ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್" ನೂತನ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು. ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ