ಸರ್ಕಾರಿ ಶಾಲೆಗಳೆಂದು ಮೂಗು ಮುರಿಯವ ಜನರಿಗೆ ತಮ್ಮ ಸಾಧನೆಯ ಮೂಲಕ ಉತ್ತರ ನೀಡುವಂತಹ ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮ ಗ್ರಾಮೀಣ ಪ್ರದೇಶದಲ್ಲಿದ್ದಾರೆ ಎಂದು ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ ಹೇಳಿದರು.
ಹುಳಿಯಾರು ಸಮೀಪದ ಕಾಮಲಾಪುರ ಗ್ರಾಮದಲ್ಲಿ ಶಾರದಜಯರಾಮಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಸೋರಲಮಾವು, ಕಾಮಲಾಪುರ, ದವನದಹೊಸಳ್ಳಿ, ಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡಿದರು.
ಹುಳಿಯಾರು ಸಮೀಪದ ಕಾಮಲಾಪುರದ ಸರ್ಕಾರಿ ಶಾಲೆಯ ಮಕ್ಕಳಿಗೆ ಶಾರದ ಜಯರಾಮಪ್ಪ ಟ್ರಸ್ಟ್ ವತಿಯಿಂದ ಡಾ.ಎಸ್.ಜಿ.ಪರಮೇಶ್ವರಪ್ಪ ಉಚಿತ ಪಠ್ಯಪುಸ್ತಕ ವಿತರಿಸಿದರು. |
ಗ್ರಾಮೀಣ ಪ್ರದೇಶದಲ್ಲಿ ಆಂಗ್ಲ ಭಾಷೆಯ ವ್ಯಾಮೋಹದಿಂದಾಗಿ ಕಾನ್ವೆಂಟ್ ಸಂಸ್ಕೃತಿ ಜಾಸ್ತಿಯಾಗುತ್ತಿದ್ದು ಪೋಷಕರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಮುಂದಾಗುತ್ತಿಲ್ಲ, ಕಾರಣ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಭಾಷೆಯ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲವೆಂದು ಆದ್ದರಿಂದ ಸರ್ಕಾರಿ ಶಾಲೆಗಳಲ್ಲಿಯೂ ಸಹ ಉತ್ತಮ ಗುಣಮಟ್ಟದ ಬೋಧನೆಯಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಬೇಕಿದೆ ಎಂದರು. ಜೊತೆಗೆ ಸರ್ಕಾರ ಶಾಲೆಗಳೀಗೆ ಬೇಕಾದ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕಿದೆ ಎಂದರು.
ದೇಶದಲ್ಲಿ ಎಲ್ಲಾ ಮಕ್ಕಳಿಗೂ ಪ್ರಾಥಮಿಕ ಶಿಕ್ಷಣ ಕಡ್ಡಾಯವೆಂದು ಸರ್ಕಾರ ಕಾನೂನು ರೂಪಿಸಿದ್ದು ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಿದೆ. ಪ್ರತಿಯೊಂದು ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡಲು ಇಲ್ಲಿನ ಶಿಕ್ಷಕರು ಮುಂದಾಗಬೇಕಿದೆ ಎಂದರು.
ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ದಾನಿಗಳು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸಹಾಯ ಮಾಡುವುದರಿಂದ ಈ ಶಾಲೆಗಳು ಮತೊಷ್ಟು ಅಭಿವೃದ್ಧಿಗೊಳಿಸುವುದು ಸಾಧ್ಯವಾಗುತ್ತದೆ ಎಂದು ಜಿಪಂ ಸದಸ್ಯೆ ಜಾನಮ್ಮ ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ, ಪ್ರೌಢಶಾಲೆ ಮುಖ್ಯಶಿಕ್ಷಕ ವೀರಭದ್ರಪ್ಪ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗಂಗಾಧರಯ್ಯ, ಗ್ರಾಮಸ್ಥರಾದ ರಂಗಯ್ಯ, ಸೀತಾರಾಮಯ್ಯ, ಶಿವಕುಮಾರ್, ರಾಮದಾಸ್, ಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ