ಇಲ್ಲಿನ ಸೀತಾರಾಮ ಪ್ರತಿಷ್ಠಾನ ಟ್ರಸ್ಟ್ ಹಾಗೂ ವಿಪ್ರ ಮಹಿಳಾ ಸಂಘದಿಂದ ಶಂಕರರ ಜಯಂತಿಯನ್ನು ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಆಚರಿಸಲಾಯಿತು.ಸುಬ್ರಮಣ್ಯ ಲಕ್ಷ್ಮಿ ದಂಪತಿಗಳಿಂದ ಶಂಕರಭಗವತ್ಪಾದರ ಪೂಜಾ ಕಾರ್ಯಕ್ರಮ ಸೇರಿದಂತೆ ವಿವಿಧ ಹೋಮ ಹವನಾದಿಗಳನ್ನು ನೆರವೇರಿಸಲಾಯಿತು.ಶ್ರೀ ಶಂಕರ ವಿರಚಿತ ಶಿವಾನಂದ ಲಹರಿ ಹಾಗೂ ಸೌಂದರ್ಯ ಲಹರಿ ಪಠಣ ಮಾಡಲಾಯಿತು. ಶ್ರೀ ಆದಿಶಂಕರಾಚಾರ್ಯರ ಬಗ್ಗೆ ಉಪನ್ಯಾಸ ನೀಡಲಾಯಿತು. ಇಬ್ಬರು ವಟುಗಳಿಗೆ ಉಪನಯನ ನೆರವೇರಿಸಲಾಯಿತು. ಉಚಿತ ಸಾಮೂಹಿಕ ಉಪನಯನಕ್ಕೆ ಸಹಕರಿಸಿದ ವಿಪ್ರ ಬಾಂಧವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀ ಸೀತಾರಾಮ ಪ್ರತಿಷ್ಠಾನದ ಗೌರವಾಧ್ಯಕ್ಷ ಹೆಚ್.ಕೆ.ಅನಂತರಾಮಯ್ಯ,ಅಧ್ಯಕ್ಷ ನರೇಂದ್ರಬಾಬು,ಕಾರ್ಯದರ್ಶಿ ವಿಶ್ವನಾಥ್,ಎಂ.ಎ.ಲೋಕೇಶ್, ರಂಗನಾಥ್ ಪ್ರಸಾದ್,ಹೆಚ್,ಎಸ್,ಲಕ್ಷ್ಮಿ ನರಸಿಂಹಯ್ಯ ಸೇರಿದಂತೆ ಸಮಾಜ ಭಾಂದವರು ಭಾಗವಹಿಸಿದ್ದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ