ಪತ್ರಿಕೆಗಳಲ್ಲಿ ಪ್ರತಿನಿತ್ಯ ಅತ್ಯಾಚಾರದ ಸುದ್ದಿ ವರದಿಯಾಗುತ್ತಲೇ ಇದ್ದು ನಾಗರೀಕ ಸಮಾಜ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಈ ಘಟನೆಗಳ ಪುನರಾವರ್ತನೆ ನೈತಿಕ ಅಂಧಪತನಕ್ಕೆ ಸಾಕ್ಷಿಯಾಗಿದೆ ಎಂದು ತುಮಕೂರಿನ ಶ್ರೀರಾಮಕೃಷ್ಣಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ವಿಷಾದಿಸಿದರು.
ಪಟ್ಟಣದ ಶಾಲೆಯೊಂದರ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ನಂತರ ಪತ್ರಿಕೆಯವರೊಂದಿಗೆ ಮಾತನಾಡಿ ದಿನೇ ದಿನೆ ಅಪ್ರಾಪ್ತೆಯರ, ಶಾಲಾಮಕ್ಕಳ ಮೇಲೆ ಲೈಂಗಿಗ ದೌರ್ಜನ್ಯ ನಡೆಯುತ್ತಿದ್ದು, ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡಬೇಕೆ ಬೇಡವೇ ಎಂಬುದರ ಬಗ್ಗೆ ಚರ್ಚೆಯಾಗುತ್ತಿರುವ ಇಂದಿನ ದಿನದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಲೈಂಗಿಕ ಶಿಕ್ಷಣ ನೀಡುವ ಬದಲು ನೈತಿಕ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಭ್ಯಸಮಾಜ ನಿರ್ಮಾಣ ಮಾಡಬೇಕಿದೆ ಎಂದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ