ಪಟ್ಟಣದ ಬಸ್ ನಿಲ್ದಾಣ ಹಾಗೂ ಆಸ್ಪತ್ರೆಯ ಪಕ್ಕದ ರಸ್ತೆ ಬದಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರು ನಿಂತು ಪಾಚಿ ಬೆಳೆದು ಸೊಳ್ಳೆಗಳು ಉತ್ಪತ್ತಿಯ ತಾಣವಾಗಿದ್ದರೂ ಸಹ ಇದನ್ನು ತೆರವುಗೊಳಿಸುವಲ್ಲಿ ಇಲ್ಲಿನ ಸ್ಥಳೀಯ ಗ್ರಾ.ಪಂ.ಯವರು ಮೌನವಹಿಸಿದ್ದಾರೆ.
ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು ಚರಂಡಿಗಳಲ್ಲಿ ಕಸಕಡ್ಡಿ ತುಂಬಿ ನೀರಿ ಸರಿಯಾಗಿ ಹೋಗದೆ ರಸ್ತೆ ಮೇಲೆ ಹರಿದಿದ್ದು ರಸ್ತೆ ಬದಿಯ ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿವೆ. ಬಸ್ ನಿಲ್ದಾಣ ಹಾಗೂ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಬದಿಯಲ್ಲಿ ಕಳೆದ ಕೆಲ ದಿನಗಳಿಂದ ಈ ರೀತಿ ನೀರು ನಿಂತಿದ್ದು ಅದರಲ್ಲಿ ಕಸಕಡ್ಡಿ , ಪ್ಲಾಸ್ಟಿಕ್ ಸೇರಿದಂತೆ ಇತರೆ ವಸ್ತುಗಳು ಬಿದ್ದು ಪಾಚಿ ಬೆಳೆದು ಸೊಳ್ಳೆಗಳು ಮೊಟ್ಟೆಯಿಡುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಯಾಗಿ ಹಲವು ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ.
ಈಗಾಗಲೇ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಚಿಕುನ್ ಗುನ್ಯಾ ಹಾಗೂ ಜ್ವರ ಬಾಧಿಸುತ್ತಿದ್ದು, ಜನರು ತತ್ತರಿಸಿದ್ದಾರೆ. ಆ ಗ್ರಾಮಗಳಲ್ಲಿ ಸೊಳ್ಳೆಗಳ ಉತ್ಪತ್ತಿಯ ತಡೆಗಾಗಿ ಸ್ವಚ್ಚತಾ ಕಾರ್ಯ ಕೈಗೊಂಡಿರುವುದಲ್ಲದೆ, ಫಾಗಿಂಗ್ ಮಾಡಿಸಿದ್ದಾರೆ.ಅದರೂ ಸಹ ಹುಳಿಯಾರು ಪಟ್ಟಣದಲ್ಲಿ ಮಾತ್ರ ಇದುವರೆಗೂ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ, ಯಾವುದೇ ರೀತಿಯ ರೋಗಗಳು ಆವರಿಸುವ ಮುಂಚೆಯೇ ಇಲ್ಲಿನ ಸ್ಥಳೀಯ ಆಡಳಿತ ಎಚ್ಚೆತ್ತು ಕೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹುಳಿಯಾರಿನ ಸರ್ಕಾರಿ ಆಸ್ಪತ್ರೆಯ ತಿರುವಿನ ರಸ್ತೆ ಬದಿಯಲ್ಲಿ ಕಳೆದ ಕೆಲ ದಿನಗಳಿಂದ ನೀರುನಿಂತು ಪಾಚಿ ಬೆಳೆದು ಸೊಳ್ಳೆಗಳ ಉತ್ಪತ್ತಿ ತಾಣವಾಗಿರುವುದು. |
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ