ವಿಷಯಕ್ಕೆ ಹೋಗಿ

ಕೆಂಕೆರೆ ಚನ್ನಬಸವೇಶ್ವರ ಸ್ವಾಮಿ ಜಾತ್ರೆಗೆ ತೆರೆ

ಹುಳಿಯಾರು ಹೋಬಳಿ ಕೆಂಕೆರೆಯ ಶ್ರೀ ಚನ್ನಬಸವೇಶ್ವರ ಸ್ವಾಮಿಯ ಯ ರಥೋತ್ಸವದಲ್ಲಿ ಸೇರಿದ್ದ ನೂರಾರು ಮಂದಿ ಭಕ್ತರು ತೆರನ್ನೇಳೆಯುತ್ತಿರುವುದು.

ಹೋಬಳಿ ಕೆಂಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಚನ್ನಬಸವೇಶ್ವರ ಸ್ವಾಮಿಯ ಯ ರಥೋತ್ಸವ ಏ.24 ರ ಮಂಗಳವಾರ ಮಧ್ಯಾಹ್ನ ನೂರಾರು ಜನರ ಸಮ್ಮುಖದಲ್ಲಿ ನಡೆದ ಮೂರು ದಿನದ ಜಾತ್ರೆಗೆ ತೆರೆ ಹಾಕಲಾಯಿತು..

ರಥೋತ್ಸವದ ಅಂಗವಾಗಿ ಏ.21ರ ಶನಿವಾರ ಸ್ವಾಮಿಯವರ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡು,ಏ.22ರ ಭಾನುವಾರ ಸ್ವಾಮಿಯ ಮೂಲಸ್ಥಾನವಾದ ಕೆಂಕೆರೆಯಿಂದ 3 ಕಿ.ಮೀ.ದೂರದ ಪುರದಮಠಕ್ಕೆ ಸ್ವಾಮಿ ಸೇರಿದಂತೆ ಗ್ರಾಮದೇವತೆ ಲೋಕಮಾತೆ ಕಾಳಮ್ಮ ,ದಮ್ಮಡಿಹಟ್ಟಿ ಈರಬೊಮ್ಮಕ್ಕದೇವಿ,ಗೌಡಗೆರೆ ದುರ್ಗಮ್ಮ ದೇವಿಯವರೊಂದಿಗೆ ಕಾಲ್ನೆಡಿಗೆಯಲ್ಲಿ ಹೋಗಿ,ನಂತರ ಏ.೨೩ರ ಸೋಮವಾರ ಬೆಳಗಿನ ಝಾವ ಸ್ವಾಮಿಯ ಗಂಗಾಪ್ರವೇಶ,ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾಕಾರ್ಯಗಳು ಹಾಗೂ ಪ್ರಸಾದ ವಿನಿಯೋಗ ನಡೆದು,ಅದೇ ದಿನ ಕೆಂಕೆರೆ ಗ್ರಾಮಕ್ಕೆ ಆಗಮಿಸಿದ ಸ್ವಾಮಿಯನ್ನು ನೆಡಮುಡಿಯೊಂದಿಗೆ ದೇವಾಲಯಕ್ಕೆ ಕರೆತರಲಾಯಿತು.ಏ.24 ರ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಮಹದೇವಮ್ಮ ಮತ್ತು ಚನ್ನಬಸವಯ್ಯ,ಈಶ್ವರಪ್ಪ ನವರಿಂದ ರಥಕ್ಕೆ ಪುಣ್ಯದ ಕಾರ್ಯ ನಂತರ ಕಳಸ ಸ್ಥಾಪನೆ ನಡೆಸಿ,ನಂತರ ಸ್ವಾಮಿಯನ್ನು ಧ್ವಜದ ಕುಣಿತದೊಂದಿಗೆ ಕರೆತಂದು,ರಂಗುರಂಗಿನ ಬಾವುಟ,ಎಳನೀರ ಗೊಂಚಲು,ಬಾಳೆಗೊನೆ ಹಾಗೂ ವಿವಿಧ ಮಾದರಿಯ ಹಾರಗಳಿಂದ ಶೃಂಗರಿಸಿದ್ದ ರಥಕ್ಕೆ ಸ್ವಾಮಿ ಹಾಗೂ ಕಾಳಿಕಾಂಬ ದೇವಿಯನ್ನು ಕುಳ್ಳಿರಿಸಿ, ಜಯಘೋಷಗಳಾನ್ನು ಕೂಗುತ್ತಾ ಮೂರುಬಾರಿ ತೆರನ್ನೇಳೆಯಲಾಯಿತು.ಮಹಿಳೆಯರು ,ಮಕ್ಕಳು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದವರು ರಥದ ಗಾಲಿಗೆ ಕಾಯಿ ಹೊಡೆದು ಪೂಜೆ ಸಲ್ಲಿಸಿದರು.

ನಂತರ ಆಗಮಿಸಿದ್ದ ಭಕ್ತಾಧಿಗಳಿಗೆ ಪಾನಕ,ಪನಿವಾರ ಹಾಗೂ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು.ಇದೇ ದಿನ ರಾತ್ರಿ ಗ್ರಾಮದ ಜಯಕರ್ನಾಟಕ ಸಂಘದವರು ರಸಮಂಜರಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...