ಇಡೀ ವಿಶ್ವದಲ್ಲೆ ಪರಿಸರ ಸಂರಕ್ಷಣೆ ಬಗ್ಗೆ ಚಿಂತನೆ ನಡೆಯಬೇಕಿದ್ದು,ಸರ್ಕಾರಗಳು ಪರಿಸರ ಸಮತೋಲನ ಕಾಪಾಡಿಕೊಳ್ಳುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಪನ್ಯಾಸಕಿ ದಿನಾಮಣಿ ತಿಳಿಸಿದರು.
ಹೋಬಳಿಯ ಬೋರನಕಣಿವೆ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.
ಶಿಕ್ಷಕ ಟಿ.ಎನ್.ರಮೇಶ್ ಪ್ರಸ್ತಾವಿಕವಾಗಿ ಮಾತನಾಡಿ ಪರಿಸರ ನಾಶದಿಂದ ಹವಾಮಾನದಲ್ಲಿ ಏರಿಳಿತ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ ಎಂದರು.ಮುಖ್ಯ ಶಿಕ್ಷಕಿ ಮಂಜಮ್ಮ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕ ಮೈಲಾರಯ್ಯ ನಿರೂಪಿಸಿ,ವಂದಿಸಿದರು.
ಹುಳಿಯಾರು ಹೋಬಳಿ ಬೋರನಕಣಿವೆ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿ ನೆಡಲಾಯಿತು. |
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ