ವಿಷಯಕ್ಕೆ ಹೋಗಿ

ಹುಳಿಯಾರು : ಗ್ರಾ.ಪಂ. ಅಧ್ಯಕ್ಷರಾಗಿ ಕಾಳಮ್ಮ ಅವಿರೋಧ ಅಯ್ಕೆ

                ಪಟ್ಟಣದ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜೆಡಿಎಸ್ ನ ಕಾಳಮ್ಮ ಗುರುವಾರದಂದು ತಹಶೀಲ್ದಾರ್ ಕಾಮಾಕ್ಷಮ್ಮ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
                 ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಟ್ಟಿಬಾಯಿ ಅವರನ್ನು ಪಂಚಾಯ್ತಿ ಸದಸ್ಯರು ಅವಿಸ್ವಾಸ ನಿರ್ಣಯ ಮಂಡಿಸಿದ್ದರ ಫಲವಾಗಿ ಅವರು ಪದಚ್ಯುತಗೊಂಡಿದ್ದರಿಂದ ಅಧ್ಯಕ್ಷ ಸ್ಥಾನ ತೆರನಾಗಿತ್ತು. ಈ ಸಂಬಂಧ ಗುರುವಾರದಂದು ನಡೆದ ಚುನಾವಣೆಯಲ್ಲಿ ಪಂಚಾಯ್ತಿಯ ಒಟ್ಟು 33 ಸದಸ್ಯರ ಪೈಕಿ 30 ಮಂದಿ ಹಾಜರಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಬೆಂಬಲಿತ ಕಾಳಮ್ಮ ನಾಮಪತ್ರ ಸಲ್ಲಿಸಿದ್ದು ಇತರೆ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಕಾಳಮ್ಮ ಅವರೇ ಅಧ್ಯಕ್ಷರಾಗಿ ಆಯ್ಕೆಯಾದರು.

ಹುಳಿಯಾರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜೆಡಿಎಸ್ ನ ಕಾಳಮ್ಮ ಆವಿರೋಧವಾಗಿ ಆಯ್ಕೆಯಾಗಿದ್ದು,ಇತರ ಸದಸ್ಯರು ಅಭಿನಂದಿಸಿದರು.

ಹುಳಿಯಾರು ಗ್ರಾ.ಪಂ.ಯ ಅಧ್ಯಕ್ಷರ ಆಯ್ಕೆಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕಾಳಮ್ಮ ಒಬ್ಬರು ಮಾತ್ರ ತಹಶೀಲ್ದಾರ್ ಕಾಮಾಕ್ಷಮ್ಮ ಅವರಿಗೆ ನಾಮಪತ್ರ ಸಲ್ಲಿಸಿದರು.

                   ಅಧ್ಯಕ್ಷರಾಗಿ ಆಯ್ಕೆಯಾದ ಕಾಳಮ್ಮ ಈ ಸಂಧರ್ಭದಲ್ಲಿ ಮಾತನಾಡಿ, ಅನುಸೂಚಿತ ಜಾತಿಗೆ ಮೀಸಲಿರಿಸಿದ್ದ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಆಯ್ಕೆ ಮಾಡಿರುವ ಎಲ್ಲಾ ಸದಸ್ಯರಿಗೂ ಹಾಗೂ ಸಾಮಾಜಿಕ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ತಮ್ಮ ಬೆಂಬಲಕ್ಕೆ ಬಂದ ಶಾಸಕ ಸುರೇಶ್ ಬಾಬು ಅವರಿಗೆ ಕೃತಜ್ಞತೆ ಸಲ್ಲಿಸಿದರು. ಎಂದಿಗೂ ಈ ಸ್ಥಾನಕ್ಕೆ ಚ್ಯುತಿಬಾರದಂತೆ ಹಾಗೂ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದಲ್ಲಿ ಆಗಬೇಕಾಗಿರುವ ಅಭಿವೃದ್ದಿ ಕಾರ್ಯಗಳತ್ತ ಗಮನ ಕೊಡುವುದಾಗಿ ತಿಳಿಸಿದರು.
     ಪ್ರವಾಸದಿಂದ ನೇರ ಚುನಾವಣೆಯಲ್ಲಿಗೆ: ಗ್ರಾ.ಪಂ. ಅಧ್ಯಕ್ಷರ ಚುನಾವಣೆಯನ್ನೆ ಪ್ರತಿಷ್ಠೆಯನ್ನಾಗಿಸಿಕೊಂಡಿದ್ದ ಸದಸ್ಯರು ಶಾಸಕ ಸುರೇಶ್ ಬಾಬು ಜೊತೆಗೂಡಿ ಕಳೆದ ಕೆಲ ದಿನಗಳಿಂದ ಪ್ರವಾಸಕ್ಕೆ ತೆರಳಿದ್ದ ಜೆಡಿಎಸ್ ಬೆಂಬಲಿತ 28 ಸದಸ್ಯರು ಭದ್ರ ಪ್ರಾಜಕ್ಟ್ ನ ಜಂಗಲ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಗುರುವಾರದಂದು ನೇರವಾಗಿ ಚುನಾವಣೆ ನಡೆದ ಪಂಚಾಯ್ತಿ ಕಚೇರಿಗೆ ಆಗಮಿಸಿ, ಜೆಡಿಎಸ್ ನ ಕಾಳಮ್ಮ ಅವರಿಂದ ಉಮೇದುವಾರಿಕೆ ಸಲ್ಲಿಸಿದರು. ಆದರೆ ಉನ್ನುಳಿದ ಬಿಜೆಪಿಯ ಬೆಂಬಲಿತ ಕೆಲ ಸದಸ್ಯರು ಹಾಜರಿದ್ದರೂ ಸಹ ಯಾರು ನಾಮಪತ್ರ ಸಲ್ಲಿಸಲಿಲ್ಲ.

             ಪ್ರಬಾರ ಪಿಡಿಓ ಅಡವೀಶ್ ಕುಮಾರ್ ತಹಶಿಲ್ದಾರ್ ಅವರ ಸಮ್ಮುಖದಲ್ಲಿ ಬೆಳಿಗ್ಗೆ 9.30 ರಿಂದ ಪ್ರಾರಂಭಗೊಂಡ ಚುನಾವಣ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಕೆ, ನಾಮಪತ್ರಪರಿಶೀಲನೆ, ನಾಮಪತ್ರ ಹಿಂತೆಗೆದುಕೊಳ್ಳುವಿಕೆ ಹಾಗೂ ಮಧ್ಯಾಹ್ನ 12 ಕ್ಕೆ ಸಭೆ ನಡೆಸಲಾಯಿತು.ಈ ಸಂಧರ್ಭದಲ್ಲಿ ಗ್ರಾ.ಪಂ. ಉಅಪ್ಧ್ಯಕ್ಷೆ ಅಬಿದುನ್ನಿಸಾ,ಸದಸ್ಯರಾದ ಅಶೋಕ್ ಬಾಬು,ಗಂಗಣ್ಣ,ಜಹೀರ್ ಸಾಬ್, ಗೀತಾಬಾಬು,ಅನ್ಸರ್ ಅಲಿ,ಧನುಷ್ ರಂಗನಾಥ್, ಹೇಮಂತ್,ರಾಘವೇಂದ್ರ,ಪುಟ್ಟರಾಜು,ವೆಂಕಟಮ್ಮ,ಡಿಶ್ ಬಾಬು,ಬೈರೇಶ್ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...