ಪ್ರಸ್ತುತದಲ್ಲಿ ಕೇಂದ್ರ ಸರ್ಕಾರ 2ಜಿ,ಕಲ್ಲಿದ್ದಲು,ಹೆಲಿಕ್ಯಾಪ್ಟರ್ ಹೀಗೆ ಹಗರಣಗಳ ಸುಳಿಯಲ್ಲಿ ಮುಳುಗಿದ್ದು ಕಾಂಗ್ರೆಸ್ ನಾಯಕರುಗಳು ಸಹ ಹಲವು ಹಗರಣಗಳಲ್ಲಿ ಸಿಲುಕಿ ರಾಷ್ಟ್ರದ ಮರ್ಯಾದೆಯನ್ನು ಹರಾಜು ಹಾಕಿದ್ದಾರೆ .ರಾಹುಲ್ ಗಾಧಿ,ಸೋನಿಯಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರುಗಳು ಉತ್ತಮ ಆಡಳಿತ ನೀಡಿರುವ ಕರ್ನಾಟಕದ ಬಿಜೆಪಿ ಸರ್ಕಾರದ ಬಗ್ಗೆ , ರಾಜ್ಯದ ಬಗ್ಗೆ ಹಾಗೂ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ಮಾತನಾಡುವ,ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುಡುಗಿದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ ಪರ ಚುನಾವಣಾ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ತನ್ನ ಐದು ವರ್ಷದ ಅವಧಿಯಲ್ಲಿ ಸಂಪೂರ್ಣ ಬದಲಾವಣೆ ತಂದಿದ್ದು,ರಾಜ್ಯಾಂದ್ಯತ ಕೃಷಿ ಬಜೆಟ್, ಸುವರ್ಣ ಗ್ರಾಮ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ,ಭೂ ಚೇತನ ಯೋಜನೆ ಸೇರಿದಂತೆ ನಮ್ಮ ಗ್ರಾಮ-ನಮ್ಮ ರಸ್ತೆಯಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಿ,ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಬಂದಿದ್ದು, ಕೃಷಿ,ಕೈಗಾರಿಕೆ ಸೇರಿದಂತೆ ಇನ್ನಿತರ ಕ್ಷೇತ್ರಗಳ ಅಭಿವೃದ್ದಿಗಾಗ ಮುಂದಾಗಿ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿರುವುದು ಬಿಜೆಪಿಯ ಸಾಧನೆಯಾಗಿದೆ.ಅಲ್ಲದೆ ನಾನು ಮುಖ್ಯಮಂತ್ರಿಯಾ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070