ನೀವು Internetನಲ್ಲಿ ತಾಸುಗಟ್ಟಲೆ Brouse ಮಾಡಿದ್ದು ಯಾರಿಗೂ ಗೊತ್ತಾಗುಲ್ಲ ಅಂದುಕೊಂಡರೆ ತಪ್ಪು.ಇನ್ನುಮುಂದೆ ಅದು ಖಾಸಗಿಯಾಗಿ ಉಳಿಯೊಲ್ಲ.ಪ್ರತಿಯೋದು ಟ್ರ್ಯಾಕ್ ಆಗುತ್ತೆ.ನೀವು ಗಂಟೆಗಟ್ಟಲೆ ಕೂತು ಏನೇನು ನೋಡಿದ್ರಿ ,ಯಾವ್ಯಾವ ಸೈಟ್ ವಿಸಿಟ್ ಮಾಡುದ್ರಿ ಅನ್ನುವುದು ಟ್ರ್ಯಾಕ್ ಮಾಡಲು ಕೇಂದ್ರ ಸರ್ಕಾರ ಟೆಲಿಕಾಂ ಇಲಾಖೆಗೆ ಸೂಚಿಸಲಿದೆ.ಇದರಿಂದ ಉಗ್ರರ ಚಟುವಟಿಕೆ ತಡೆಯಬಹುದೆಂಬ ಆಲೋಚನೆ ಸರ್ಕಾರದ್ದು.ಆದರೆ ಇದರಿಂದ ನಮ್ಮಗಳ ಖಾಸಗಿತನಕ್ಕೆ ಧಕ್ಕೆಯಾಗುವುದಂತು ಖಂಡಿತ...ಸರ್ಕಾರದ ಆಲೋಚನೆ ಏನು ಅಂತ ತಿಳಿಯಲಿಕ್ಕೆ ಕೆಳಗಿನ ಫೋಟೊ ಕ್ಲಿಕ್ ಮಾಡಿ...
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ