ವಿಷಯಕ್ಕೆ ಹೋಗಿ

ಸುಖಸಂಸಾರಕ್ಕೆ ಉತ್ತಮ ಸಂಸ್ಕಾರದ ಬೆಳವಣಿಗೆ ಅಗತ್ಯ ; ಸ್ವಾಮೀಜಿ

ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಚನ
ಆಧುನಿಕ ಜಗತ್ತಿನಲ್ಲಿ ಅನೇಕ ಮಕ್ಕಳು ತಂದೆ ತಾಯಿ,ಪೋಷಕರ ಸಂಬಂಧವನ್ನೆ ಧಿಕ್ಕರಿಸಿ ಹೆತ್ತವರನ್ನು ತೊರೆದು ತಮ್ಮಿಷ್ಟದಂತೆ ಮದುವೆಯಾಗಿ ಸಂಸಾರ ನಡೆಸಲು ಮುಂದಾಗುತ್ತಿದ್ದು, ಸಂಸಾರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಹಿರಿಯರ ಮಾರ್ಗದರ್ಶನದಂತೆ ವಿವಾಹವಾಗಿ ಸಂಸಾರದಲ್ಲಿ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡರೆ ಜೀವನ ಸುಖಮಯವಾಗಿರುತ್ತದೆಂದು ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ಹುಳಿಯಾರಿನ ರೋಟರಿಸಂಸ್ಥೆ ಹಾಗೂ ರೋಟರಿ ಕಮ್ಯೂನಿಟಿ ಕಾರ್ಪ್ಸ್ ಅವರ ಸಹಯೋಗದಲ್ಲಿ ಪಟ್ಟಣದ ಶ್ರೀಪ್ರಸನ್ನ ಗಣಪತಿ ದೇವಾಲಯದಲ್ಲಿ ಭಾನುವಾರ ನಡೆದ 30ನೇಉಚಿತ ಸಾಮೂಹಿಕ ವಿವಾಹಮಹೋತ್ಸವದಲ್ಲಿ ನೂತನ ವಧುವರರನ್ನು ಕುರಿತಂತೆ ಆಶೀರ್ವಚನ ನೀಡಿದರು.

ಜೀವನವೆಂಬ ದೊಡ್ಡ ಸಾಗರದಲ್ಲಿ ಸಂಸಾವೆಂಬ ದೋಣಿಯನ್ನು ಗಂಡ ಹೆಂಡತಿ ಸದಾಕಾಲ ಜೊತೆಯಾಗಿ ಸಾಗಿಸುತ್ತಾ,ಜೀವನದಲ್ಲಿ ಸುಖ ದುಖಗಳಲ್ಲಿ ಪರಸ್ಪರ ಜೊತೆಯಾಗಿ ನಡೆದಾಗ ಸಂಸಾರದಲ್ಲಿ ಶಾಂತಿ,ನೆಮ್ಮದಿ,ಸಹೃದಯತೆ,ಸಂತೋಷ ನೆಲೆಸುತ್ತದೆ ಎಂದರು. ಮದುವೆಯಾದ ನಂತರ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಿಕೊಟ್ಟು,ಅವರಲ್ಲಿ ನೈತಿಕತೆ ಬೆಳೆಸಿ, ದೇಶದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯುವಂತೆ ಮಾಡುವ ಜವಬ್ದಾರಿ ಪ್ರತಿಯೊಬ್ಬ ತಂದೆತಾಯಂದಿರ ಮೇಲಿದ್ದು,ಜೀವನದಲ್ಲಿ ಎಂದಿಗೂ ಶಾಂತಿ,ನೆಮ್ಮದಿ ಹದಗೆಡದಂತೆ ಎಚ್ಚರವಹಿಸಿ ಸಂಸಾರವನ್ನು ನಡೆಸಬೇಕು ಎಂದು ತಿಳಿಸಿದರು. ಗಂಡುಹೆಣ್ಣು ಪರಸ್ಪರ ಒಪ್ಪಿ,ಹಿರಿಯರ ನೇತೃತ್ವದಲ್ಲಿ ವಿವಾಹವಾಗಿ ಸಂಸಾರ ನಡೆಸಬೇಕು,ಸಂಸಾರದಲ್ಲಿ ಬರುವಂತ ಕೆಲ ಕ್ಷುಲಕ ವಿಚಾರಗಳನ್ನು ದೊಡ್ಡದು ಮಾಡಿ ಗಂಡಹೆಂಡತಿ ವಿವಾಹವಿಚ್ಚೇದನಕ್ಕೆ ಮುಂದಾಗುವುದು ನಮ್ಮ ಹಿಂದೂ ಪರಂಪರೆಗೆ ವಿರುದ್ದವಾಗಿ ನಡೆದಂತೆ,ಯಾರೊಬ್ಬರು ಸಹ ಕೋಪದ ಕೈಗೆ ಬುದ್ದಿಯನ್ನು ಕೊಡದೆ ಸಂಸಾರವನ್ನು ನಡೆಸುವಂತೆ ತಿಳಿಸಿದರು.
ಉಚಿತ ಸಾಮೂಹಿಕ ವಿವಾಹದಲ್ಲಿ ಸಂಸಾರ ಬಂಧನಕ್ಕೊಳಗಾದ 16 ಜೋಡಿಗಳು.
ಇಂದಿನ ಬರಗಾಲದ ಪರಿಸ್ಥಿತಿಯಲ್ಲಿ ಒಂದು ಮದುವೆ ಮಾಡಬೇಕಾದರೆ ಲಕ್ಷಾಂತರ ರೂ ವೆಚ್ಚವಾಗುತ್ತದೆ, ಇದನ್ನೆಲ್ಲಾ ಮನಗಂಡ ರೋಟರಿ ಸಂಸ್ಥೆಯವರು ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ ಮಾಡುತ್ತಾ ಸಾಗುತ್ತಿದ್ದು, ಬಡಜನರ ಪಾಲಿಗೆ ಹಾಗೂ ಸಮಾಜದ ದೃಷ್ಠಿಯಲ್ಲಿ ಅವರ ಸಾಮಾಜಿಕ ಸೇವೆ ಶ್ಲಾಘನೀಯ ಎಂದರು. ಈ ಬಾರಿ ಕೇವಲ 16 ಜೋಡಿ ನವ ಸಂಸಾರ ಬಂಧನಕ್ಕೆ ಒಳಗಾಗಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಳವಾಗಲಿ,ಸಂಸ್ಥೆಯ ಬೆಳವಣಿಗೆಗೆ ನಮ್ಮೆಲ್ಲರ ಸಹಕಾರ ಅಗತ್ಯವಾಗಿರಬೇಕೆಂದು ಆಶಿಸಿದರು.
ವಿವಾಹದಲ್ಲಿ ನೂತನವಧುವರರಿಗೆ ರೇಷ್ಮೆಸೀರೆ ವಿತರಿಸಲಾಯಿತು.
ರೋಟರಿ ಕಾರ್ಯದರ್ಶಿ ಗಂಗಣ್ಣ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ, ರೋಟರಿ ಸಂಸ್ಥೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಜನಸೇವೆ ಮುಂದಾಗಿದ್ದು,ರಕ್ತದಾನಶಿಬಿರ,ಹೆಲ್ತ್ ಚಕಫ್,ಹೃದಯ ಶಸ್ತ್ರಚಿಕಿತ್ಸೆಯಂತಹ ಹತ್ತು ಹಲವು ಕಾರ್ಯಗಳನ್ನು ಮಾಡುತ್ತಾ ಸಾಗಿದೆ.12ವರ್ಷ ಒಳಗಿನ ಮಕ್ಕಳಿಗೆ ಹೃದಯಸಂಬಂಧಿ ಕಾಯಿಲೆಗಳಿಗೆ ಸಂಸ್ಥೆವತಿಯಿಂದ ಉಚಿತವಾಗಿ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ವಿವಾಹಮಹೋತ್ಸವದಲ್ಲಿ ಶ್ರೀರಾಮಹಾಲ್ ನ ಟಿ.ಆರ್.ಲಕ್ಷ್ಮಿಕಾಂತ್ ,ರೋಟರಿ ಅಧ್ಯಕ್ಷ ಈ.ರವೀಶ್,ರೋಟರಿ ಕಮ್ಯೂನಿಟಿ ಕಾರ್ಪ್ಸ್ ಅಧ್ಯಕ್ಷ ರಮೇಶ್,ಶಿಬಿರಾಧಿಕಾರಿಗಳಾಗಿ ಮಂಜುನಾಥ ಗುಪ್ತ, ಸ್ಟುಡಿಯೊ ಸುಧೀರ್, ದಾನಿಗಳಾದ ವೆಂಕಟಾಛಲಪತಿ ಶೆಟ್ಟಿ,ಮುಖಂಡರಾದ ನಂದಿಹಳ್ಳಿ ಶಿವಣ್ಣ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...