ಕೇಂದ್ರ ಸರ್ಕಾರದ ಮಹೋನ್ನತ ಹುದ್ದೆಗಳಲ್ಲಿ ಒಂದಾದ ಕ್ಯಾಬಿನೆಟ್ ದರ್ಜೆಯ ರೈಲ್ವೆ ಖಾತೆಯನ್ನು ಕರ್ನಾಟಕದ ದಲಿತ ಸಮುದಾಯದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿರುವುದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ಪಡುವಂತಹ ಸಂಗತಿಯಾಗಿದೆ ಎಂದು ಮಾಜಿ ರೈಲ್ವೆ ಬೋರ್ಡ್ ಸದಸ್ಯ ಹುಳಿಯಾರಿನ ರಹಮತ್ ಉಲ್ಲಾ ಸಾಬ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಜಿ ರೈಲ್ವೆ ಬೋರ್ಡ್ ಸದಸ್ಯ ಹುಳಿಯಾರಿನ ರಹಮತ್ ಉಲ್ಲಾ ಸಾಬ್. |
ಕಾರ್ಮಿಕ ಖಾತೆ ಸಚಿವರಾಗಿದ್ದ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಡ್ತಿ ನೀಡುವ ಮೂಲಕ ಅವರನ್ನು ಕೇಂದ್ರ ರೈಲ್ವೆ ಸಚಿವರನ್ನಾಗಿ ಮಾಡಿರುವ ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹೃದಯಪೂರ್ವಕ ಅಭಿನಂಧನೆ ಸಲ್ಲಿಸಿದ್ದಾರೆ. ಈ ಹಿಂದೆ ಪಿ.ವಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ (1991-1995) ಕರ್ನಾಟಕದ ಜಾಫರ್ ಷರೀಫ್ ಅವರು ರೈಲ್ವೆ ಸಚಿವರಾಗಿದ್ದರು. ಇತ್ತೀಚಿಗೆ ಕೆಎಚ್ ಮುನಿಯಪ್ಪ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರು ಈಗ ಮತ್ತೊಮ್ಮೆ ಕರ್ನಾಟಕದವರು ಈ ಕ್ಯಾಬಿನೆಟ್ ಹುದ್ದೆಯನ್ನು ಅಲಂಕರಿಸಿದ್ದಾರೆ. ಕನ್ನಡಿಗರಿಗಾಗಿ ಹೊಸ ಯೋಜನೆಗಳನ್ನು,ಉದ್ಯೋಗಗಳನ್ನು ಕಲ್ಪಿಸಿಕೊಡುವ ಮೂಲಕ ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತೆ ಹಾರೈಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ