ಹೋಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು (ತಾ.5) ಶನಿವಾರ ರಾತ್ರಿ ಪಟ್ಟಣದ ಎಂಪಿಎಸ್ ಶಾಲಾ ಮೈದಾನದಲ್ಲಿ ಹೆಗ್ಗೋಡಿನ ಜನಮನದಾಟ ಕಲಾತಂಡದ ವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಖಾಸಗಿ ಜೀವನ ಕುರಿತ ನಾಟಕವನ್ನು ಅಭಿನಯಿಸಲಿದ್ದಾರೆ.
ನಾಟಕಾಭಿನಯದ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಉದ್ಘಾಟಿಸಲಿದ್ದು, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸುವರು. ಸಾಹಿತಿ ವಡ್ಡಗೆರೆ ನಾಗರಾಜಯ್ಯ ಅಶಯ ನುಡಿಗಳನ್ನಾಡುವರು. ತಹಶೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣನಾಯಕ್,ಬಿಇಓ ಸಾ.ಚಿ.ನಾಗೇಶ್, ವೃತ್ತ ನಿರೀಕ್ಷಕ ಜಯಕುಮಾರ್,ಸಮಾಜ ಕಲ್ಯಾಣಾಧಿಕಾರಿ ರಾಮಯ್ಯ, ಪಿಎಸೈ ಘೋರ್ಪಡೆ ಸೇರಿದಂತೆ ಇತರರು ಆಗಮಿಸಲಿದ್ದು ಹೋಬಳಿಯ ಎಲ್ಲಾ ಸಂಘಟನೆಯವರು , ಸಾರ್ವಜನಿಕರು ಪಾಲ್ಗೊಳ್ಳುವಂತೆ ತಾಲ್ಲೂಕು ದಲಿತ ಸಹಾಯವಾಣಿಯ ಹನುಮಂತಯ್ಯ ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ