ಗ್ರಾಮೀಣ ಪ್ರದೇಶದಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಅವರಿಗೂ ಉತ್ತಮ ಪ್ರೋತ್ಸಾಹ ಸಿಕ್ಕರೆ ದೇಶದ ಆಸ್ತಿಯಾಗುತ್ತಾರೆ ಎಂದು ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ ಹೇಳಿದರು.
ಹೋಬಳಿಯ ಗಾಣದಾಳು ಗ್ರಾಮದಲ್ಲಿ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗಾಣದಾಳು, ಮೇಲನಹಳ್ಳಿ, ಗುರುವಾಪುರ, ಕಂಪನಹಳ್ಳಿ, ಯಗಚಿಹಳ್ಳಿ ಮುಂತಾದ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ದೇಶದ ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಹೆಸರು ಗಳಿಸಿರುವ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯಲ್ಲಿಯೇ ಅಭ್ಯಾಸ ಮಾಡಿದವರಾಗಿದ್ದಾರೆ. ಅಂತಹವರನ್ನು ಮಾದರಿಯಾಗಿಟ್ಟುಕೊಂಡು ಸಾದನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ನೋಟ್ ಪುಸ್ತಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಗಾಣದಾಳು ಗ್ರಾಪಂ ಅಧ್ಯಕ್ಷ ಜಿ.ಎಸ್.ಶ್ರೀನಿವಾಸ್ ಮಾತನಾಡಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗಿಳಿ
ಯಬೇಕಾದ ನಮ್ಮ ಸರ್ಕಾರಿ ಶಾಲೆಗಳ ಮಕ್ಕಳ ಸೃಜನಶೀಲತೆಯನ್ನು ಹೆಚ್ಚಿಸಲು ಸಂಘ,
ಸಂಸ್ಥೆಗಳು, ಟ್ರಸ್ಟ್ ಗಳು ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ನೂರಾರು ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್, ವಕೀಲ ಸದಾಶಿವು, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಹುಳಿಯಾರು ಹೋಬಳಿ ಗಾಣದಾಳು ಕ್ಲಸ್ಟರ್ ನ ಶಾಲೆಗಳ ಮಕ್ಕಳಿಗೆ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ವಿತರಿಸಲಾಯಿತು. ಡಾ.ಪರಮೇಶ್ವರಪ್ಪ, ಜಿ.ಎಸ್.ಶ್ರೀನಿವಾಸ್, ಸಾ.ಚಿ.ನಾಗೇಶ್ ಮುಂತಾದವರು ಇದ್ದರು. |
ಹೋಬಳಿಯ ಗಾಣದಾಳು ಗ್ರಾಮದಲ್ಲಿ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗಾಣದಾಳು, ಮೇಲನಹಳ್ಳಿ, ಗುರುವಾಪುರ, ಕಂಪನಹಳ್ಳಿ, ಯಗಚಿಹಳ್ಳಿ ಮುಂತಾದ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ದೇಶದ ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಹೆಸರು ಗಳಿಸಿರುವ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯಲ್ಲಿಯೇ ಅಭ್ಯಾಸ ಮಾಡಿದವರಾಗಿದ್ದಾರೆ. ಅಂತಹವರನ್ನು ಮಾದರಿಯಾಗಿಟ್ಟುಕೊಂಡು ಸಾದನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ನೋಟ್ ಪುಸ್ತಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಗಾಣದಾಳು ಗ್ರಾಪಂ ಅಧ್ಯಕ್ಷ ಜಿ.ಎಸ್.ಶ್ರೀನಿವಾಸ್ ಮಾತನಾಡಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗಿಳಿ
ಯಬೇಕಾದ ನಮ್ಮ ಸರ್ಕಾರಿ ಶಾಲೆಗಳ ಮಕ್ಕಳ ಸೃಜನಶೀಲತೆಯನ್ನು ಹೆಚ್ಚಿಸಲು ಸಂಘ,
ಸಂಸ್ಥೆಗಳು, ಟ್ರಸ್ಟ್ ಗಳು ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ನೂರಾರು ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್, ವಕೀಲ ಸದಾಶಿವು, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ