ಪಟ್ಟಣದ ಥಿಯೋಸಾಫಿಕಲ್ ಸೊಸೈಟಿ ವತಿಯಿಂದ ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆ, ವಾಸವಿ, ಕನಕದಾಸ ಶಾಲೆ ಸೇರಿದಂತೆ ಪಟ್ಟಣದ ಕೆಲ ಶಾಲೆಗಳ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಥಿಯೋಸಾಫಿಕಲ್ ಸೊಸೈಟಿವತಿಯಿಂದ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು |
ಹುಳಿಯಾರಿನು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದ ಸೊಸೈಟಿಯ ಸೇವಾ ವಿಭಾಗದ ಅಧ್ಯಕ್ಷ ಎಂ.ಆರ್.ಗೋಪಾಲ್ ಮಾತನಾಡಿ, ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಹಣ ಖರ್ಚುಮಾಡುತ್ತಿದ್ದು, ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವ ಮೂಲಕ ಶಿಕ್ಷಣ ಪಡೆದು ತಮ್ಮ ಭವಿಷ್ಯ ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದರು. ಕೈಗಾರಿಕರಣದಿಂದಾಗಿ ಇಂದಿನ ದಿನಗಳಲ್ಲಿ ಪರಿಸರ ನಾಶವಾಗುತ್ತಿದ್ದು,ಮಳೆಯ ಪ್ರಮಾಣ ಕ್ಷೀಣಿಸುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕೀಡಾಗುವ ಪರಿಸ್ಥಿತಿ ಎದುರಾಗಲಿದ್ದು ಇನ್ನಾದರೂ ಎಚ್ಚೆತ್ತ ನಾವುಗಳು ಪರಿಸರ ಸಂರಕ್ಷಣೆಗೆ ಮುಂದಾಗ ಬೇಕಿದೆ ಎಂದರು.
ಕಾರ್ಯದರ್ಶಿ ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಜೊತೆಯಲ್ಲಿ ತ್ಯಾಗ,ಸೇವಾ ಮನೋಭಾವ ಮೈಗೊಡಿಸಿಕೊಂಡು ಇತರರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಬೇಕು ಎಂದರು. ವಿದ್ಯಾರ್ಥಿ ಜೀವನದಿಂದಲೇ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಉತ್ತಮ ಭವಿಷ್ಯರೂಪಿಸಿಕೊಳ್ಳುವ ಮೂಲಕ ಶಾಲೆಗೆ,ಪೋಷಕರಿಗೆ ಕೀರ್ತಿ ತನ್ನಿ ಎಂದು ಕಿವಿಮಾತು ಹೇಳಿದರು.
ಉಪಪ್ರಾಂಶುಪಾಲೆ ಡಿ.ಇಂದಿರಾ ಅಧ್ಯಕ್ಷತೆವಹಿಸಿದ್ದು, ಎಸ್ಡಿಎಂಸಿ ಉಪಾಧ್ಯಕ್ಷ ರಂಗನಕೆರೆ ಮಹೇಶ್,ದೈಹಿಕಶಿಕ್ಷಕ ಮನ್ಸೂರ್ ಅಹಮದ್ ಸೇರಿದಂತೆ ಸಹಶಿಕ್ಷಕರು,ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ