ಪ್ರಸ್ತುತ ಸಮಾಜಲ್ಲಿ ಭ್ರಷ್ಟಾಚಾರ,ಲಂಚಗುಳಿತನ ಸೇರಿದಂತೆ ಅನೇಕ ಸಮಸ್ಯೆಗಳು ದೇಶದ ಅಭಿವೃದ್ದಿಗೆ ಮಾರಕವಾಗಿವೆ.ಇಂತಹ ಸಮಾಜಕಂಠಕ ಪಿಡುಗುಗಳು ನಿರ್ಮೂಲನೆಯಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಅದಕ್ಕಾಗಿ ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜಕಟ್ಟುವ ಕಾರ್ಯದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯವೆಂದು ಪ್ರಾಂಶುಪಾಲ ಆರ್.ಮೂಗೇಶಪ್ಪ ಕಿವಿಮಾತು ಹೇಳಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಸಂಘದವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಆರ್.ಮೂಗೇಶಪ್ಪ ಮಾತನಾಡಿದರು. |
ವಿದ್ಯಾರ್ಥಿ ಜೀವನ ಎಂಬುದು ಸೂಕ್ಷ್ಮವಾದದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಭೋದನೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳಗುವಂತೆ ರೂಪಿಸುವ ರೂವಾರಿಗಳಾಗಿದ್ದು, ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿ ತಲುಪಬೇಕು ಎಂದರು.ರಾಧಾಕೃಷ್ಣನ್ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದಲ್ಲದೆ ರಾಷ್ಟ್ರದ ರಾಷ್ಟ್ರಪತಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಅಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಶಿಕ್ಷಕರು ಪಾಲಿಸುವ ಮೂಲಕ ದೇಶದ ಅಭಿವೃದ್ದಿಗೆ ಶ್ರಮಿಸುವಂತೆ ಕರೆನೀಡಿದರು.
ಉಪನ್ಯಾಸಕ ಇಬ್ರಾಹಿಂ ಮಾತನಾಡಿ,ಶಿಕ್ಷಕ ಎಂಬಾತ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರೆ ಸಾಲದು, ನಾಡು,ನುಡಿ,ದೇಶದ ಅಭಿವೃದ್ದಿ ಬಗ್ಗೆ ಮಕ್ಕಳಲ್ಲಿ ಉತ್ತೇಜನವನ್ನು ತುಂಬಿ ಆ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ,ದೇಶಭಕ್ತಿ ಮೂಡಿಸಬೇಕು ಎಂದರು.ರಾಧಾಕೃಷ್ಣನ್ ,ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ವ್ಯಕ್ತಿಗಳು ನಡೆದು ಬಂದದಾರಿ ಹಾಗೂ ಅವರ ಆದರ್ಶಗಳ ಬಗ್ಗೆ ತಿಳಿಸಿದರು.
ಸಮಾರಂಭದಲ್ಲಿ ಉಪನ್ಯಾಸಕರಾದ ಎಸ್.ಶಂಕರಲಿಂಗಯ್ಯ, ಶ್ರೀನಿವಾಸ್,ಆಶೋಕ್, ಹನುಮಂತಪ್ಪ, ಚಂದ್ರಮೌಳಿ, ಶಿವಯ್ಯ,ಜಯಪ್ರಕಾಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ