ವಿಷಯಕ್ಕೆ ಹೋಗಿ

ಪಹಣಿ ತಿದ್ದುಪಡಿ ಆಂದೋಲನದ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ

ಈ ಹಿಂದೆ ಪಹಣಿ ಸೇರಿದಂತೆ ಇತರ ದಾಖಲೆಗಳನ್ನು ಕೈಬರಹದಲ್ಲಿ ನೀಡುತ್ತಿದ್ದು ಆಗ ಸಾಕಷ್ಟು ತಪ್ಪಾಗಿವೆ ಹಾಗೂ ಕಂಪ್ಯೂಟರ್ ಗೆ ಪಹಣಿಗಳನ್ನು ಎಂಟ್ರಿ ಮಾಡುವಾಗಲೂ ಕೆಲ ದೋಷಗಳಾಗಿದ್ದು ಅವುಗಳನ್ನು ಸರಿ ಪಡಿಸುವ ನಿಟ್ಟಿನಲ್ಲಿ ಪಹಣಿ ತಿದ್ದುಪಡಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ತಿಳಿಸಿದರು.
ಪಹಣಿ ತಿದ್ದುಪಡಿ ಆಂದೋಲನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಮಾತನಾಡುತ್ತಿರುವುದು.

             ಹುಳಿಯರು ಸಮೀಪದ ಹಂದನಕೆರೆಯಲ್ಲಿ ಶನಿವಾರ ನಡೆದ ಪಹಣಿ ತಿದ್ದುಪಡಿ ಆಂದೋಲನ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಆದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಹಣಿ ತಿದ್ದುಪಡಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸಾರ್ವಜನಿಕರು

         ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಆಸ್ತಿದಾಖಲೆ ಸೇರಿದಂತೆ ಇತರೆ ದಾಖಲೆಗಳಲ್ಲಿನ ದೋಷಗಳಿಂದ ಜನಸಾಮಾನ್ಯರು ಪರದಾಡುವಂತಾಗಿದ್ದು ತೊಂದರೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಲ್ಲಿನ ಎಲ್ಲಾ ದಾಖಲೆಗಳು ಕಂಪ್ಯೂಟರೀಕರಣ ಮಾಡಿದ್ದು ಇನ್ನು ಮುಂದೆ ಯಾವುದೇ ಕಾರಣಕ್ಕು ಜಮೀನು ದಾಖಲೆಪತ್ರಗಳಲ್ಲಿ ವ್ಯತ್ಯಾಸಗಳು ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಖಾತೆ ಬದಲಾವಣೆ ಮಾಡಿಕೊಳ್ಳುವಾಗಲೂ ಸಮಸ್ಯೆಗಳು ಕಂಡುಬರುತ್ತಿದ್ದು ಮುಂದಿನ ದಿನಗಳಲ್ಲಿ ಖಾತಾ ಬದಲಾವಣಾ ಆಂದೋಲನವನ್ನು ಜಾರಿಗೆ ತಂದು ಆ ಸಮಸ್ಯೆಯನ್ನು ಕೂಡ ಬಗೆಹರಿಸುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಅವರು ಸಾರ್ವಜನಿಕರಿಂದ ಅರ್ಜಿ ಪಡೆಯುತ್ತಿರುವುದು.

              ಜಮೀನು ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಗ್ರಾಮದ ಮುಖಂಡರ,ಜನಪ್ರತಿನಿಧಿಗಳ ಹಾಗೂ ಮತ್ತ್ಯಾರೋ ಹೇಳುವ ಮಾತಿಗೆ, ಆಮಿಷಕ್ಕೆ ಒಳಗಾಗಿ ತಿದ್ದುವಕಾರ್ಯ ಮಾಡಬೇಡಿ ಎಂದು ಕಂದಾಯ ಇಲಾಖೆ ಅಧಿಕಾರಿಗೆ ಎಚ್ಚರಿಕೆ ನೀಡಿದ ಅವರು ಹಾಗೇನಾದರೂ ಮಾಡಿದ್ದು ಕಂಡು ಬಂದಲ್ಲಿ ಅವರುಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣಕ್ರಮ ಜರುಗಿಸಲಾಗುವುದು ಎಂದರು.
ಶಾಸಕ ಸುರೇಶ್ ಬಾಬು ಮಾತನಾಡುತ್ತಿರುವುದು.

ಸಲಹೆ: ಇಂದು ಜಮೀನುಗಳಿಗೆ ಹೆಚ್ಚಿನ ಬೇಡಿಕೆಯಿದ್ದು ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಭದ್ರವಾಗಿಟ್ಟುಕೊಳ್ಳಿ ಹಾಗೂ ನಗರ ಪ್ರದೇಶದ ಜನ ಹಳ್ಳಿಗಳಿಗೆ ಬಂದು ಜಮೀನು ಖರೀದಿಸುತ್ತಿದ್ದು ಭೂ ಮಾಫಿಯಾ ಹೆಚ್ಚಾಗುತ್ತಿದ್ದು ಯಾವುದೇ ಕಾರಣಕ್ಕೂ ನಗರ ಪ್ರದೇಶದವರಿಗೆ ಮಾರಲು ಮುಂದಾಗಬೇಡಿ ಎಂದು ಸಲಹೆ ನೀಡಿದರು.


            ಪ್ರಸ್ತುತದಲ್ಲಿ ಪಡಿತರ ಕಾರ್ಡ್ ಸಮಸ್ಯೆ ಹೆಚ್ಚಾಗಿದ್ದು ಕೆಲ ಮನೆಗಳಲ್ಲಿ 2-3 ಕಾರ್ಡ್ ಗಳನ್ನು ಹೊಂದಿದ್ದಾರೆ. ಈಗಾಗಲೇ ಅವುಗಳ ಪರಿಶೀಲನೆ ನಡೆಯುತ್ತಿದ್ದು ಅದಕ್ಕೂ ಮುಂಚಿತವಾಗಿ ತಾವೇ ಖುದ್ದಾಗಿ ತಮ್ಮಲ್ಲಿನ ಹೆಚ್ಚುವರಿ ಕಾರ್ಡ್ ಗಳನ್ನು ಇಲಾಖೆಗೆ ಸಲ್ಲಿಸಿ. ಇಲ್ಲವಾದರೆ ಅಂತಹವರ ಮೇಲೆ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.
ಪಹಣಿ ತಿದ್ದುಪಡಿ ಆಂದೋಲನ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸುತ್ತಿರುವ ಸಾರ್ವಜನಿಕರು

              ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಉಪವಿಭಾಗಾಧಿಕಾರಿ ಬಿ.ಸಿಂಧು, ತಹಶೀಲ್ದಾರ್ ಕಾಮಾಕ್ಷಮ್ಮ, ಉಪತಶೀಲ್ದಾರ್ ಹನುಮಂತನಾಯ್ಕ, ಕಂದಾಯ ಇಲಾಖೆಯ ತಿಪ್ಪೇಸ್ವಾಮಿ, ಪಾಪಣ್ಣ, ಶ್ರೀನಿವಾಸ್, ಮಾಜಿ ಜಿ.ಪಂ.ಉಪಾಧ್ಯಕ್ಷೆ ಜಾನಮ್ಮ,ತಾ.ಪಂ.ಸದಸ್ಯರಾದ ಹೇಮಮಂಜುನಾಥ್,ಚೇತನ್ ಗಂಗಾಧರ್,ಗ್ರಾ.ಪಂ.ಸದಸ್ಯರಾದ ದೊರೆಸ್ವಾಮಿ , ಮಾಳಮ್ಮ ಸೇರಿದಂತೆ ಇತರರಿದ್ದ ಸಮಾರಂಭದಲ್ಲಿ ಶಿಕ್ಷಕ ಗಜೇಂದ್ರ ನಿರೂಪಿಸಿ,ಅನಂತಯ್ಯ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...