ಆಗ್ನೇಯ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣಸ್ವಾಮಿಯವರ ಪರ ಚುನಾವಣಾ ಪ್ರಚಾರದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯರಾದ ಕೆಂಕೆರೆ ನವೀನ್,ವಸಂತಯ್ಯ, ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಮಿಲ್ಟ್ರಿ ಶಿವಣ್ಣ ,ಮಾಜಿ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಇತರರು ಹೋಬಳಿಯ ನಾನಾ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ್ದರು.
ಆಗ್ನೇಯ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣಸ್ವಾಮಿಯವರ ಪರವಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಬಿಜೆಪಿಯ ಹಲವರು ಮಂಗಳವಾರದಂದು ಹೋಬಳಿಯ ನಾನಾ ಶಾಲಾ ಕಾಲೇಜುಗಳಿಗೆ ತೆರಳಿ ಭಿತ್ತಿ ಪತ್ರಗಳನ್ನು ನೀಡುವ ಮೂಲಕ ಪದವಿದರ ಶಿಕ್ಷಕರಲ್ಲಿ ಮತಯಾಚನೆ ಮಾಡಿದರು.
ಮಂಗಳವಾರದಂದು ಹೋಬಳಿಯ ಹುಳಿಯಾರು-ಕೆಂಕೆರೆ ಸರ್ಕಾರಿ ಫ್ರೌಡಶಾಲೆ,ಸಂಯುಕ್ತ ಪದವಿ ಪೂರ್ವ ಕಾಲೇಜು,ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಬಸವೇಶ್ವರ ಫ್ರೌಡಶಾಲೆ,ಕನಕದಾಸ ಹಾಗೂ ವಾಸವಿ ಶಾಲೆಗಳಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತರು ನಾರಾಯಣಸ್ವಾಮಿಯವರಿಗೆ ತಮ್ಮ ಮತ ಹಾಕುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡಿ ಎಂದು ಚುನಾವಣಾ ಪ್ರಚಾರ ನೆಡೆಸಿದರು. ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯರಾದ ಕೆಂಕೆರೆ ನವೀನ್,ವಸಂತಯ್ಯ, ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಮಿಲ್ಟ್ರಿ ಶಿವಣ್ಣ ,ಮಾಜಿ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಇತರ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ