ಹುಳಿಯಾರು: ಹೋಬಳಿ ಅಖಿಲಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದವರು 2011-12ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದವರಿಗೆ ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾ.11ರ ಬುಧವಾರದಂದು ನಡೆಯುವ ರಾಷ್ಟ್ರೀಯ ವಿದ್ಯಾರ್ಥಿ ದಿನೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾಪುರಸ್ಕಾರ ವಿತರಣಾ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ. ಹೋಬಳಿಯ ಪ್ರತಿಯೊಂದು ಪ್ರೌಢಶಾಲೆ ಹಾಗೂ ಪಿಯು ಕಾಲೇಜಿಗೆ ಭೇಟಿ ನೀಡಿ, ಪ್ರತಿಯೊಂದು ಶಾಲೆಯಿಂದ ಹೆಚ್ಚು ಅಂಕ ಪಡೆದ ಒಬ್ಬಬ್ಬರನ್ನು ಆರಿಸಿದ್ದು,ಒಂದು ಶಾಲೆಯಲ್ಲಿ ಒಂದೇ ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿದ್ದರೆ ಇಬ್ಬರಿಗೂ ಪ್ರತಿಭಾಪುರಸ್ಕಾರವನ್ನು ನೀಡಲಾಗುತ್ತಿದ್ದು ಮಕ್ಕಳು ಹಾಗೂ ಅವರ ಪೋಷಕರು ಕಾರ್ಯಕ್ರಮಕ್ಕೆ ಆಗಮಿಸಿಬೇಕೆಂದು ಪುರಸ್ಕಾರ ಸ್ವಿಕರಿಸಬೇಕೆಂದು ಎಬಿವಿಪಿಯ ಹೋಬಳಿ ಘಟಕದ ಅಧ್ಯಕ್ಷ ನರೇಂದ್ರಬಾಬು(9141942686.9964666372) ಪ್ರಕಟಣೆಯಲ್ಲಿ ಕೋರಿದ್ದಾರೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ