ವಿಷಯಕ್ಕೆ ಹೋಗಿ

ಹಿಂದೂ-ಮುಸ್ಲಿಂರು ಸಹೋದರರೇ ಹೊರತು ಶತ್ರುಗಳಲ್ಲ

ಭಾರತದಲ್ಲಿನ ಎಲ್ಲಾ ಹಿಂದೂ ಧರ್ಮದವರು ಹಾಗೂ ಅಲ್ಪಸಂಖ್ಯಾತ ಧರ್ಮಗಳಲ್ಲಿ ಒಂದಾದ ಮುಸ್ಲಿಂ ಧರ್ಮದವರು ಸದಾಕಾಲ ಅಣ್ಣತಮ್ಮಂದಿರಂತೆ ಸಹೋದರತ್ವದ ಬಾಂಧ್ಯವ್ಯ ಹೊಂದಿದ್ದಾರೆ ಹೊರತು ಎಂದಿಗೂ ಶತ್ರುಗಳಲ್ಲ,ನಾವೆಲ್ಲಾ ಭಾರತೀಯರೆಂಬ ವಿಶಾಲ ಮನೋಭಾವ ಹೊಂದಿ ಬಾಳುತ್ತಿದ್ದಾರೆಂದು    ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ಅಭಿಪ್ರಾಯಪಟ್ಟರು.
        
ಸಿಂಗದಹಳ್ಳಿ ರಾಜ್ ಕುಮಾರ್ ಟಿಪ್ಪು ಭಾವಚಿತ್ರಕ್ಕೆ ಪುಷ್ಪ ಮಾಲಿಕೆ ಹಾಕಿ ಗೌರವಿಸಿದರು.
ಹುಳಿಯಾರಿನ ಟಿಫ್ಫು ಸುಲ್ತಾನ್ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಪುಣ್ಯತಿಥಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಟಿಪ್ಪು ಅಪ್ರತಿಮ ದೇಶಭಕ್ತನಾಗಿದ್ದು ದೇಶಕ್ಕಾಗಿ ತನ್ನ ಪ್ರಾಣವನ್ನೆ ಅರ್ಪಣೆ ಮಾಡಿದ ಮಹಾನ್ ವ್ಯಕ್ತಿ.ಬ್ರಿಟೀಷರ ಅಧಿಕಾರಶಾಹಿ ಹಟ್ಟಹಾಸದ ವಿರುದ್ದ ಸಿಡಿದೆದ್ದ ಮುಸ್ಲಿಂ ನಾಯಕರಲ್ಲಿ ಪ್ರಮುಖ ಟಿಪ್ಪು. ಸಾಂಸ್ಕೃತಿಕ ನಗರಿ ಮೈಸೂರನ್ನು ಬ್ರಿಟೀಷರ ಅಧೀನಕ್ಕೆ ಕೊಡದೇ ಅವರ ವಿರುದ್ದ ಹಲವು ಯುದ್ದಗಳನ್ನು ಮಾಡಿ,ಆಂಗ್ಲರ ಸಂಚಿಗೆ ಬಲಿಯಾದ ವೀರ. ಮೈಸೂರ್ ಹುಲಿ ಎಂದೇ ದೇಶಾದ್ಯಂತೆ ಪ್ರಚುರವಾಗಿರುವ ಈತ ಕರ್ನಾಟಕದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ ಎಂದರು.

ದೇಶಕ್ಕಾಗಿ ಹೋರಾಟ ಮಾಡಿ ಅಳಿದ ದೇಶಭಕ್ತನ ಹೆಸರಲ್ಲಿ ಇಂದು ಕೇಂದ್ರ ಸರ್ಕಾರ ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ಹೆಸರನಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಮುಂದಾಗಿರುವುದು ದೇಶಭಕ್ತರಿಗೆ ಸಲ್ಲಿಸುವ ಗೌರವವಾಗಿದೆ.ಆದರೆ ಕೆಲ ನಾಯಕರು ಇದಕ್ಕೆ ಅವಕಾಶ ಕೊಡದೆ ಟಿಪ್ಪುವಿನ ಸಾಧನೆಯನ್ನೇ ಮರೆತು ಟಿಪ್ಪು ಒಬ್ಬ ಮುಸ್ಲಿಂ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯದ ಸ್ಥಾಪನೆಗೆ ತೊಡರುಗಾಲಾಕುತ್ತಿರುವುದು ಸರಿಯಲ್ಲ ಎಂದರು. ಇಂತಹ ನಾಯಕರುಗಳ ವಿರುದ್ದ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕಿದೆ. ಟಿಪ್ಪು ಹೆಸರಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಅಲ್ಲಿ ಅಭ್ಯಾಸ ಮಾಡುವವರಲ್ಲಿ ದೇಶಭಕ್ತಿ,ದೇಶಪ್ರೇಮದ ಗುಣಗಳ ಬೇಳವಣಿಗೆ ಹೆಚ್ಚಿನ ಅವಕಾಶವಿದ್ದು ,ಟಿಪ್ಪುವಿನಂತೆ ನಾವು ಆಗಬೇಕು,ದೇಶಕ್ಕಾಗಿ ತಾವು ಹೋರಾಡಬೇಕು ಎಂಬ ಮನೋಭಾವ ಚಿಗುರೊಡೆಯಲು ಸಹಕಾರಿಯಾಗುತ್ತದೆ ಇದನ್ನೆಲ್ಲಾ ಮನಗಂಡ ಸರ್ಕಾರ ಯಾವುದೇ ಅಡೆತಡೆಗಳನ್ನು ಲೆಕ್ಕಿಸದೇ ಟಿಪ್ಪು ಹೆಸರಿನಲ್ಲಿ ವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದರು.

ನಮ್ಮ ದೇಶದ ಎಲ್ಲಾ ಧರ್ಮ,ಜಾತಿಯವರು ಅಭಿವೃದ್ದಿಯ ದೃಷ್ಠಿಯಿಂದ ಸಂಘಗಳು, ಸಹಕಾರ ಬ್ಯಾಂಕ್ ಗಳನ್ನು ಸ್ಥಾಪಿಸಿಕೊಂಡು ಸಾಗುತ್ತಿರುವುದು ಸಂತಸದ ವಿಷಯವಾಗಿದ್ದು, ಅದರಲ್ಲೂ ಅಲ್ಪಸಂಖ್ಯಾತರಾಗಿ ಹಿಂದುಳಿದಿದ್ದ ಮುಸ್ಲಿಂರು ಸಂಘಗಳನ್ನು ಸ್ಥಾಪಿಸಿ ,ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಲು ಮುಂದಾಗಿರುವುದು ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದರು. ಅಲ್ಲದೆ ಇಂತಹ ಅನೇಕ ಸಂಘಗಳಿದ್ದು ಅವುಗಳು ಉತ್ತಮವಾಗಿ ಬೆಳೆಯಬೇಕು ಅದಕ್ಕಾಗಿ ತಮ್ಮಿಂದ ಆಗುವಂತಹ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಡಿ.ದೇವರಾಜು ಅರಸು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಡಗಿರಾಮಣ್ಣ,ಟಿಫ್ಫು ಸುಲ್ತಾನ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಡಿ.ಫಯಾಜ್,ಉಪಾಧ್ಯಕ್ಷ ಅಪ್ಸರ್,ನಿರ್ದೇಶಕ ಇಮ್ರಾಜ್, ಟಿಪ್ಪು ಯುವಕ ಸಂಘದ ಅಧ್ಯಕ್ಷ ರಫೀಕ್,ಕಾರ್ಯದರ್ಶಿ ಸದ್ದಾಂ, ಶ್ರೀರಾಮಫೈನಾಸ್ಸ್ ನ ಚಂದ್ರಣ್ಣ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...