗಳ ಉದ್ಘೋಷದೊಂದಿಗೆ ಕರೆತಂದು ರಂಗು ರಂಗಿನ ಬಾವುಟಗಳು, ತಳಿರು ತೋರಣಗಳು ಹಾಗೂ ಹೂವಿನ ಹಾರಗಳಿಂದ ಸರ್ವಾಲಂಕೃತಗೊಂಡ ರಥಕ್ಕೆ ದುರ್ಗಾಪರಮೇಶ್ವರಿ ಅಮ್ಮನವರನ್ನು ಏರಿಸಲಾಯಿತು.ಮದ್ಯಾಹ್ನ 2 ಗಂಟೆಗೆ ರಥಕ್ಕೆ ಕಾಯಿ ಒಡೆಯುವ ಮೂಲಕ ಹಾಗೂ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿಲಾಯಿತು.



ರಥೋತ್ಸವಕ್ಕೂ ಮುನ್ನ ಸೋಮನನ್ನು ಸಿಂಗರಿಕೊಂಡು ಸಕಲ ವಾದ್ಯಗಳೊಂದಿಗೆ ರೇವಣಪ್ಪ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ,ಪಾನಕದ ಗಾಡಿಯನ್ನು ಜೊತೆಯಲ್ಲಿ ಕರೆತರಲಾಯಿತು.



ಮುಂಜಾನೆಯಿಂದಲೇ ಕಿಕ್ಕಿರಿದು ನೆರದಿದ್ದ ನೂರಾರು ಭಕ್ತಾಧಿಗಳು ಅಮ್ಮವನರು ತೇರನೇರಿದ ತಕ್ಷಣವೇ ಜಯಘೋಷ ಕೂಗುತ್ತಾ ತೇರನ್ನೆಳದು ಸಂಭ್ರಮಿಸಿದರು. ಮಂಗಳವಾಧ್ಯದೊಂದಿಗೆ ಸಾಗಿಬಂದ ರಥಕ್ಕೆ ಬಾಳೆಹಣ್ಣು,ಧವಸ ತೂರುವ ಮೂಲಕ ಭಕ್ತರು ತಮ್ಮ ಭಕ್ತಿಯನ್ನು ಹಾಗೂ ಹರಕೆಯನ್ನು ಸಮರ್ಪಿಸಿದರು.ನಂತರ ನೆರದಿದ್ದ ಭಕ್ತಾಧಿಗಳು ಹಾಗೂ ಹೆಣ್ಣುಮಕ್ಕಳು ಹಣ್ಣು ಕಾಯಿ ಮಾಡಿಸಿ ತಮ್ಮ ಇಷ್ಟ ದೈವವನ್ನು ಕಣ್ಣಿಗೆ ತುಂಬಿಕೊಂಡರು .ರಥೋತ್ಸವದ ಅಂಗವಾಗಿ ಪಾನಕ,ಕೋಸುಂಬರಿ ಹಾಗೂ ಮಜ್ಜಿಗೆ ವಿತರಿಸಲಾಯಿತು.ಬೆಂಗಳೂರು ಕಾಡಿಗಾನಹಳ್ಳಿಯ ಸುಬ್ರಹ್ಮಣ್ಯ ಅವರಿಂದ ನೆರೆದಿದ್ದ ಭಕ್ತಾಧಿಗಳಿಗೆ ಹಾಗೂ ವಿಪ್ರಸಂಘದಿಂದ ಬ್ರಾಹ್ಮಣರಿಗೆ ಅನ್ನ ಸಂತರ್ಪಣೆ ನಡೆಯಿತು.



ರಥೋತ್ಸವಕ್ಕೆ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯ ಕೆಂಕೆರೆ ನವೀನ್ ಸೇರಿದಂತೆ ವಿವಿಧ ಸಂಘಸಂಸ್ಥೆಯವರು,ದೇವಾಲಯದ ಧರ್ಮದರ್ಶಿ ಸಮಿತಿಯವರು ಭಾಗವಹಿಸಿದ್ದರು.ಹುಳಿಯಾರು ಸುತ್ತಮುತ್ತಲಿನ ಹಾಗೂ ದೂರದೂರುಗಳ ಭಕ್ತಾಧಿಗಳು ಆಗಮಿಸಿ,ಅಮ್ಮನವರ ರಥೋತ್ಸವವ ನೋಡಿ,ಅಮ್ಮನವರ ಆಶೀರ್ವಾದವನ್ನು ಪಡೆದು ಸಂಭ್ರಮಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...